ETV Bharat / state

50 ಸಾವಿರ ಮತಗಳಿಂದ ಭರ್ಜರಿ ಗೆಲುವು ಸಾಧಿಸಿದ ಸತೀಶ್​ ಜಾರಕಿಹೊಳಿ

ಯಮಕನಮರಡಿ ಕ್ಷೇತ್ರದಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್​ ಜಾರಕಿಹೊಳಿ ಭರ್ಜರಿ ಗೆಲುವು ಸಾಧಿಸಿದ್ದಾರೆ.

sathish-jarkiholi-won-in-yamakanamaradi-constituency
50 ಸಾವಿರ ಮತಗಳಿಂದ ಭರ್ಜರಿ ಗೆಲುವು ಸಾಧಿಸಿದ ಸತೀಶ್​ ಜಾರಕಿಹೊಳಿ
author img

By

Published : May 13, 2023, 1:46 PM IST

ಬೆಳಗಾವಿ : ಕಾಂಗ್ರೆಸ್​ ಕಾರ್ಯಾಧ್ಯಕ್ಷ ಸತೀಶ್​ ಜಾರಕಿಹೊಳಿ ಯಮಕನಮರಡಿ ಕ್ಷೇತ್ರದಿಂದ ಭರ್ಜರಿ ಗೆಲವು ದಾಖಲಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಬಸವರಾಜ ಹೊಂಡ್ರಿ ವಿರುದ್ಧ ಸುಮಾರು 50 ಸಾವಿರ ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ.

ಸತೀಶ್​ ಜಾರಕಿಹೊಳಿ ಅವರು ಯಮಕನಮರಡಿ ಕ್ಷೇತ್ರದಿಂದ ಸತತವಾಗಿ ಗೆಲ್ಲುತ್ತಾ ಬಂದಿದ್ದಾರೆ. ಈ ಬಾರಿಯೂ ಇದೇ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದರು. ಇವರ ವಿರುದ್ಧ ಬಿಜೆಪಿಯ ಬಸವರಾಜ ಹೊಂಡ್ರಿ ಹಾಗೂ ಜೆಡಿಎಸ್​ನಿಂದ ಮಾರುತಿ ಮಲ್ಲಪ್ಪ ಅಷ್ಟಗಿ ಸರ್ಧಿಸಿದ್ದರು. ಜಾರಕಿಹೊಳಿ ಈ ಬಾರಿ 97863 ಮತಗಳನ್ನು ಪಡೆದಿದ್ದಾರೆ. ಬಿಜೆಪಿ ಹೊಂಡ್ರಿ 41810 ಮತಗಳನ್ನು ಪಡೆದರೆ ಜೆಡಿಎಸ್​ ಅಭ್ಯರ್ಥಿ ಮಲ್ಲಪ್ಪ 18912 ಮತಗಳನ್ನು ಪಡೆದಿದ್ದಾರೆ. ಯಮಕನಮರಡಿ ಕ್ಷೇತ್ರದಲ್ಲಿ ನಾಲ್ಕನೇ ಬಾರಿ ಅದೃಷ್ಟ ಪರೀಕ್ಷೆಗಳಿದಿದ್ದ ಸತೀಶ ಜಾರಕಿಹೊಳಿ ಐದನೇ ಬಾರಿ ಗೆದ್ದು ದಾಖಲೆ ಬರೆದಿದ್ದಾರೆ.

ಸರಳ ಸಜ್ಜನಿಕೆ ರಾಜಕಾರಣಿ ಸತೀಶ ಜಾರಕಿಹೊಳಿ : ಜಿಲ್ಲೆಯ ಪ್ರಭಾವಿ ರಾಜಕಾರಣಿ, ಮೌಢ್ಯದ ವಿರುದ್ಧ ಸಾಮಾಜಿಕ ಜಾಗೃತಿ ಮೂಡಿಸುತ್ತಾ ರಾಜ್ಯದಲ್ಲೆ ವಿಶಿಷ್ಟ ರಾಜಕಾರಣಿಯಾಗಿ ಗುರುತಿಸಿಕೊಂಡಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸದ್ಯ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರಾಗಿದ್ದಾರೆ. ಬುದ್ಧ, ಬಸವ, ಅಂಬೇಡ್ಕರ್ ತತ್ವಗಳಲ್ಲಿ ನಂಬಿಕೆ ಇಟ್ಟಿರುವ ಸತೀಶ ಜಾರಕಿಹೊಳಿ ಮಾನವ ಬಂಧುತ್ವ ವೇದಿಕೆ ಮೂಲಕ ರಾಜ್ಯಾದ್ಯಂತ ಸಾಮಾಜಿಕ ಬದಲಾವಣೆಗೆ ಶ್ರಮಿಸುತ್ತಿದ್ದಾರೆ. ಸದ್ಯ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

