ಅಥಣಿ: ತಾಲೂಕಿನ ಹಲ್ಯಾಳ ಗ್ರಾಮದ ಸಮೀಪ ಕೃಷ್ಣಾ ನದಿ ಪಾಲಾಗಿರುವ ನಾಲ್ವರು ಸಹೋದರರ ಶೋಧಕಾರ್ಯ ಎರಡನೇ ದಿನವೂ ಮುಂದುವರೆದಿದೆ. ಎನ್.ಡಿ.ಆರ್.ಎಫ್ ಹಾಗೂ ಸ್ಕೂಬಾ ಡೈವಿಂಗ್ ತಂಡ ಜಂಟಿಯಾಗಿ ನದಿಯಲ್ಲಿ ಶೋಧಕಾರ್ಯ ನಡೆಸುತ್ತಿವೆ.
ಬೆಳಗಾವಿ ಜಿಲ್ಲಾಡಳಿತದ ಮನವಿ ಮೇರೆಗೆ ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲಾಧಿಕಾರಿ ಸ್ಕೂಬಾ ಡೈವಿಂಗ್ ತಂಡವನ್ನು ಕಳುಹಿಸಿ ಕೊಟ್ಟಿದ್ದಾರೆ. ಚಿಕ್ಕೋಡಿ ಉಪವಿಭಾಗಾಧಿಕಾರಿ ಯಕೇಶ್ ಕುಮಾರ್, ಅಥಣಿ ತಹಶೀಲ್ದಾರ್ ದುಂಡಪ್ಪ ಕೋಮಾರ, ಡಿವೈಎಸ್ಪಿ ಎಸ್.ವಿ ಗಿರೀಶ್ ಹಾಗೂ ಇತರೆ ಅಧಿಕಾರಿಗಳು ಸ್ಥಳದಲ್ಲಿ ಬೀಡು ಬಿಟ್ಟಿದ್ದಾರೆ. ಎನ್ಡಿಆರ್ಎಫ್ ತಂಡಕ್ಕೆ ಸ್ಥಳೀಯ ಅಗ್ನಿಶಾಮಕ ಸಿಬ್ಬಂದಿ ಸಾಥ್ ನೀಡಿದ್ದಾರೆ.