ETV Bharat / state

ಲಕ್ಷಣರಹಿತ ಸೋಂಕಿತರಿಗೆ ಪ್ರತಿ ತಾಲ್ಲೂಕಿನಲ್ಲಿ ಪ್ರತ್ಯೇಕ ಕೋವಿಡ್ ಕೇರ್ ಸೆಂಟರ್ ಆರಂಭ: ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ - ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ

10 ತಾಲೂಕಿನಲ್ಲಿ ಕೋವಿಡ್ ಕೇರ ಸೆಂಟರ್ ಸ್ಥಾಪನೆ, ಲಕ್ಷಣರಹಿತ ರೋಗಿಗಳನ್ನು ಇರಿಸಲಾಗುತ್ತಿದೆ. ಬೈಲಹೊಂಗಲ, ಸವದತ್ತಿ, ರಾಮದುರ್ಗ ಮತ್ತು ಗೋಕಾಕನಲ್ಲಿ ಈಗಾಗಲೇ ಲಕ್ಷಣರಹಿತರಿಗೆ ಚಿಕಿತ್ಸೆ ಆರಂಭಿಸಲಾಗಿದ್ದು, ವೈದ್ಯರ ತಂಡ ನಿಯೋಜಿಸಲಾಗಿದೆ ಎಂದು ಎಂ.ಜಿ. ಹಿರೇಮಠ ಮಾಹಿತಿ ನೀಡಿದರು.

Belagavi
ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ
author img

By

Published : Jul 19, 2020, 1:07 PM IST

ಬೆಳಗಾವಿ: ಲಕ್ಷಣರಹಿತ ಕೋವಿಡ್ ಸೋಂಕಿತರನ್ನು ಪ್ರತ್ಯೇಕವಾಗಿ ಇರಿಸಲು ಅನುಕೂಲವಾಗುವಂತೆ ಜಿಲ್ಲೆಯ ಹತ್ತು ತಾಲೂಕುಗಳಲ್ಲಿ ಪ್ರತ್ಯೇಕ ಕೋವಿಡ್ ಕೇರ್ ಸೆಂಟರ್‌ ಆರಂಭಿಸಲಾಗಿದೆ. ಅದೇ ರೀತಿ ಪ್ರತಿ ತಾಲೂಕಿನ ಆಸ್ಪತ್ರೆಯಲ್ಲಿ ಆಕ್ಸಿಜನ್ ವ್ಯವಸ್ಥೆ ಹೊಂದಿರುವ 30 ಬೆಡ್ ಕೂಡ ಸಿದ್ಧವಾಗಿಟ್ಟುಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದರು.

ಲಕ್ಷಣರಹಿತ ಸೋಂಕಿತರಿಗೆ ಪ್ರತಿ ತಾಲೂಕಿನಲ್ಲಿ ಪ್ರತ್ಯೇಕ ಕೋವಿಡ್ ಕೇರ್ ಸೆಂಟರ್ ಆರಂಭ

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತಾನಾಡಿದ ಅವರು, 10 ತಾಲೂಕಿನಲ್ಲಿ ಕೋವಿಡ್ ಕೇರ ಸೆಂಟರ್ ಸ್ಥಾಪಿಸಿ, ಲಕ್ಷಣರಹಿತ ರೋಗಿಗಳನ್ನು ಇರಿಸಲಾಗುತ್ತಿದೆ. ಬೈಲಹೊಂಗಲ, ಸವದತ್ತಿ, ರಾಮದುರ್ಗ ಮತ್ತು ಗೋಕಾಕನಲ್ಲಿ ಈಗಾಗಲೇ ಲಕ್ಷಣರಹಿತರಿಗೆ ಚಿಕಿತ್ಸೆ ಆರಂಭಿಸಲಾಗಿದ್ದು, ವೈದ್ಯರ ತಂಡವನ್ನು ನಿಯೋಜಿಸಲಾಗಿದೆ. ಗಂಭೀರ ಪ್ರಕರಣ ಹಾಗೂ ಚಿಕಿತ್ಸೆ ಅಗತ್ಯವಿರುವವರಿಗೆ ಮಾತ್ರ ಬಿಮ್ಸ್ ಗೆ ದಾಖಲು ಮಾಡಲಾಗುತ್ತಿದೆ. ಲಕ್ಷಣರಹಿತರಿಗೆ ತಾಲೂಕು ಮಟ್ಟದಲ್ಲಿ ಹತ್ತು ದಿನಗಳ ಕಾಲ ಸರ್ಕಾರದ ಮಾರ್ಗಸೂಚಿ ಪ್ರಕಾರ ಊಟೋಪಹಾರ ಮತ್ತು ಚಿಕಿತ್ಸೆ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ 768 ಬೆಡ್​ಗಳು ಹತ್ತು ಕೋವಿಡ್ ಕೇರ್ ಸೆಂಟರ್​ನಲ್ಲಿ ಲಭ್ಯವಿದ್ದು, ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಇನ್ನೂ ಹೆಚ್ಚಿನ ಬೆಡ್ ಕಲ್ಪಿಸುವ ಅವಕಾಶ ಇದೆ ಎಂದರು.

