ETV Bharat / state

ಬರ ನಿರ್ವಹಣೆ ಸಭೆ: ನೀರಿನ ಟ್ಯಾಂಕರ್ ಖರೀದಿಸುವಂತೆ ಗ್ರಾಪಂಗಳಿಗೆ ಸಚಿವ ಜಾರಕಿಹೊಳಿ ಸೂಚನೆ

ಸುವರ್ಣ ವಿಧಾನಸೌಧದಲ್ಲಿ ಸಚಿವ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಬರ ನಿರ್ವಹಣೆ ಸಭೆ ನಡೆಯಿತು.ಜಿಲ್ಲೆಯ 18 ಶಾಸಕರ ಪೈಕಿ ಕೇವಲ ಇಬ್ಬರು ಶಾಸಕರು ಮಾತ್ರ ಹಾಜರಿದ್ದರು. ಹೆಚ್ಚು ಶಾಸಕರು ಗೈರಾಗಿದ್ದು, ಚರ್ಚೆಗೆ ಗ್ರಾಸವಾಯ್ತು.

Severe drought in the belgaum district
ಸಚಿವ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಬರನಿರ್ವಹಣೆ ಸಭೆ ನಡೆಯಿತು.
author img

By ETV Bharat Karnataka Team

Published : Nov 17, 2023, 7:00 PM IST

ಬೆಳಗಾವಿ: ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದ ತಕ್ಷಣ ಟ್ಯಾಂಕರ್ ಮೂಲಕ ನೀರು ಪೂರೈಸಬೇಕು. ಕುಡಿಯುವ ನೀರು ಸಮಸ್ಯೆ ನಿವಾರಣೆಗೆ ಅನುಕೂಲವಾಗುವಂತೆ ಜಿಲ್ಲೆಯ ಪ್ರತಿಯೊಂದು ಪಂಚಾಯಿತಿಗಳು ಕೂಡಲೇ ಸ್ವಂತ ಟ್ಯಾಂಕರ್ ಖರೀದಿಸಲು ಕ್ರಮ ಕೈಗೊಳ್ಳಬೇಕು ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಸೂಚನೆ ನೀಡಿದರು.

ಬರ ನಿರ್ವಹಣೆ ಕುರಿತು ಸುವರ್ಣ ವಿಧಾನಸೌಧದಲ್ಲಿ ಶುಕ್ರವಾರ ನಡೆದ ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರತಿ ಗ್ರಾಮ ಪಂಚಾಯಿತಿಗೆ ಒಂದು ಸ್ವಂತ ಟ್ಯಾಂಕರ್ ಹೊಂದಲು ಕೆಲವು ವರ್ಷಗಳ ಹಿಂದೆ ಸೂಚಿಸಲಾಗಿತ್ತು. ಆದ್ದರಿಂದ ಈ ಬಾರಿ ಪ್ರತಿ ಗ್ರಾಮ ಪಂಚಾಯಿತಿ ಕಡ್ಡಾಯವಾಗಿ ಟ್ಯಾಂಕರ್ ಖರೀದಿಸಿ ತಮಗೆ ಪಟ್ಟಿ ಒದಗಿಸಬೇಕು. ಒಂದು ವೇಳೆ ಟ್ಯಾಂಕರ್ ಖರೀದಿ ಮಾಡದಿದ್ದರೆ ಸಂಬಂಧಿಸಿದ ಗ್ರಾಪಂ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಕುಡಿಯುವ ನೀರಿನ ಸಮಸ್ಯೆಗೆ ಸಂಬಂಧಿಸಿದಂತೆ ಟಾಸ್ಕ್ ಫೋರ್ಸ್ ಸಭೆಗಳನ್ನು ನಡೆಸಿ ಸೂಕ್ತ ಯೋಜನೆ ರೂಪಿಸಬೇಕು ಎಂದು ಸಲಹೆ ನೀಡಿದರು.

ಜಲಜೀವನ್ ಮಿಷನ್ ಯೋಜನೆಯಡಿ ಕಾಮಗಾರಿ ಕಳಪೆ: ಮುಂಗಾರು ಹಾಗೂ ಹಿಂಗಾರು ಹಂಗಾಮಿನಲ್ಲಿ ಮಳೆ ಕೊರತೆ ಹಿನ್ನೆಲೆ ರೈತರು ಸಂಕಷ್ಟದಲ್ಲಿದ್ದಾರೆ. ಆದ್ದರಿಂದ ಬೆಳೆ ಪರಿಹಾರ ಹಾಗೂ ಮೇವು ಪೂರೈಕೆಗೆ ಕ್ರಮ ವಹಿಸಬೇಕು. ನರೇಗಾ ಯೋಜನೆಯಡಿ ಸಮರ್ಪಕ ಬರ ನಿರ್ವಹಣೆಗೆ ಅನುಕೂಲವಾಗುವಂತಹ ಮತ್ತು ಶಾಶ್ವತ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು.

ಅದೇ ರೀತಿ ಬಹುತೇಕ ಕಡೆ ಜಲಜೀವನ ಮಿಷನ್ ಯೋಜನೆಯ ಕಾಮಗಾರಿಗಳು ಕಳಪೆಯಾಗಿವೆ ಎಂದು ಸಾರ್ವಜನಿಕರಿಂದ ದೂರುಗಳು ಬರುತ್ತಿವೆ. ಆದ್ದರಿಂದ ಕುಡಿಯುವ ನೀರಿನ ಯೋಜನೆಗಳನ್ನು ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಸಚಿವರು ಹೇಳಿದರು.

