ETV Bharat / state

ಬೆಳಗಾವಿ: ಸಿಲಿಂಡರ್ ಸ್ಫೋಟಗೊಂಡು ಮನೆಗೆ ಬೆಂಕಿ; ಹಸುಗೂಸು ಸೇರಿ 7 ಜನರಿಗೆ ಗಂಭೀರ ಗಾಯ - ಸಿಲಿಂಡರ್ ಸೋರಿಕೆ

Cylinder Blast at Belagavi: ರಾತ್ರಿ ಮಲಗಿದ್ದಾಗ ಸಿಲಿಂಡರ್ ಸ್ಫೋಟಗೊಂಡು ಮನೆಗೆ ಬೆಂಕಿ ಹೊತ್ತಿಕೊಂಡ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ಸಂಭವಿಸಿದೆ. ಘಟನೆಯಲ್ಲಿ ಏಳು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

Seven people of same family injured in cylinder blast at Belagavi
ಸಿಲಿಂಡರ್ ಸ್ಫೋಟ: 9 ತಿಂಗಳ ಮಗು ಸೇರಿ ಒಂದೇ ಕುಟುಂಬದ 7 ಜನರಿಗೆ ಗಂಭೀರ ಗಾಯ
author img

By ETV Bharat Karnataka Team

Published : Dec 17, 2023, 10:54 AM IST

Updated : Dec 17, 2023, 4:10 PM IST

ಸಿಲಿಂಡರ್ ಸ್ಫೋಟಗೊಂಡು ಮನೆಗೆ ಬೆಂಕಿ

ಬೆಳಗಾವಿ: ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು 9 ತಿಂಗಳ ಹಸುಗೂಸು ಸೇರಿ ಒಂದೇ ಕುಟುಂಬದ ಏಳು ಜನರಿಗೆ ಗಂಭೀರ ಗಾಯವಾಗಿರುವ ಘಟನೆ ಗೋಕಾಕ್ ತಾಲೂಕಿನ ‌ಅಕ್ಕತಂಗೇರಹಾಳ ಗ್ರಾಮದಲ್ಲಿ ಶನಿವಾರ ಮಧ್ಯರಾತ್ರಿ ನಡೆದಿದೆ. ಸಿಲಿಂಡರ್ ಸ್ಫೋಟದ ಭೀಕರತೆಗೆ ಮನೆಯ ಹೆಂಚುಗಳು ಹಾರಿ ಹೋಗಿದ್ದು, ಬೆಂಕಿ ಹೊತ್ತಿ ಉರಿದಿದೆ. ಮನೆಯಲ್ಲಿನ ವಸ್ತುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.

ರಾಜಶ್ರೀ ನಿರ್ವಾಣಿ, ಅಶೋಕ ನಿರ್ವಾಣಿ, ಸೋಮನಗೌಡ ನಿರ್ವಾಣಿ, ದೀಪಾ ನಿರ್ವಾಣಿ ಮತ್ತು ಮಕ್ಕಳಾದ ನವೀನ ನಿರ್ವಾಣಿ, ವಿದ್ಯಾ ನಿರ್ವಾಣಿ, 9 ತಿಂಗಳ ಮಗು ಬಸನಗೌಡ ನಿರ್ವಾಣಿ ಗಾಯಗೊಂಡವರು. ಈ ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯವಾಗಿದ್ದು, ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ‌ದಾಖಲಿಸಲಾಗಿದೆ. ಇನ್ನುಳಿದವರನ್ನು ಸ್ಥಳೀಯ ಆಸ್ಪತ್ರೆಗೆ ‌ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮನೆಯಲ್ಲಿ ರಾತ್ರಿ ಮಲಗಿದ್ದಾಗ ಸಿಲಿಂಡರ್ ಸೋರಿಕೆ ಆಗಿದೆ. ವಾಸನೆ ಬಂದು ಹಿನ್ನೆಲೆ ಮೊಬೈಲ್​ ಟಾರ್ಚ್ ಆನ್ ಮಾಡಿ ನೋಡಲು ಹೋದಾಗ ಏಕಾಏಕಿ ‌ಸ್ಫೋಟಗೊಂಡಿದೆ ಎಂದು ತಿಳಿದು ಬಂದಿದೆ. ಬೆಂಕಿ ನಂದಿಸಲು ಸ್ಥಳೀಯರು ಹರಸಾಹಸ ಪಟ್ಟರು. ಅಂಕಲಗಿ ಪೊಲೀಸ್ ‌ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರ: ಅಡುಗೆ ಅನಿಲ ಸಿಲಿಂಡರ್ ಸ್ಫೋಟ, ಮೂವರಿಗೆ ಗಂಭೀರ ಗಾಯ

Last Updated : Dec 17, 2023, 4:10 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.