ಬೆಳಗಾವಿ : ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜಿಲ್ಲೆಯ ಯಮಕನಮರಡಿ ಕ್ಷೇತ್ರ ವ್ಯಾಪ್ತಿಯ ಹಳ್ಳಿಗಳಲ್ಲಿ ಕುಡಿಯುವ ನೀರು, ವಿದ್ಯುಚ್ಛಕ್ತಿ ಪೂರೈಕೆ, ವಿವಿಧ ಯೋಜನೆಗಳ ಅನುಷ್ಠಾನದಲ್ಲಿ ಆಗಿರುವ ಸಮಸ್ಯೆಗಳ ಕುರಿತು ಚರ್ಚಿಸಲು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅಧಿಕಾರಿಗಳ ಸಭೆ ನಡೆಸಿದರು.
ಸಭೆಯಲ್ಲಿ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ತಾಲೂಕು ಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದರು. ಈ ವೇಳೆ ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಪಿಡಿಒಗಳ ನಡುವೆ ಸಮನ್ವಯವಿಲ್ಲ. ಇದರಿಂದ ಯೋಜನೆಗಳ ಅನುಷ್ಠಾನ ಸರಿಯಾಗಿ ಆಗುತ್ತಿಲ್ಲ.
ಅನೇಕ ಹಳ್ಳಿಗಳಲ್ಲಿ ಕುಡಿಯುವ ನೀರು, ವಿದ್ಯುಚ್ಛಕ್ತಿ ಪೂರೈಕೆ ಸಮಸ್ಯೆಗಳಿವೆ. ಅನೇಕ ಫಲಾನುಭವಿಗಳಿಗೆ ಮನೆ ಮಂಜೂರಾಗಿದ್ದರೂ ಹಂಚಿಕೆಯಾಗುತ್ತಿಲ್ಲ ಎಂದು ಗ್ರಾಮ ಪಂಚಾಯತ್ ಸದಸ್ಯರು ದೂರಿದರು.
ವಿವಿಧ ಯೋಜನೆಗಳ ಅನುಷ್ಠಾನ, ಜನಪರ ಯೋಜನೆಗಳ ಪ್ರಗತಿಯ ಬಗ್ಗೆ ಮಾಹಿತಿ ಪಡೆದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಜನರಿಗೆ ತೊಂದರೆ ನೀಡದೆ ಎಲ್ಲಾ ಕೆಲಸಗಳನ್ನು ಸಕಾಲದಲ್ಲಿ ಪೂರೈಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ತಹಶೀಲ್ದಾರ್ ಆರ್ ಕೆ ಕುಲಕರ್ಣಿ, ಉಪವಿಭಾಗಾಧಿಕಾರಿ ಕರಲಿಂಗಣ್ಣವರ, ತಾಲೂಕು ಪಂಚಾಯತ್ ಉಪಾಧ್ಯಕ್ಷ ಸನದಿ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಅರುಣ್ ಕಟಾಂಬಳೆ ಸಭೆಯಲ್ಲಿ ಭಾಗಿಯಾಗಿದ್ದರು.
ಓದಿ: ರಮೇಶ್ ಜಾರಕಿಹೊಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ವಿಚಾರ ನನಗೆ ಗೊತ್ತಿಲ್ಲ: ಸತೀಶ್ ಜಾರಕಿಹೊಳಿ