1962 ಜೂನ್ 1ರಂದು ಕರದಂಟು ನಾಡು ಗೋಕಾಕ್​ನಲ್ಲಿ ಲಕ್ಷ್ಮಣರಾವ್ ಮತ್ತು ಭೀಮವ್ವ ದಂಪತಿಗೆ ಜನಿಸಿದ ಸತೀಶ ಜಾರಕಿಹೊಳಿ, ಗೋಕಾಕ್ ಸರ್ಕಾರಿ ಪಿಯು ಕಾಲೇಜಿನಲ್ಲಿ ಎಸ್​ಎಸ್​ಎಲ್​ಸಿ ವ್ಯಾಸಂಗ ಮಾಡಿದರು. ಬಳಿಕ ಜೆಎಸ್ಎಸ್ ಕಲೆ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಪಿಯುಸಿ ಶಿಕ್ಷಣ ಪಡೆದಿದ್ದಾರೆ. ಸತೀಶ್​ ಮತ್ತು ಶಕುಂತಲಾ ದಂಪತಿ, ಪ್ರಿಯಾಂಕಾ ಮತ್ತು ರಾಹುಲ್ ಎಂಬ ಮಕ್ಕಳನ್ನು ಹೊಂದಿದ್ದಾರೆ. ಪರಿಶಿಷ್ಟ ಪಂಗಡದ ವಾಲ್ಮೀಕಿ ಸಮುದಾಯಕ್ಕೆ ಸೇರಿರುವ ಸತೀಶ ಜಾರಕಿಹೊಳಿ ಅವರು ಹಿಂದುಳಿದ ವರ್ಗದ ಭರವಸೆಯ ನಾಯಕರಾಗಿ ಗುರುತಿಸಿಕೊಂಡಿದ್ದಾರೆ.

ಸ್ವಂತ ಬಲದ ಮೇಲೆ ರಾಜಕಾರಣಕ್ಕೆ ಬಂದ ಸತೀಶ ಜಾರಕಿಹೊಳಿ, ಜನತಾ ದಳದಿಂದ 1998-2004ರವರೆಗೆ ಸ್ಥಳೀಯ ಸಂಸ್ಥೆಗಳ‌ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದರು. ಬಳಿಕ 2004-08ರವರೆಗೆ ಎರಡನೇ ಬಾರಿ‌ ವಿಧಾನ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿದರು. 2008ರಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಗೆ ಜೆಡಿಎಸ್ ತೊರೆದ ಸತೀಶ ಜಾರಕಿಹೊಳಿ, ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಬಳಿಕ ಕ್ಷೇತ್ರ ಪುನರ್ ವಿಂಗಡಣೆ ವೇಳೆ ಹೊಸದಾಗಿ ರಚನೆಯಾದ ಯಮಕನಮರಡಿ ಎಸ್ಟಿ‌‌ ಮೀಸಲು ಕ್ಷೇತ್ರದಿಂದ ಮೊದಲ ಬಾರಿ ಸ್ಪರ್ಧಿಸಿ ಗೆದ್ದರು. ನಂತರ 2013 ಮತ್ತು‌ 2018ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲೂ ಯಮಕನಮರಡಿ ಕ್ಷೇತ್ರದಿಂದ‌ ಗೆಲ್ಲುವ ಮೂಲಕ‌ ಹ್ಯಾಟ್ರಿಕ್ ವಿಜಯ ಸಾಧಿಸಿದ್ದರು.

2004-05ರಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಧರಂ ಸಿಂಗ್ ಸಂಪುಟದಲ್ಲಿ ಜವಳಿ ಖಾತೆ ಸಚಿವರಾಗಿ ಸೇವೆ ಸಲ್ಲಿಸಿದರು. ಅಲ್ಲದೇ 2013ರಿಂದ 2016ರವರೆಗೆ ಸಿದ್ದರಾಮಯ್ಯ ಸರ್ಕಾರದಲ್ಲಿ ಅಬಕಾರಿ ಮತ್ತು ಸಣ್ಣ ಕೈಗಾರಿಕೆ ಖಾತೆ ಸಚಿವರಾಗಿದ್ದರು. ನಂತರ 2018ರ ಡಿ.26ರಿಂದ ಜುಲೈ 23, 2019ರವರೆಗೆ ಕಾಂಗ್ರೆಸ್ - ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಅರಣ್ಯ ಮತ್ತು ಪರಿಸರ ಇಲಾಖೆ ಸಚಿವರಾಗಿಯೂ ಕಾರ್ಯ ನಿರ್ವಹಿಸಿದರು. 2021ರಿಂದ ಈವರೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಪಕ್ಷ ಸಂಘಟಿಸುತ್ತಿರುವ ಸತೀಶ ಜಾರಕಿಹೊಳಿ, ಕಾಂಗ್ರೆಸ್​ನ ಮಾಸ್ಟರ್ ಮೈಂಡ್ ಎಂದೇ ಜನಪ್ರಿಯರಾಗಿದ್ದಾರೆ.

ಸ್ವತಃ ಉದ್ಯಮಿಯಾಗಿರುವ ಸತೀಶ ಜಾರಕಿಹೊಳಿ, ಬೆಳಗಾಂ ಶುಗರ್ಸ್, ಸತೀಶ್​ ಶುಗರ್ಸ್ ಎಂಬ ಎರಡು ಸಕ್ಕರೆ ಕಾರ್ಖಾನೆಗಳನ್ನು ಹೊಂದಿದ್ದಾರೆ. ಪ್ರತಿ ವರ್ಷ ಸತೀಶ್​ ಶುಗರ್ಸ್ ಅವಾರ್ಡ್ ನಡೆಸುವ ಮೂಲಕ ಕ್ರೀಡಾ ಪಟುಗಳಿಗೆ ಪ್ರೋತ್ಸಾಹಿಸುತ್ತಿದ್ದಾರೆ. ಬಡ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ನೆರವಿನ ಹಸ್ತ ಚಾಚುವ ಕೆಲಸವನ್ನೂ ಮಾಡುತ್ತಿದ್ದಾರೆ.

ಇದನ್ನೂ ಓದಿ : ಸುಳ್ಯದಲ್ಲಿ ಭಾಗೀರಥಿ ಮುರುಳ್ಯಗೆ ಭರ್ಜರಿ ಗೆಲುವು: 35 ವರ್ಷಗಳ ನಂತರ ಸುಳ್ಯಕ್ಕೆ ಮಹಿಳಾ ಶಾಸಕಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.