ಬೆಳಗಾವಿ: ಗೋಕಾಕ್ ಕ್ಷೇತ್ರದ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಲಖನ್ ಜಾರಕಿಹೊಳಿ ಪರ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಮತಬೇಟೆ ನಡೆಸಿದರು.
ಗೋಕಾಕ್ ತಾಲೂಕಿನ ಅಂಕಲಗಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಸತೀಶ್ ಜಾರಕಿಹೊಳಿ ಪ್ರಚಾರ ನಡೆಸಿದರು. ಗ್ರಾಮಕ್ಕೆ ಭೇಟಿ ನೀಡಿದ ಅವರಿಗೆ ಗ್ರಾಮಸ್ಥರು ಹೂವಿನ ಸುರಿಮಳೆಗೈದರು. ಸತೀಶ್ ಜಾರಕಿಹೊಳಿ ಹಾಗೂ ಕಾಂಗ್ರೆಸ್ ಪಕ್ಷದ ಪರವಾಗಿ ಗ್ರಾಮಸ್ಥರು ಘೋಷಣೆ ಕೂಗಿದರು. ಬಳಿಕ ಸಭೆ ನಡೆಸಿದ ಸತೀಶ್ ಜಾರಕಿಹೊಳಿ, ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡುವಂತೆ ಕೋರಿದರು.
ಇನ್ನು ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಪ್ರಚಾರ ನಡೆಸಿದ ಬಳಿಕ ನಿನ್ನೆ ಸಂಜೆ ಸತೀಶ್ ಜಾರಕಿಹೊಳಿ, ಮುಖಂಡರೊಂದಿಗೆ ಸಭೆ ನಡೆಸಿದರು.