ಚಿಕ್ಕೋಡಿ: ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಾಗ ದೇಶದಲ್ಲಿ ಆಹಾರ ಅಭದ್ರತೆ ಉಂಟಾಗಿತ್ತು ಎಂದು ನಾವು ಕೇಳಿದ್ದೆವು. ಆದರೆ ಈಗ ನೋಡುತ್ತಿದ್ದೇವೆ ಎಂದು ಶಾಸಕ ಸತೀಶ್ ಜಾರಕಿಹೋಳಿ ಬಿಜೆಪಿ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ಕೇಂದ್ರ ಸರ್ಕಾರ ಪೂರ್ವ ತಯಾರಿ ಇಲ್ಲದೆ ಲಾಕ್ಡೌನ್ ಜಾರಿ ಮಾಡಿದ್ದರಿಂದ ವಲಸೆ ಕಾರ್ಮಿಕರ ಹಸಿವಿನ ನರಳಾಟ ನೋಡುವ ದೌರ್ಭಾಗ್ಯ ನಮ್ಮದಾಗಿದೆ ಎಂದು ಟ್ವೀಟ್ ಮಾಡುವ ಮುಖಾಂತರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
-
ಕರ್ನಾಟಕದ ರಾಜ್ಯದ ಮೂಲೆ ಮೂಲೆಗಳಲ್ಲಿ ಸಿಲುಕಿಕೊಂಡು ಕಾರ್ಮಿಕರು ತಮ್ಮ ಊರುಗಳಿಗೆ ವಾಪಸ್ಸಾಗುತ್ತಿದ್ದಾರೆ. ಆದರೆ ರಾಜ್ಯದಲ್ಲಿ ಸಿಲುಕಿಕೊಂಡ ಹೊರ ರಾಜ್ಯದ ಕಾರ್ಮಿಕರ ಗೋಳು ಕೇಳುವವರೇ ಇಲ್ಲದಂತಾಗಿದೆ, ಇವರೆಡೆಗೆ ಗಮನ ಕೊಡದ ಬಿಜೆಪಿ ಸರ್ಕಾರ #ಕಾರ್ಮಿಕರ_ಕಂಬನಿ#EconomicTsunami.
— Satish Jarkiholi (@JarkiholiSatish) May 4, 2020 " class="align-text-top noRightClick twitterSection" data="
">ಕರ್ನಾಟಕದ ರಾಜ್ಯದ ಮೂಲೆ ಮೂಲೆಗಳಲ್ಲಿ ಸಿಲುಕಿಕೊಂಡು ಕಾರ್ಮಿಕರು ತಮ್ಮ ಊರುಗಳಿಗೆ ವಾಪಸ್ಸಾಗುತ್ತಿದ್ದಾರೆ. ಆದರೆ ರಾಜ್ಯದಲ್ಲಿ ಸಿಲುಕಿಕೊಂಡ ಹೊರ ರಾಜ್ಯದ ಕಾರ್ಮಿಕರ ಗೋಳು ಕೇಳುವವರೇ ಇಲ್ಲದಂತಾಗಿದೆ, ಇವರೆಡೆಗೆ ಗಮನ ಕೊಡದ ಬಿಜೆಪಿ ಸರ್ಕಾರ #ಕಾರ್ಮಿಕರ_ಕಂಬನಿ#EconomicTsunami.
— Satish Jarkiholi (@JarkiholiSatish) May 4, 2020ಕರ್ನಾಟಕದ ರಾಜ್ಯದ ಮೂಲೆ ಮೂಲೆಗಳಲ್ಲಿ ಸಿಲುಕಿಕೊಂಡು ಕಾರ್ಮಿಕರು ತಮ್ಮ ಊರುಗಳಿಗೆ ವಾಪಸ್ಸಾಗುತ್ತಿದ್ದಾರೆ. ಆದರೆ ರಾಜ್ಯದಲ್ಲಿ ಸಿಲುಕಿಕೊಂಡ ಹೊರ ರಾಜ್ಯದ ಕಾರ್ಮಿಕರ ಗೋಳು ಕೇಳುವವರೇ ಇಲ್ಲದಂತಾಗಿದೆ, ಇವರೆಡೆಗೆ ಗಮನ ಕೊಡದ ಬಿಜೆಪಿ ಸರ್ಕಾರ #ಕಾರ್ಮಿಕರ_ಕಂಬನಿ#EconomicTsunami.
— Satish Jarkiholi (@JarkiholiSatish) May 4, 2020
ಸಂಕಷ್ಟಕ್ಕೆ ಸಿಲುಕಿರುವ ವಲಸೆ ಕಾರ್ಮಿಕರ ಬಗ್ಗೆ ಬರೆದುಕೊಂಡಿರುವ ಅವರು, ದೇಶದ ಮೂಲೆ ಮೂಲೆಯಲ್ಲಿ ನೆಲೆಸಿರುವ ಕರ್ನಾಟಕ ಕೂಲಿ ಕಾರ್ಮಿಕರು ನಮ್ಮ ರಾಜ್ಯಕ್ಕೆ ಮರಳುತ್ತಿದ್ದಾರೆ. ಆದರೆ ನಮ್ಮ ರಾಜ್ಯದಲ್ಲಿ ನೆಲೆಸಿರುವ ಹೊರ ರಾಜ್ಯದ ವಲಸೆ ಕೂಲಿ ಕಾರ್ಮಿಕರ ಗೋಳು ಕೇಳುವವರಿಲ್ಲದಾಗಿದೆ. ಇವರ ಕಡೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಗಮನ ನೀಡುತ್ತಿಲ್ಲ ಎಂದು ಅಸಮಾಧಾನ ಹೊರ ಹಾಕಿದ್ದಾರೆ.