ETV Bharat / state

ಚಿಕ್ಕೋಡಿ: ರಾತ್ರಿಯಿಡೀ ಧಾರಾಕಾರ ಮಳೆ; ಮನೆ-ಅಂಗಡಿಗಳಿಗೆ ನೀರು ನುಗ್ಗಿ ಅವಾಂತರ

author img

By

Published : Oct 3, 2021, 9:03 AM IST

ಪ್ರತಿ ಬಾರಿ ಮಳೆ ಬಂದಾಗಲೂ ಇದೇ ಪರಿಸ್ಥಿತಿ ಇರುತ್ತದೆ. ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ ಎಂದು ರಾಯಬಾಗ ತಾಲೂಕಿನ ಮುತ್ಯಾನ ಮುಗಳಕೋಡ ಬೇಸರ ವ್ಯಕ್ತಪಡಿಸಿದರು.

Several house-shops flooded with rain water at Belagavi
ರಾತ್ರಿ ಇಡಿ ಸುರಿದ ಭಾರಿ ಮಳೆ: ಮನೆ-ಅಂಗಡಿಗಳಿಗೆ ನೀರು ನುಗ್ಗಿ ಅವಾಂತರ

ಚಿಕ್ಕೋಡಿ (ಬೆಳಗಾವಿ): ಮಹಾರಾಷ್ಟ್ರ ಮತ್ತು ಚಿಕ್ಕೋಡಿ ಉಪವಿಭಾಗದಲ್ಲಿ ಕಳೆದ ರಾತ್ರಿ ಸುರಿದ ಜೋರು ಮಳೆಗೆ ರಾಯಬಾಗ ತಾಲೂಕಿನ ಮುತ್ಯಾನ ಮುಗಳಕೋಡ ಗ್ರಾಮದಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಇಲ್ಲಿನ ನಿವಾಸಿಗಳು ರಾತ್ರಿಯಿಡೀ ಮಳೆ ನೀರನ್ನು ಹೊರಹಾಕುತ್ತಿದ್ದರು.

ಮನೆ-ಅಂಗಡಿಗಳಿಗೆ ಮಳೆ ನೀರು ನುಗ್ಗಿ ಅವಾಂತರ

ಮುತ್ಯಾನ ಮುಗಳಕೋಡ ಗ್ರಾಮದ ಅಂಗಡಿ-ಮುಂಗಟ್ಟುಗಳಿಗೆ ಚರಂಡಿ ನೀರು ನುಗ್ಗಿದೆ. ಪುರಸಭೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಮನೆಯೊಳಗೆ ನೀರು ಬರುತ್ತಿದೆ. ಪ್ರತಿ ಬಾರಿ ಮಳೆ ಬಂದಾಗಲೂ ಇದೇ ಪರಿಸ್ಥಿತಿ ಇರುತ್ತದೆ. ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಕಬ್ಬಿನ ಗದ್ದೆಗೆ ಬೆಂಕಿ: ಕಿಡಿಗೇಡಿಗಳ ದುಷ್ಕೃತ್ಯಕ್ಕೆ ಲಕ್ಷಾಂತರ ಮೌಲ್ಯದ ಬೆಳೆನಾಶ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.