ಚಿಕ್ಕೋಡಿ: ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಮುಖಂಡರಲ್ಲಿನ ಗೊಂದಲ, ಮಹಾರಾಷ್ಟ್ರ ಏಕೀಕರಣ ಸಮಿತಿಯ ಅತೀಯಾದ ಆತ್ಮವಿಶ್ವಾಸವೆ ಬಿಜೆಪಿಗೆ ಲಾಭವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.
ಹುಕ್ಕೇರಿ ತಾಲೂಕು ಪಂಚಾಯಿತಿ ಸಂಭಾಗಣದಲ್ಲಿ ನಡೆದ ಕೆಡಿಪಿ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಾಲಿಕೆ ಚುನಾವಣೆಯಲ್ಲಿ ಏನು ಮ್ಯಾಜಿಕ್ ಆಗಿಲ್ಲ. ಕಾಂಗ್ರೆಸ್ ಪಕ್ಷದಲ್ಲಿನ ಹಲವರು ಅಭ್ಯರ್ಥಿಗಳನ್ನು ಸೋಲಿಸಲು ಪ್ರಯತ್ನಿಸಿದರು. ಅಲ್ಲದೆ ಎಂಇಎಸ್ ಅತೀಯಾದ ಆತ್ಮವಿಶ್ವಾಸ ಬಿಜೆಪಿ ಹೆಚ್ಚಿನ ಸ್ಥಾನ ಗೆಲ್ಲಲು ಸಾಧ್ಯವಾಗಿದೆ ಎಂದರು.
ಪ್ರತಿ ಮೂರು ತಿಂಗಳಿಗೊಮ್ಮೆ ನಡೆಸುವ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು. ಸಭೆಯಲ್ಲಿ ಹೊಸ ಕಾಮಗಾರಿಗಳು ಹಾಗೂ ಹಲವಾರು ಸಮಸ್ಯೆಗಳನ್ನು ಇತ್ಯರ್ಥ ಮಾಡುವ ಪ್ರಯತ್ನ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಇನ್ನು ಕೇವಲ ಐದು ರೂಪಾಯಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಸಿ ದೀಪಾವಳಿ ಉಡುಗೊರೆ ಎಂದು ಮೋದಿ ಸರ್ಕಾರ ಹೇಳುತ್ತಿದೆ. ನೂರಾರು ರೂಪಾಯಿ ಹೆಚ್ಚಿಸಿ ಕೇವಲ 5 ರೂಪಾಯಿ ಇಳಿಸಿ ಪ್ರಚಾರ ಗಿಟ್ಟಿಸಿಕೊಳ್ಳಬಾರದು. ಕಾಂಗ್ರೆಸ್ ಸರ್ಕಾರ ಇದ್ದಾಗ ಇದ್ದ ಬೆಲೆ ನೀಡಬೇಕು ಎಂದು ಆಗ್ರಹಿಸಿದರು.
ಜನತೆಗೆ ದೀಪಾವಳಿ ಶುಭ ಕೋರಿದ ಸತೀಶ್:
ತದನಂತರ ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ ಜಾರಕಿಹೊಳಿ, ಈ ವರ್ಷ ರೈತರಿಗೆ ಒಳ್ಳೆಯ ಮಳೆ, ಬೆಳೆ ಆಗಲಿ. ಕೊರೊನಾದಿಂದ ಪ್ರತಿಯೊಬ್ಬರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಜನರಿಗೆ ಆಗಿರುವ ಕಷ್ಟಗಳು ಸರಿದು ಸಂತೋಷದಿಂದ ಜೀವನ ನಡೆಸುವಂತಾಗಲಿ ಎಂದು ಹಾರೈಸಿದರು.
ಇದನ್ನೂ ಓದಿ: 14 ವಿಧಾನಸಭೆ, 2 ಲೋಕಸಭಾ ಉಪ ಚುನಾವಣೆಗಳಲ್ಲಿ ಸೋತ ನಂತ್ರ ತೈಲ ಬೆಲೆ ಇಳಿಕೆ: ಕಾಂಗ್ರೆಸ್ ಆರೋಪ