ETV Bharat / state

ಮೇಕೆದಾಟು ಪಾದಯಾತ್ರೆ ಹತ್ತಿಕ್ಕಲು ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿ ಮಾಡಿತ್ತು: ಸತೀಶ್‌ ಜಾರಕಿಹೊಳಿ

ಕಾಂಗ್ರೆಸ್​ ನಡೆಸುತ್ತಿದ್ದ ಮೇಕೆದಾಟು ಪಾದಯಾತ್ರೆಯನ್ನು ಹತ್ತಿಕ್ಕಲು ರಾಜ್ಯ ಬಿಜೆಪಿ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿ ಮಾಡಿತ್ತು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಆರೋಪಿಸಿದ್ದಾರೆ.

Satish jarkiholi spoke about metadata protest
ಮೇಕೆದಾಟು ಪಾದಯಾತ್ರೆ ಕುರಿತು ಸತೀಶ್‌ ಜಾರಕಿಹೊಳಿ ಹೇಳಿಕೆ
author img

By

Published : Jan 23, 2022, 5:53 PM IST

ಬೆಳಗಾವಿ: ಕಾಂಗ್ರೆಸ್ ಹಮ್ಮಿಕೊಂಡಿದ್ದ ಮೇಕೆದಾಟು ಪಾದಯಾತ್ರೆ ಮೊಟಕುಗೊಳಿಸಿಲು ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿ ಮಾಡಿತ್ತು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ್‌ ಜಾರಕಿಹೊಳಿ ಆರೋಪಿಸಿದರು.

ಮೇಕೆದಾಟು ಪಾದಯಾತ್ರೆ ಕುರಿತು ಸತೀಶ್‌ ಜಾರಕಿಹೊಳಿ ಹೇಳಿಕೆ

ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೇಕೆದಾಟು ಪಾದಯಾತ್ರೆ ಯಶಸ್ವಿ ಆಗಬಾರದು. ಪಾದಯಾತ್ರೆ ಬೆಂಗಳೂರು ತಲುಪಬಾರದು ಎಂಬ ಉದ್ದೇಶ ಸರ್ಕಾರದಾಗಿತ್ತು. ಈಗ ವೀಕೆಂಡ್ ಕರ್ಫ್ಯೂ ವಾಪಸ್ ಪಡೆಯುವ ಮೂಲಕ ಅದನ್ನು ಬಿಜೆಪಿ ಸರ್ಕಾರವೇ ಸಾಬೀತು ಮಾಡಿದೆ ಎಂದರು.

ಇದನ್ನೂ ಓದಿ: ಬುದ್ಧಿವಾದ ಹೇಳಿದ ವ್ಯಕ್ತಿಯ ಉಸಿರೇ ನಿಲ್ಲಿಸಿದ ಅಸ್ಸೋಂ ಗ್ಯಾಂಗ್.. ಬೆಂಗಳೂರು ಪೊಲೀಸರೇನು ಸುಮ್ಮನಿರಲಿಲ್ಲ..

ಬಿಜೆಪಿ ಸರ್ಕಾರ ಪಾದಯಾತ್ರೆ ಹತ್ತಿಕ್ಕಲು ಪ್ರಯತ್ನಿಸಿದರೂ ಜನರ ಮನಸ್ಸಿನಲ್ಲಿ ಕಾಂಗ್ರೆಸ್‌ ಪಾದಯಾತ್ರೆ ಶಾಶ್ವತವಾಗಿ ಉಳಿದಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​​​​ ಅವರು ಕೋವಿಡ್‌ ಕಡಿಮೆಯಾದ ನಂತರ ಪಾದಯಾತ್ರೆ ಎಲ್ಲಿಂದ ಮೊಟಕುಗೊಂಡಿತ್ತೋ ಮತ್ತೆ ಅಲ್ಲಿಂದ ಆರಂಭಿಸೋಣ ಎಂದಿದ್ದಾರೆ ಎಂದು ತಿಳಿಸಿದರು.

ಸರ್ಕಾರಕ್ಕೆ ಕಾಂಗ್ರೆಸ್‌ ಬಗ್ಗೆ ಭಯ ಹುಟ್ಟಿದೆ. ಆದಕಾರಣ ಇಂತಹ ಹೋರಾಟಗಳನ್ನು ತಡೆಗಟ್ಟಲು ಕುತಂತ್ರ ರೂಪಿಸುತ್ತಿದೆ ಎಂದು ಆರೋಪಿಸಿದರು.

ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.