ಇಎಸ್ಐ, ಕೆಎಲ್ಇ ಆಸ್ಪತ್ರೆಯಲ್ಲಿ ಹಾಸಿಗೆ ಲಭ್ಯ:

ಬೆಳಗಾವಿ ನಗರದ ಇ.ಎಸ್.ಐ. ಆಸ್ಪತ್ರೆಯಲ್ಲೂ 25 ಬೆಡ್ ಸಜ್ಜುಗೊಳಿಸಲಾಗಿದ್ದು, ಕೆ.ಎಲ್.ಇ ಆಸ್ಪತ್ರೆಯಲ್ಲಿ 65 ಬೆಡ್ ವ್ಯವಸ್ಥೆ ಮಾಡಲಾಗಿದೆ. ಇನ್ನೂ 30 ಬೆಡ್ ಕಲ್ಪಿಸಲು ಕೋರಲಾಗಿದೆ. ಕೋವಿಡ್ ಹೊರತುಪಡಿಸಿ ಇತರೆ ರೋಗಿಗಳನ್ನು ಸರ್ಕಾರದ ಯೋಜನೆಯಡಿ ಖಾಸಗಿ ಆಸ್ಪತ್ರೆಗಳಿಗೆ ಕಳಿಸಲಾಗುವುದು. ಖಾಸಗಿ ಆಸ್ಪತ್ರೆಯವರು ಕೂಡ ಇತರೆ ರೋಗಿಗಳ ಚಿಕಿತ್ಸೆಗೆ ಮುಂದಾಗಿವೆ. ಕೆಲ ಸಣ್ಣ ಆಸ್ಪತ್ರೆಯ ವೈದ್ಯರು ಸರ್ಕಾರಿ ಅಥವಾ ಇತರೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಆಸಕ್ತಿ ತೋರಿಸಿದ್ದಾರೆ. ಅವರ ಪಟ್ಟಿ ತಯಾರಿಸಿ ಅವರ ಸೇವೆಯನ್ನು ಬಳಸಿಕೊಳ್ಳಲಾಗುವುದು ಎಂದರು.

ಜಿಲ್ಲೆಯಲ್ಲಿ ಇದುವರೆಗೆ 33,271 ಮಾದರಿ ಪರೀಕ್ಷೆ 28,950 ವರದಿಗಳು ನೆಗೆಟಿವ್ ಬಂದಿದ್ದು, 795 ಜನರಲ್ಲಿ ಸೋಂಕು ದೃಢಪಟ್ಟಿರುತ್ತದೆ. ಇದುವರೆಗೆ 507 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಈ ವೇಳೆ ಬೆಳಗಾವಿ ಲಾಕ್​ಡೌನ್ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಜಿಲ್ಲೆಯಲ್ಲಿ ತಜ್ಞರ ಸಲಹೆ ಹಾಗೂ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರೊಂದಿಗೆ ಚರ್ಚಿಸಿ ನಿರ್ಧಾರ ಪ್ರಕಟಿಸಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ಜಿಪಂ ಸಿಇಓ ಡಾ.ರಾಜೇಂದ್ರ ಕೆ.ವಿ., ಪಾಲಿಕೆ ಆಯುಕ್ತ ಜಗದೀಶ ಕೆ.ಹೆಚ್, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ವಿ.ಮುನ್ಯಾಳ,ಪಾಲಿಕೆ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಕ್ಕಾರ ಮತ್ತಿತರರು ಇದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.