ಬೆಳಗಾವಿ: ಜಿಲ್ಲೆಯ ಗೋಕಾಕ್ ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು ನಾಯಕ್ ಗಲ್ಲಿಯಲ್ಲಿ ಬೆಳಿಗ್ಗೆ ಆರು ಜನರಿಗೆ ನಾಯಿ ಕಡಿದು ಗಂಭೀರವಾಗಿ ಗಾಯಗೊಳಿಸಿದೆ. ಗಾಯಾಳುಗಳು ಗೋಕಾಕ್ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಆಸ್ಪತ್ರೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಭೇಟಿ ನೀಡಿ, ಗಾಯಾಳುಗಳ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದರು. ನಂತರ ಗುಣಮಟ್ಟದ ಚಿಕಿತ್ಸೆ ಒದಗಿಸುವಂತೆ ವೈದ್ಯರಿಗೆ ಸಲಹೆ ನೀಡಿದರು.
ಇದನ್ನೂ ಓದಿ: ಪುಣೆ - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