ETV Bharat / state

ರಮೇಶ್ ಜಾರಕಿಹೊಳಿ‌ ಕಲ್ಲು ಹೊಡೆಯಬಾರದೆಂದು ಚಾಕೊಲೇಟ್ ತಿನ್ನಿಸುತ್ತಿದ್ದಾರೆ: ಸತೀಶ ಜಾರಕಿಹೊಳಿ‌

ಮಂತ್ರಿಗಿರಿಗಾಗಿ ಕಾಯ್ದು ಕುಳಿತ ರಮೇಶ ಜಾರಕಿಹೊಳಿ‌ಗೆ ಬಿಜೆಪಿ ನಾಯಕರು ಚಾಕಲೇಟ್ ತಿನ್ನಿಸುತ್ತಿದ್ದಾರೆ. ರಮೇಶ್ ಜಾರಕಿಹೊಳಿ‌ ಕಲ್ಲು ಹೊಡೆಯಬಾರದು ಎಂದು ಈ ಕೆಲಸ ಮಾಡುತ್ತಿದ್ದಾರೆ. ಯಡಿಯೂರಪ್ಪನವರಿಗೆ ನೇತೃತ್ವ ಕೊಡ್ತಿಲ್ಲ. ಇನ್ನೂ ರಮೇಶ ಜಾರಕಿಹೊಳಿ ಯಾವ ಲೆಕ್ಕ? ಎಂದು ಸಹೋದರ ಸತೀಶ ಜಾರಕಿಹೊಳಿ‌ ವ್ಯಂಗ್ಯವಾಡಿದರು.

Satish Jarakiholi
ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ‌ ವ್ಯಂಗ್ಯ
author img

By

Published : Oct 5, 2022, 2:48 PM IST

ಬೆಳಗಾವಿ: ಹಿಂದಿನ ಸರ್ಕಾರ ಕೆಡವಿದ ರಮೇಶ ಜಾರಕಿಹೊಳಿಗೆ ಈ ಸರ್ಕಾರವನ್ನ ಕೆಡುವುದು ದೊಡ್ಡ ಮಾತಲ್ಲ. ರಮೇಶ ಜಾರಕಿಹೊಳಿ ಸಿಟ್ಟಾದ್ರೆ, ಏನಾದರೂ ಮಾಡಬಹುದು ಅನೋ ಭಯ ಬಿಜೆಪಿ ನಾಯಕರಿಗೆ ಇದೆ. ಹೀಗಾಗಿ ಮಂತ್ರಿಗಾಗಿ ಕಾಯ್ದು ಕುಳಿತ ರಮೇಶ್ ಜಾರಕಿಹೊಳಿ‌ ಕಲ್ಲು ಹೊಡೆಯಬಾರದು ಎಂದು ಚಾಕೊಲೇಟ್ ತಿನ್ನಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ‌ ವ್ಯಂಗ್ಯವಾಡಿದರು.

ರಮೇಶ್​ ಜಾರಕಿಹೊಳಿಗೆ ಚಾಕಲೇಟ್​ ತಿನ್ನಿಸುತ್ತಿದ್ದಾರೆ: ಮುಂದಿನ ಚುನಾವಣೆಯಲ್ಲಿ ಬೆಳಗಾವಿ ಜಿಲ್ಲೆಗೆ ರಮೇಶ ಜಾತಕಿಹೊಳಿ ನೇತೃತ್ವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಪಕ್ಷ ಕಟ್ಟಿದ ಯಡಿಯೂರಪ್ಪನನ್ನೇ ಸೈಡ್ ಲೈನ್ ಮಾಡಿದ್ದಾರೆ. ಯಡಿಯೂರಪ್ಪ ಅವರಿಗೆ ನೇತೃತ್ವ ಕೊಡ್ತಿಲ್ಲ. ಇನ್ನೂ ರಮೇಶ ಜಾರಕಿಹೊಳಿ ಯಾವ ಲೆಕ್ಕ?. ಬಿಜೆಪಿ ನಾಯಕರು ರಮೇಶ ಜಾರಕಿಹೋಳಿ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿದ್ದಾರೆ. ಮಂತ್ರಿಗಾಗಿ ಕಾಯ್ದು ಕುಳಿತ ರಮೇಶ್ ಕಲ್ಲು ಎಸೆಯಬಾರದು ಅಂತಾ ಚಾಕೊಲೇಟ್ ತಿನ್ನಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ‌ ವ್ಯಂಗ್ಯ

ಈ ಸರ್ಕಾರ ಕೆಡುವುದು ದೊಡ್ಡ ಮಾತಲ್ಲ: ರಮೇಶ ಜಾರಕಿಹೊಳಿ ಸಿಟ್ಟಾದ್ರೆ, ಏನಾದರೂ ಮಾಡಬಹುದು ಎಂಬ ಭಯ ಬಿಜೆಪಿ ನಾಯಕರಿಗೆ ಇದೆ. ಹಿಂದಿನ ಸರ್ಕಾರ ಕೆಡವಿದ ರಮೇಶ ಜಾರಕಿಹೊಳಿಗೆ, ಈ ಸರ್ಕಾರ ಕೆಡುವುದು ದೊಡ್ಡ ಮಾತಲ್ಲ. ಒಂದು ಭಾರಿ ಬೈಪಾಸ್ ಸರ್ಜರಿ ಮಾಡಿದವನಿಗೆ ಎರಡನೇ ಬೈಪಾಸ್ ಸರ್ಜರಿ ಮಾಡೋದು ದೊಡ್ಡ ಕೆಲಸವಲ್ಲ. ಹಾಗಾಗಿ ರಮೇಶ ಜಾರಕಿಹೊಳಿಗೆ ತಿಂಗಳಿಗೊಮ್ಮೆ ಚಾಕೊಲೇಟ್ ನೀಡುವ ಕೆಲಸ ಮಾಡ್ತಿದ್ದಾರೆ ಎಂದು ಹೇಳಿದರು.

