ETV Bharat / state

ಪುಣೆ - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ - ಬೀಮ್ಸ್ ಆಸ್ಪತ್ರೆ

ಬೆಳಗಾವಿ ತಾಲೂಕಿನ ವಂಟಮೂರಿ ಘಾಟ್ ಬಳಿಯ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಸರಣಿ ಅಪಘಾತದಲ್ಲಿ ಏಳು ಜನರು ಗಾಯಗೊಂಡಿದ್ದಾರೆ.

serial-accident-on-pune-bengaluru-national-highway
ಪುಣೆ - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ
author img

By

Published : Nov 27, 2022, 11:07 PM IST

ಬೆಳಗಾವಿ: ತಾಲೂಕಿನ ವಂಟಮೂರಿ ಘಾಟ್ ಬಳಿಯ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಏಳಕ್ಕೂ ಅಧಿಕ ಜನರು ಗಂಭೀರ ಗಾಯಗಳಾಗಿದ್ದಾರೆ. ಗಾಯಾಳುಗಳನ್ನು ಬೀಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಳಗಾವಿಯಿಂದ ಪುಣೆ ಕಡೆಗೆ ಹೊರಟಿದ್ದ ಲಾರಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಹೆದ್ದಾರಿ ಮೇಲೆ ಉರಳಿ ಬಿದ್ದಿದೆ. ಈ ವೇಳೆ ಬೆಳಗಾವಿ ಕಡೆಗೆ ಬರುತ್ತಿದ್ದ ಕಾರುಗಳು ಲಾರಿಗೆ ಡಿಕ್ಕಿ ಹೊಡೆದು ಸರಣಿ ಅಪಘಾತ ಸಂಭವಿಸಿದೆ.

ಈ ಘಟನೆಯಲ್ಲಿ ಏಳಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದೆ. ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ. ಈ ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರದಲ್ಲಿ ವ್ಯತ್ಯಯವಾಗಿತ್ತು. ಅರ್ಧ ಗಂಟೆಗೂ ಅಧಿಕ ಸಂಚಾರ ಅಸ್ತವ್ಯಸ್ತದಿಂದ ಪ್ರಯಾಣಿಕರು ಹೈರಾಣಾಗಿದ್ದಾರೆ. ಸ್ಥಳಕ್ಕೆ ಅಪರಾಧ ವಿಭಾಗದ ಡಿಸಿಪಿ ಸ್ನೇಹಾ, ಗ್ರಾಮೀಣ ‌ವಿಭಾಗದ ಎಸಿಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಬೆಂಗಾವಲು ಕಾರು ಡಿಕ್ಕಿ ಹೊಡೆದು ವಿದ್ಯಾರ್ಥಿ ಸಾವು: ಬಿಜೆಪಿ ಸಂಸದನ ವಿರುದ್ಧ ಕೇಸ್​ ದಾಖಲು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.