ETV Bharat / state

ಮೋದಿ ಸರ್ಕಾರ ಕೆಲವು ಶ್ರೀಮಂತರಿಗಾಗಿ ಕೆಲಸ ಮಾಡುತ್ತಿದೆ : ಸತೀಶ್​ ಜಾರಕಿಹೊಳಿ - ಬೆಳಗಾವಿ ಲೋಕಸಭಾ ಉಪಚುನಾವಣೆ

ಬೆಳಗಾವಿ ಉತ್ತರ ಕ್ಷೇತ್ರದಲ್ಲಿ ಮಾಜಿ ಶಾಸಕ ಫಿರೋಜ್ ಸೇಠ್ ಅವರು ಸಿದ್ದರಾಮಯ್ಯ ನೇತೃತ್ವದ ಸರ್ಕಾರವಿದ್ದಾಗ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದಾರೆ. ನಾನು ಕೂಡ ಉಸ್ತುವಾರಿ ಸಚಿವನಾಗಿದ್ದಾಗ ಫಿರೋಜ್ ಸೇಠ್​ರೊಂದಿಗೆ ಕ್ಷೇತ್ರದ ಅಭಿವೃದ್ಧಿಗೆ ಕೈಜೋಡಿಸಿದ್ದೆ..

Satish jarakiHoli barrage against central government
ಕೇಂದ್ರ ಸರ್ಕಾರದ ವಿರುದ್ಧ ಸತೀಶ್​ ಜಾರಕಿಹೊಳಿ ವಾಗ್ದಾಳಿ
author img

By

Published : Apr 5, 2021, 7:21 PM IST

ಬೆಳಗಾವಿ : ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬಡವರಿಗಾಗಿ ಏನನ್ನೂ ಮಾಡಿಲ್ಲ. ಕೆಲವೇ ಕೆಲವು ಶ್ರೀಮಂತರಿಗಾಗಿ ಕೆಲಸ ಮಾಡುತ್ತಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಸತೀಶ್​ ಜಾರಕಿಹೊಳಿ‌ ವಾಗ್ದಾಳಿ ನಡೆಸಿದ್ದಾರೆ.

ಕೇಂದ್ರ ಸರ್ಕಾರದ ವಿರುದ್ಧ ಸತೀಶ್​ ಜಾರಕಿಹೊಳಿ ವಾಗ್ದಾಳಿ..

ನಗರದ ಶ್ರೀನಗರದ ಸ್ಲಂ ಕಾಲೋನಿಯಲ್ಲಿ ಮತಯಾಚನೆ ವೇಳೆ ಮಾತನಾಡಿದ ಅವರು, "ನಾ ಖಾವೂಂಗಾ, ನಾ ಖಾನೆ ದೋಂಗಾ" ಎಂಬ ಅವರ ಮಾತಿನಂತೆಯೇ ಈಗ ಬಡವರ ಜೀವನ ದುಸ್ತರವಾಗಿಸಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಬಡವರಿಗೆ ಊಟಕ್ಕೂ ಅನಾನುಕೂಲವಾಗುವಂತ ಸ್ಥಿತಿ ನಿರ್ಮಾಣ ಮಾಡಿದ್ದಾರೆ.

ಇಂದಿರಾಗಾಂಧಿ ಅವರು ಪ್ರಧಾನಿಯಾಗಿದ್ದಾಗ ಜಾರಿಗೊಳಿಸಿದ್ದ ಅನೇಕ ಯೋಜನೆಗಳಿಂದ ಇಂದಿಗೂ ಬಡವರಿಗೆ ಅನುಕೂಲವಾಗುತ್ತಿದೆ. ಬೆಳಗಾವಿ ಉತ್ತರ ಕ್ಷೇತ್ರದಲ್ಲಿ ಮಾಜಿ ಶಾಸಕ ಫಿರೋಜ್ ಸೇಠ್ ಅವರು ಸಿದ್ದರಾಮಯ್ಯ ನೇತೃತ್ವದ ಸರ್ಕಾರವಿದ್ದಾಗ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದಾರೆ. ನಾನು ಕೂಡ ಉಸ್ತುವಾರಿ ಸಚಿವನಾಗಿದ್ದಾಗ ಫಿರೋಜ್ ಸೇಠ್​ರೊಂದಿಗೆ ಕ್ಷೇತ್ರದ ಅಭಿವೃದ್ಧಿಗೆ ಕೈಜೋಡಿಸಿದ್ದೆ.

ಕಣಬರಗಿ ಹಾಗೂ ಶ್ರೀನಗರದಲ್ಲಿ ನಮ್ಮ ಸರ್ಕಾರದಿಂದ ಬಡವರಿಗೆ ಮನೆಗಳನ್ನು ನಿರ್ಮಾಣ ಮಾಡಿಕೊಡಲಾಗಿತ್ತು. ಮುಂದಿನ ದಿನಗಳಲ್ಲಿ ಶ್ರೀನಗರದ ಸ್ಲಂ ಕಾಲೋನಿಯ ಜನರಿಗೂ ಮನೆಗಳನ್ನು ನಿರ್ಮಿಸಿಕೊಡಲಾಗುವುದು ಎಂದು ಭರವಸೆ ನೀಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.