ಬೆಳಗಾವಿ: ಜಿಲ್ಲೆಯ ಗೋಕಾಕ್ ನಗರದ ಲಕ್ಷ್ಮಿ ಬಡಾವಣೆಯ ಮೂರು ಮನೆಗಳಲ್ಲಿ ಸರಣಿ ಕಳ್ಳತನ ನಡೆದಿದ್ದು ಸ್ಥಳೀಯರು ಆತಂಕಕ್ಕೊಳಗಾಗಿದ್ದಾರೆ. ಗೋಕಾಕ್ ನಗರದ ನಿವಾಸಿ ದಿಲೀಪ್ ಮಜಲೀಕರ್ ಎಂಬುವರ ಮನೆಯಲ್ಲಿ 3 ಲಕ್ಷ ರೂ. ನಗದು, 60 ಗ್ರಾಂ ಚಿನ್ನ, 8 ಕೆ.ಜಿ ಬೆಳ್ಳಿ ಕಳ್ಳತನ ಮಾಡಲಾಗಿದೆ. ಇನ್ನೆರಡು ಮನೆಯಲ್ಲಿ ಸಹ ಲಕ್ಷಾಂತರ ರೂ. ನಗದು ಹಾಗೂ ಚಿನ್ನಾಭರಣ ಕದ್ದು ಕಳ್ಳರು ಪರಾರಿಯಾಗಿದ್ದಾರೆ.
ಮನೆಯಲ್ಲಿ ಯಾರೂ ಇಲ್ಲದಿರುವುದನ್ನು ಗಮನಿಸಿದ ಕಳ್ಳರು, ರಾತ್ರೋರಾತ್ರಿ ಬೀಗ ಒಡೆದು ಕೃತ್ಯ ಎಸಗಿದ್ದಾರೆ. ಖದೀಮರು ಕೈಚಳಕ ಎದುರು ಮನೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಸಂಬಂಧ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗೋಕಾಕ್ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ಕ್ರೀಡಾಂಗಣಕ್ಕೆ ನುಗ್ಗಿ ವಿರಾಟ್ ಕೊಹ್ಲಿ ಜೊತೆ ಸೆಲ್ಫಿ ತೆಗೆಸಿಕೊಂಡ ನಾಲ್ವರು ಪೊಲೀಸ್ ವಶಕ್ಕೆ