ETV Bharat / state

ಸಚಿವೆ ಜೊಲ್ಲೆ ಹಾಗೂ ಈರಣ್ಣ ಕಡಾಡಿ ಭಾವಚಿತ್ರಕ್ಕೆ ಸತೀಶ್​ ಜಾರಕಿಹೊಳಿ ಅಭಿಮಾನಿಗಳಿಂದ ಬೆಂಕಿ - satish jarakiholi followers set fire

ನಿಪ್ಪಾಣಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಹಿಂದೂ ಧರ್ಮ ಬಗ್ಗೆ ವಿವಾದಾತ್ಮಕ ಹೇಳಿಕೆ ಕುರಿತು ಸತೀಶ್ ಜಾರಕಿಹೊಳಿ ಅವರನ್ನು ಬೆಂಬಲಿಸಿ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಅವರ ಭಾವಚಿತ್ರ ಸುಟ್ಟು ಸತೀಶ್ ಜಾರಕಿಹೊಳಿ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Minister Jolle and Kadadi Bhav film set on fire and anger
ಸಚಿವೆ ಜೊಲ್ಲೆ ಹಾಗೂ ಕಡಾಡಿ ಭಾವ ಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ
author img

By

Published : Nov 14, 2022, 3:53 PM IST

ಅಥಣಿ (ಬೆಳಗಾವಿ): ಸಚಿವೆ ಶಶಿಕಲಾ ಜೊಲ್ಲೆ ಹಾಗೂ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರ ಭಾವಚಿತ್ರ ಸುಟ್ಟು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ನಿಪ್ಪಾಣಿಯಲ್ಲಿ ಸತೀಶ್ ಜಾರಕಿಹೊಳಿ ಅವರು ಹಿಂದೂ ಧರ್ಮ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ದೇಶಾದ್ಯಂತ ಆಕ್ರೋಶ ಹೊರಹಾಕಲಾಗಿತ್ತು. ಆದ್ರೆ ಸತೀಶ್ ಜಾರಕಿಹೊಳಿ ಅವರ ಪರ ರಾಯಭಾಗ ಪಟ್ಟಣದಲ್ಲಿ ಬೆಂಬಲಿಗರು ಹಾಗೂ ಹಲವು ದಲಿತ ಸಂಘಟನೆಗಳ ಕಾರ್ಯಕರ್ತರು ಸಚಿವೆ ಶಶಿಕಲಾ ಜೊಲ್ಲೆ ಹಾಗೂ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರ ಭಾವಚಿತ್ರ ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಂತರ ಸತೀಶ್ ಜಾರಕಿಹೊಳಿ ಅವರ ಭಾವಚಿತ್ರಕ್ಕೆ ಕ್ಷೀರಾಭಿಷೇಕ ಮಾಡಿ ಅಂಬೇಡ್ಕರ್ ವೃತ್ತದಿಂದ ಭಾವಜಿ ಸರ್ಕಲ್​ರೆಗೆ ಪ್ರತಿಭಟನಾಕಾರರು ಪಾದಯಾತ್ರೆ ಮಾಡುತ್ತ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ವಿಜಯಪುರ ಶಾಸಕ ಬಸನಗೌಡ ಯತ್ನಾಳ್ ಹಾಗೂ ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಕಿಡಿಕಾಡಿದರು. ಸತೀಶ್ ಜಾರಕಿಹೊಳಿ ಅವರನ್ನು ಬೆಂಬಲಿಸಿ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡುತ್ತಿದ್ದೇವೆ ಎಂದು ವಕೀಲ ಹಾಗೂ ಜಾರಕಿಹೊಳಿ ಬೆಂಬಲಿಗ ರಾಜು ಶಿರಗಾವಿ ತಿಳಿಸಿದರು.

ಇದನ್ನೂಓದಿ: ಹಿಂದೂ ಧರ್ಮದ ಬಗ್ಗೆ ಕಾಂಗ್ರೆಸ್​ಗೆ ನಿಜವಾದ ಬದ್ಧತೆ ಇದ್ದರೆ ಸತೀಶ್ ಜಾರಕಿಹೊಳಿ ಮೇಲೆ ಕ್ರಮಕೈಗೊಳ್ಳಲಿ: ಪ್ರಹ್ಲಾದ್ ಜೋಶಿ..

ETV Bharat Logo

Copyright © 2025 Ushodaya Enterprises Pvt. Ltd., All Rights Reserved.