ಬೆಳಗಾವಿ : ಕಾಳ ಭೈರವನಾಥ್ ದೇವಸ್ಥಾನದ ಜಮೀನು ವಿಚಾರದಲ್ಲಿ ಯಮಕನಮರಡಿ ಕ್ಷೇತ್ರ ವ್ಯಾಪ್ತಿಯ ಗೌಂಡವಾಡ ಗ್ರಾಮದಲ್ಲಿ ಎರಡು ದಿನಗಳ ಹಿಂದೆ ಗಲಾಟೆ ನಡೆದಿದೆ. ಇಂದು ಸ್ಥಳಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಮತ್ತು ಶಾಸಕ ಸತೀಶ್ ಜಾರಕಿಹೊಳಿ ಭೇಟಿ ನೀಡಿ ಘಟನೆ ಬಗ್ಗೆ ಮಾಹಿತಿ ಪಡೆದರು.
ದೇವಸ್ಥಾನ ಜಮೀನು ವಿಚಾರವಾಗಿ ವ್ಯಕ್ತಿಯೊಬ್ಬನ ಮೇಲೆ ಐವರ ಗುಂಪು ಮಾರಣಾಂತಿಕ ಹಲ್ಲೆ ನಡೆಸಿತ್ತು. ಇದರಿಂದಾಗಿ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಕುರಿತು ಗ್ರಾಮದ ಮುಖಂಡರೊಂದಿಗೆ ಶಾಸಕ ಸತೀಶ್ ಜಾರಕಿಹೊಳಿ ಚರ್ಚೆ ನಡೆಸಿದ್ದು, ಗಲಾಟೆ ನಡೆಸದಂತೆ ಎರಡು ಕುಟುಂಬಗಳಿಗೆ ಎಚ್ಚರಿಕೆ ನೀಡಿದ್ದರು. ಅಲ್ಲದೆ ಶೀಘ್ರದಲ್ಲಿ ವಿವಾದವನ್ನು ಅಂತ್ಯಗೊಳಿಸಲಾಗುವುದು ಎಂದು ಭರವಸೆ ನೀಡಿದರು.
ಇದನ್ನೂ ಓದಿ : ದೇವಸ್ಥಾನ ನಿರ್ಮಾಣಕ್ಕೆ ಮೀಸಲಿಟ್ಟ ಜಾಗ ಮಾರಲು ಹುನ್ನಾರ: ಗೌಂಡವಾಡ ಗ್ರಾಮಸ್ಥರಿಂದ ಆರೋಪ
ಈ ಸಂದರ್ಭದಲ್ಲಿ ಜಿಪಂ ಉಪಾಧ್ಯಕ್ಷ ಅರುಣ ಕಟಾಂಬಳೆ, ಜಿಪಂ ಸದಸ್ಯ ಸಿದ್ದು ಸುಣಗಾರ, ಕೆಪಿಸಿಸಿ ಸದಸ್ಯ ಮಲಗೌಡ ಪಾಟೀಲ್, ಚೇತನ ಕಾಂಬಳೆ ಇದ್ದರು.