ಬೆಳಗಾವಿ: ಕಳೆದ 20 ದಿನಗಳಿಂದ ಪಶ್ಚಿಮಘಟ್ಟದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಖಾನಾಪೂರ ತಾಲೂಕಿಗೆ ಸಂಪರ್ಕ ಕಲ್ಪಿಸುವ ಸಾತ್ನಾಳಿ-ಮಾಚಾಳಿ ಗ್ರಾಮದ ಸೇತುವೆ ಮುಳುಗಡೆ ಆಗಿದೆ. ವೈದ್ಯಕೀಯ ಸೌಲಭ್ಯ ಪಡೆಯಲು ಸಮಸ್ಯೆ ಆಗ್ತಿದೆ. ಹೀಗಾಗಿ, ಶಾಶ್ವತ ಪರಿಹಾರ ಕಲ್ಪಿಸುವಂತೆ ಗ್ರಾಮಸ್ಥರು ಮೊಬೈಲ್ ವಿಡಿಯೋ ಮೂಲಕ ಮನವಿ ಮಾಡಿದ್ದಾರೆ.
ಸದ್ಯ ಪಶ್ಚಿಮಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ ಆಗುತ್ತಿರುವ ಹಿನ್ನೆಲೆ ಮೈದುಂಬಿ ಹರಿಯುತ್ತಿರುವ ಪಾಂಡ್ರಿ ನದಿಯ ನೀರಿನ ಒಳಹರಿವು ಹೆಚ್ಚಾಗಿದ್ದು, ಸೇತುವೆ ಮೇಲೆ ನಾಲ್ಕು ಅಡಿ ನೀರು ಬಂದಿದೆ. ಆದ್ರೆ, ಕೆಲವರು ಅಪಾಯವನ್ನು ಲೆಕ್ಕಿಸದೇ ಮುಳುಗಡೆಯಾದ ಸೇತುವೆ ಮೇಲೆಯೇ ಬೈಕ್ ಸವಾರಿ ಮಾಡುತ್ತಿದ್ದಾರೆ.
ಈ ಕುರಿತು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿ ಗ್ರಾಮಸ್ಥರೊಬ್ಬರು ಮಾತನಾಡಿ, ಪ್ರತಿಬಾರಿ ಮಳೆಗಾಲದಲ್ಲಿ ಇದೇ ಸಮಸ್ಯೆ ಎದುರಿಸುತ್ತೇವೆ. ಎಂಎಲ್‌ಎ, ಎಂಪಿ ಸೇರಿ ಎಲ್ಲ ಜನಪ್ರತಿನಿಧಿಗಳಿಗೆ ಮನವಿ ಮಾಡಿದ್ದೇವೆ. ವಿದ್ಯಾರ್ಥಿಗಳು, ರೈತರು, ಸಾರ್ವಜನಿಕರಿಗೆ ತೊಂದರೆ ಆಗ್ತಿದೆ. ಗ್ರಾಮದಲ್ಲಿ ಯಾರಿಗಾದರೂ ಅನಾರೋಗ್ಯ ಕಾಣಿಸಿಕೊಂಡರೆ ವೈದ್ಯಕೀಯ ಸೌಲಭ್ಯನೂ ಸಿಗುತ್ತಿಲ್ಲ. ಸೇತುವೆಯ ಎತ್ತರ ಮಟ್ಟವನ್ನು ಹೆಚ್ಚಿಸಿ ಅನುಕೂಲ ಮಾಡಿಕೊಡಬೇಕು ಎಂದು ಮನವಿ ಮಾಡಿದ್ದಾರೆ.
ಓದಿ: ಕೇಂದ್ರ ಸರ್ಕಾರ ಬಡ, ಮಧ್ಯಮ ವರ್ಗದವರ ರಕ್ತ ಹೀರುತ್ತಿದೆ: ಸಿದ್ದರಾಮಯ್ಯ