ಬೆಳಗಾವಿ : ಮೈಸೂರಲ್ಲಿ ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ಸಂಬಂಧ ಗೃಹ ಸಚಿವರು ಬೇಜವಾಬ್ದಾರಿ ಹೇಳಿಕೆ ನೀಡಿರುವುದು ಸರಿಯಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.
ಗೋಕಾಕ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹ ಸಚಿವರ ಬಾಯಿಂದ ಈ ರೀತಿಯ ಮಾತು ಬರಬಾರದಿತ್ತು. ಅವರ ಹೇಳಿಕೆಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಜನರೇ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಗೃಹ ಸಚಿವರು ಅವರ ಸಾಮರ್ಥ್ಯದ ಬಗ್ಗೆ ಅವರೇ ಸವಾಲು ಎತ್ತಿದ್ದಾರೆ ಎಂದು ಹೇಳಿದರು.
ಅತ್ಯಾಚಾರ ಪ್ರಕರಣದಿಂದ ಮೈಸೂರು ಭಾಗದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಪ್ರಕರಣದ ಬಗ್ಗೆ ಪೊಲೀಸರು ಆದಷ್ಟು ಬೇಗ ತನಿಖೆ ಮಾಡಬೇಕು. ಸಂತ್ರಸ್ತೆಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಒತ್ತಾಯಿಸಿದರು.
ಪಾಲಿಕೆ ಚುನಾವಣೆಯಲ್ಲಿ ಎಲ್ಲ ಸಮುದಾಯಗಳಿಗೂ ಟಿಕೆಟ್ : ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಗೆ ಎಲ್ಲ ಸಮುದಾಯದ ಅಭ್ಯರ್ಥಿಗಳಿಗೂ ಟಿಕೆಟ್ ನೀಡಿದ್ದೇವೆ. ಪಕ್ಷ ಹಾಗೂ ಸ್ಥಳೀಯ ಮುಖಂಡರೊಂದಿಗೆ ಚರ್ಚಿಸಿದ್ದೇವೆ. ಆಯಾ ವಾರ್ಡ್ನಲ್ಲಿ ಹೆಚ್ಚು ವೋಟ್ ಇರುವ ಸಮುದಾಯ ಅಭ್ಯರ್ಥಿಗಳಿಗೆ ಟಿಕೆಟ್ ಕೊಟ್ಟಿದ್ದೇವೆ. ಬೇರೆ ಪಕ್ಷದವರ ಬಗ್ಗೆ ನಾವು ಮಾತನಾಡುವುದಿಲ್ಲ ಎಂದು ಸತೀಶ್ ಪ್ರತಿಕ್ರಿಯಿಸಿದರು.
ಓದಿ : ರಾಜ್ಯಕ್ಕೆ ಸುಭದ್ರತೆ ನೀಡಲು ಗೃಹ ಸಚಿವರಿಗೆ ಸಾಧ್ಯವಾಗುತ್ತಿಲ್ಲ: ಧ್ರುವನಾರಾಯಣ್