ಬೆಳಗಾವಿ : ಗ್ರಾಮೀಣ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಬಲವಾಗಿದ್ದು, ಅವರ ನೇತೃತ್ವದಲ್ಲಿ ಹೆಚ್ಚು ಗ್ರಾಮ ಪಂಚಾಯತ್ ಸದಸ್ಯ ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಬೆಳಗಾವಿ ಗ್ರಾಮೀಣ ಕ್ಷೇತ್ರ ನನ್ನದು ಎಂಬ ರಮೇಶ್ ಜಾರಕಿಹೊಳಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ತಮ್ಮ ಕ್ಷೇತ್ರ ಗಟ್ಟಿ ಇದೆ. ಭದ್ರ ಇದೆ. ಮೇಲಾಗಿ ನಮ್ಮ ಹಿಡಿತದಲ್ಲಿದೆ ಅಂತಾ ಈಗಾಗಲೇ ರಮೇಶ್ ಜಾರಕಿಹೊಳಿ ಹೇಳಿಕೆಗೆ ಲಕ್ಷ್ಮಿ ಮೇಡಂ ಉತ್ತರ ಕೊಟ್ಟಿದ್ದಾರೆ. ಅದು ಒಂದು ಕ್ಷೇತ್ರಕ್ಕೆ ಸಂಬಂಧಿಸಿದ ಲೆಕ್ಕ, ಜಿಲ್ಲೆ ಮಟ್ಟದ್ದಾದರೇ ನಾವು ಹೇಳ್ತೀವಿ.
ಲಕ್ಷ್ಮಿ ಹೆಬ್ಬಾಳ್ಕರ್ ಪ್ರಬಲವಾಗಿದ್ದಾರೆ. ಹೆಚ್ಚು ಗ್ರಾಮ ಪಂಚಾಯತ್‌ಗಳಲ್ಲಿ ಗೆದ್ದಿದೀವಿ, ಅವರ ಹಿಡಿತದಲ್ಲಿ ಕ್ಷೇತ್ರ ಇದೆ ಎಂಬುವುದನ್ನು ಇದು ತೋರಿಸುತ್ತದೆ. ಇದರ ಜೊತೆಗೆ ಮೇಡಂ ನೇತೃತ್ವದಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಹೆಚ್ಚು ಗ್ರಾಪಂಗಳಲ್ಲಿ ಗೆಲುವು ಸಾಧಿಸಿದ್ದೇವೆ ಎಂದರು.
ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಸಾಮಾನ್ಯ ಕಾರ್ಯಕರ್ತನನ್ನು ನಿಲ್ಲಿಸಿ ಗೆಲ್ಲಿಸುವೆ ಎಂಬ ರಮೇಶ್ ಜಾರಕಿಹೊಳಿ ಹೇಳಿಕೆಗೆ ತಿರುಗೇಟು ನೀಡಿದ ಸತೀಶ್ ಜಾರಕಿಹೊಳಿ, ನಮ್ಮ ಅಭ್ಯರ್ಥಿ ಗಟ್ಟಿ ಇದ್ದಾರೆ. ನಮ್ಮ ಅಭ್ಯರ್ಥಿ ಸಾಮಾನ್ಯವೇನಲ್ಲ ಎಂದರು.
ಇದನ್ನೂ ಓದಿ: ಸಾವಿತ್ರಿಬಾಯಿ ಫುಲೆ ಬಗ್ಗೆ ಪ್ರಬಂಧ ಬರೆದರೆ ಕೆಪಿಸಿಸಿ ಕಾರ್ಯಾಧ್ಯಕ್ಷರ ಜೊತೆ ಹೆಲಿಕಾಪ್ಟರ್ ಏರುವ ಸುವರ್ಣಾವಕಾಶ