ETV Bharat / state

ಕೋವಿಡ್ ಹಿನ್ನೆಲೆ; ಸರಳವಾಗಿ ನಾಮಪತ್ರ ಸಲ್ಲಿಸಲು ಸತೀಶ್ ಜಾರಕಿಹೊಳಿ‌ ನಿರ್ಧಾರ - belgavi loksabha election

ದೇಶದಲ್ಲಿ ಕೊರೊನಾ 2ನೇ ಅಲೆಯ ಆತಂಕ ಎದುರಾಗಿರುವ ಹಿನ್ನೆಲೆ ಬೆಳಗಾವಿ ‌ಲೋಕಸಭೆ ಕ್ಷೇತ್ರದ ‌ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ‌ ಸರಳವಾಗಿ ನಾಮಪತ್ರ ಸಲ್ಲಿಸಲು ನಿರ್ಧರಿಸಿದ್ದಾರೆ.

sathish jarkiholi to fill nomination
ಸರಳವಾಗಿ ನಾಮಪತ್ರ ಸಲ್ಲಿಸಲು ಸತೀಶ್ ಜಾರಕಿಹೊಳಿ‌ ನಿರ್ಧಾರ
author img

By

Published : Mar 27, 2021, 1:51 PM IST

ಬೆಳಗಾವಿ: ದೇಶಾದ್ಯಂತ ಕೊರೊನಾ ವೈರಾಣುವಿನ ಎರಡನೇ ಅಲೆ ಕಾಣಿಸಿಕೊಳ್ಳುತ್ತಿರುವ ಕಾರಣ ಬೆಳಗಾವಿ ‌ಲೋಕಸಭೆ ಕ್ಷೇತ್ರದ ‌ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ‌ ಸರಳವಾಗಿ ನಾಮಪತ್ರ ಸಲ್ಲಿಸಲು ನಿರ್ಧರಿಸಿದ್ದಾರೆ.

sathish jarkiholi to fill nomination
ಸರಳವಾಗಿ ನಾಮಪತ್ರ ಸಲ್ಲಿಸಲು ಸತೀಶ್ ಜಾರಕಿಹೊಳಿ‌ ನಿರ್ಧಾರ

ಬೆಳಗಾವಿ ಕ್ಷೇತ್ರದ ಉಪ ಚುನಾವಣೆ ಏಪ್ರಿಲ್ 17ರಂದು ಮತದಾನ ನಡೆಯಲಿದೆ. ಮಾರ್ಚ್ 29ರಂದು ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ‌ ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಸುವಾಗ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರನ್ನು ಸೇರಿಸದೇ ಸರಳವಾಗಿ ನಾಮಪತ್ರ ಸಲ್ಲಿಸಲು ಸತೀಶ್ ಜಾರಕಿಹೊಳಿ‌ ನಿರ್ಧರಿಸಿದ್ದಾರೆ. ಈ ಸಂಬಂಧ ಪ್ರಕಟಣೆ ಹೊರಡಿಸಿ ಸತೀಶ್ ಜಾರಕಿಹೊಳಿ‌ ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ.

ಯಾವುದೇ ಆಡಂಬರ, ಮೆರವಣಿಗೆ ಇಲ್ಲದೇ ನಾಮಪತ್ರ ಸಲ್ಲಿಸಲಾಗುತ್ತಿದೆ. ಕೇವಲ ಪಕ್ಷದ ನಾಯಕರ ಜೊತೆಗೂಡಿ ಸರಳವಾಗಿ ನಾಮಪತ್ರ ಸಲ್ಲಿಸಲು ನಿರ್ಧರಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ಧರಾಮಯ್ಯ, ಪರಿಷತ್ ವಿಪಕ್ಷ ನಾಯಕ ಎಸ್.ಆರ್. ಪಾಟೀಲ್ ಹಾಗೂ ಹಾಲಿ, ಮಾಜಿ ಶಾಸಕರಷ್ಟೇ ನಾಮಪತ್ರ ಸಲ್ಲಿಸುವ ವೇಳೆ ಹಾಜರಿರಲಿದ್ದಾರೆ. ಕಾರ್ಯಕರ್ತರು ಇದನ್ನು ಗಮನಿಸಬೇಕು ಹಾಗೂ ನಾಮಪತ್ರ ಸಲ್ಲಿಸುವ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಸೇರಬಾರದು ಎಂದು ಮನವಿ ಮಾಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.