ಬೆಳಗಾವಿ: ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರದ್ದು ಎನ್ನಲಾದ ಸಿಡಿ ಬಹಿರಂಗ ಪ್ರಕರಣದಿಂದ ಮುಜುಗರಕ್ಕೆ ಒಳಗಾಗಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಕಳೆದ ರಾತ್ರಿಯೇ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎನ್ನಲಾಗ್ತಿದೆ.
ಸಹೋದರ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಿಂದ ಸತೀಶ್ ಜಾರಕಿಹೊಳಿ ಮುಜುಗುರಕ್ಕೆ ಒಳಗಾಗಿದ್ದು, ಹೀಗಾಗಿ ನಿನ್ನೆಯಿಂದಲೇ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅಜ್ಞಾತ ಸ್ಥಳದಲ್ಲಿದ್ದಾರೆ ಎಂದು ಹೇಳಲಾಗ್ತಿದೆ.
ಓದಿ : ಸಿಡಿ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿ: ಬಾಲಚಂದ್ರ ಜಾರಕಿಹೊಳಿ ಒತ್ತಾಯ
ಇಂದಿನ ಪೂರ್ವ ನಿಯೋಜಿತ ಕಾರ್ಯಕ್ರಮಗಳನ್ನು ಸತೀಶ್ ಜಾರಕಿಹೊಳಿ ರದ್ದುಗೊಳಿಸಿದ್ದಾರೆ. ಬೆಳಗ್ಗೆ 11ಕ್ಕೆ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸಭೆ ನಿಗದಿಯಾಗಿತ್ತು. ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಮುಖಂಡರ ಸಭೆ ನಡೆಯಬೇಕಿತ್ತು. ಸಭೆಗೂ ಬಾರದೇ ಸತೀಶ್ ಜಾರಕಿಹೊಳಿ ಅಜ್ಞಾತ ಸ್ಥಳದಲ್ಲೇ ಉಳಿದಿದ್ದಾರೆ ಎನ್ನಲಾಗ್ತಿದೆ.