ಸಮಾಧಾನಕರ ಬಹುಮಾನ ಕೊಡ್ತಾರೆ: ಸಿಎಂ ಈಗಾಗಲೇ ಸಚಿವ ಸಂಪುಟದ ವಿಸ್ತರಣೆ ಬಗ್ಗೆ ಮೂರು ಭಾರಿ ಮಾತನಾಡಿದ್ದಾರೆ. ಈಗ ಮತ್ತೆ ಈ ಕುರಿತಂತೆ ಬಿಜೆಪಿ ಹೈಕಮಾಂಡ್ ಭೇಟಿಗೆ ದೆಹಲಿಗೆ ಹೊರಟಿದ್ದಾರೆ. ಆದರೆ ಬಿಜೆಪಿ ಹೈಕಮಾಂಡ್ ಗುಜರಾತ್ ಚುನಾವಣೆಯಲ್ಲಿ ಬ್ಯೂಸಿ ಆಗಿದೆ. ರಮೇಶ ಜಾರಕಿಹೊಳಿ ನೇತೃತ್ವದಲ್ಲಿ ಬೆಳಗಾವಿ ಚುನಾವಣಾ ನಡೆಸುವ ಪ್ರಶ್ನೆಯೇ ಇಲ್ಲ.

ಬಿಎಸ್​ವೈ ನಮ್ಮ ನಾಯಕ ಅಂತಾ ಒಪ್ಪಿಕೊಂಡಿಲ್ಲ. ಇನ್ನೂ ರಮೇಶ ಜಾರಕಿಹೊಳಿ ಯಾವ ಲೆಕ್ಕ?‌. ರಮೇಶ ಜಾರಕಿಹೊಳಿಗೆ ಆಗಾಗ ಏನಿದ್ದರೂ ಸಮಾಧಾನಕರ ಬಹುಮಾನ ಕೊಡ್ತಾರೆ‌. ಹೀಗಾಗಿ ರಮೇಶಗೆ ಬಂದಾಗೊಮ್ಮೆ ಚಾಕೊಲೇಟ್ ಕೊಟ್ಟು ಹೋಗ್ತಾರೆ ಎಂದು ಸತೀಶ ಜಾರಕಿಹೊಳಿ‌ ಕುಟುಕಿದರು.

ಮೀಸಲಾತಿ ಸಂಬಂಧ ಘೋಷಣೆ ಸಾಧ್ಯತೆ: ಎಸ್ ಟಿ ಮೀಸಲಾತಿ ಜಾರಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಅ.7ರಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ಕರೆಯಲಾಗಿದೆ. ಅಂದು ಸಿಎಂ ಬಸವರಾಜ ಬೊಮ್ಮಾಯಿ, ಸರ್ವಪಕ್ಷಗಳ ನಾಯಕರು ಭಾಗವಹಿಸಲಿದ್ದಾರೆ. ಸಭೆ ಬಳಿಕ ಸಿಎಂ ಮೀಸಲಾತಿ ಸಂಬಂಧ ಕೆಲ ಘೋಷಣೆ ಮಾಡುವ ಸಾಧ್ಯತೆ ಇದೆ.

ಆದರೆ, ಇದರ ಬಗ್ಗೆ ನನಗೆ ಕೆಲ ಆತಂಕವಿದೆ. ಅವರು ಪೂರ್ಣವಾಗಿ ನಮಗೆ ನ್ಯಾಯ ಕೊಡಿಸಲು ಆಗೋದಿಲ್ಲ. ಅವರು ಅಡ್ಡಗೋಡೆಯ ಮೇಲೆ ದೀಪ ಇಟ್ಟಂತೆ ಮಾತನಾಡ್ತಾರೆ‌. ಘೋಷಣೆ ಮಾಡಿದ್ದಂತೆ ಮಾಡಿ ಕಾನೂನಿನಲ್ಲಿ ತೊಡಕು ಬರುವಂತೆ ಮಾಡ್ತಾರೆ ಎಂಬ ಆತಂಕವಿದೆ ಎಂದರು.

ಇದನ್ನೂ ಓದಿ: ರಮೇಶ್ ಜಾರಕಿಹೊಳಿಗೆ ಸರ್ಕಾರ ಉರುಳಿಸುವ ಶಕ್ತಿ ಇದೆ.. ಸತೀಶ್ ಜಾರಕಿಹೊಳಿ ಹೇಳಿಕೆ..!

ಇನ್ನೂ ಸಿಎಂ ಸರ್ವಪಕ್ಷ ಸಭೆಗೂ ಮುನ್ನ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಎಸ್ಸಿ, ಎಸ್ಟಿ, ಶಾಸಕರ ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ಸಿದ್ದರಾಮಯ್ಯಗೆ ಮೀಸಲಾತಿ ಯಾವ ರೀತಿ ಇರಬೇಕು ಅನೋದನ್ನ ಹೇಳುತ್ತೇನೆ. ವಾಲ್ಮೀಕಿ ಜಯಂತಿ ಪೂರ್ವದಲ್ಲಿ ಮೀಸಲು‌ ನೀಡಲು ಸಮುದಾಯದ ಬೇಡಿಕೆ ಇದೆ. ಮೀಸಲಾತಿ ಸಿಗದ ಹಿನ್ನೆಲೆಯಲ್ಲಿ ವಾಲ್ಮೀಕಿ ಸಮುದಾಯದವರು ವಾಲ್ಮೀಕಿ ಜಯಂತಿಗೆ ಬಹಿಷ್ಕಾರ ಹಾಕಿದ್ದಾರೆ ಎಂದು ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.