ಬರ ನಿರ್ವಹಣೆಗೆ ರಾಜ್ಯ ಸರಕಾರ ಈಗಾಗಲೇ ಜಿಲ್ಲೆಗೆ 22.50 ಕೋಟಿ ಬಿಡುಗಡೆ ಮಾಡಿದ್ದು, ಒಟ್ಟಾರೆ 32 ಕೋಟಿ ರೂಪಾಯಿ ಹಣ ಲಭ್ಯವಿರುತ್ತದೆ. ಬರ ನಿರ್ವಹಣೆ ಕಾಮಗಾರಿಗಳಿಗೆ ಹಣಕಾಸಿನ ತೊಂದರೆಯಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟ ಪಡಿಸಿದರು. ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಮಾತನಾಡಿ, ಏಪ್ರಿಲ್ ವೇಳೆಗೆ ಬರಗಾಲದ ತೀವ್ರ ಸಮಸ್ಯೆಗಳು ಕಂಡುಬರಲಿವೆ. ಆದ್ದರಿಂದ ಕುಡಿಯುವ ನೀರು, ವಿದ್ಯುತ್, ಜಾನುವಾರುಗಳಿಗೆ ಮೇವು ಮತ್ತಿತರ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು.

ಭೂಸ್ವಾಧೀನ ಮಾಡಿಕೊಂಡು ಬಳಕೆ ಮಾಡದಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ದಾಖಲಾತಿ ದೊರಕದಿರುವುದರಿಂದ ರೈತರು ಸಮಸ್ಯೆ ಎದುರಿಸುತ್ತಿದ್ದಾರೆ‌. ಆದ್ದರಿಂದ ಕಂದಾಯ, ವಿಶೇಷ ಭೂಸ್ವಾಧೀನಾಧಿಕಾರಿಗಳು, ನೀರಾವರಿ ಇಲಾಖೆ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ ಪರಿಹಾರ ಕಂಡುಕೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಮಾತನಾಡಿ, ಮುಂಗಾರು ಮಳೆ ಕೊರತೆ ಹಿನ್ನೆಲೆ ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಹಿಂಗಾರು ಹಂಗಾಮಿನ ಬೆಳೆಗಳಿಗೆ ತೇವಾಂಶ ಕೊರತೆಯಾಗಿದೆ. ಪರ್ಯಾಯ ಬೆಳೆಗೆ ಅಗತ್ಯವಿರುವ ಬಿತ್ತನೆ ಬೀಜ ದಾಸ್ತಾನು ಇರುತ್ತದೆ. ಬೀಜ-ಗೊಬ್ಬರಗಳ ಕೊರತೆ ಇರುವುದಿಲ್ಲ ಎಂದು ಮಾಹಿತಿ ನೀಡಿದರು.

3.53 ಲಕ್ಷ ಹೆಕ್ಟೇರ್ ಕೃಷಿ ಬೆಳೆ ಹಾಗೂ 11,814 ಹೆ. ಸೇರಿ ಜಿಲ್ಲೆಯಲ್ಲಿ ಒಟ್ಟಾರೆ 3.65 ಲಕ್ಷ ಹೆಕ್ಟೇರ್ ಬೆಳೆ ಹಾನಿಯಾಗಿರುತ್ತದೆ. ರಾಜ್ಯ ಸರಕಾರ 22.50 ಕೋಟಿ ಬಿಡುಗಡೆ ಮಾಡಿದ್ದು, ಒಟ್ಟಾರೆ 31 ಕೋಟಿ ರೂಪಾಯಿ ಜಿಲ್ಲಾಡಳಿತದ ಬಳಿ ಇರುತ್ತದೆ. ಬರ ನಿರ್ವಹಣೆಗೆ ಹಣದ ಕೊರತೆ ಇರುವುದಿಲ್ಲ. ಎನ್.ಡಿ.ಆರ್.ಎಫ್. ನಿಯಮಾವಳಿ ಪ್ರಕಾರ 422 ಕೋಟಿ ಪರಿಹಾರ ಕೇಂದ್ರ ಸರಕಾರದಿಂದ ಬಿಡುಗಡೆಯಾಗಬೇಕಿದೆ. ಜಾನುವಾರುಗಳಿಗೆ ಸದ್ಯಕ್ಕೆ ಮೇವಿನ ಕೊರತೆ ಇರುವುದಿಲ್ಲ. ಜನವರಿ ಬಳಿಕ ಅಗತ್ಯವಿರುವ ಮೇವು ಖರೀದಿಗೆ ಟೆಂಡರ್ ಕರೆಯಲಾಗುವುದು ಎಂದರು.

ಜಿಪಂ ಸಿಇಒ ಹರ್ಷಲ್ ಭೋಯರ್, ಕುಡಿಯುವ ನೀರು ಸಮಸ್ಯೆ ನಿರ್ವಹಣೆಗೆ ಯೋಜನೆ ರೂಪಿಸಲಾಗಿದೆ. ಟ್ಯಾಂಕರ್ ನೀರು ಪೂರೈಕೆ ಹಾಗೂ ಕೊಳವೆಬಾವಿ ದುರಸ್ತಿ ಮತ್ತಿತರ ಕೆಲಸಗಳಿಗೆ 35 ಕೋಟಿ ರೂಪಾಯಿ ವೆಚ್ಚದ ಪ್ರಸ್ತಾವನೆ ಸರಕಾರಕ್ಕೆ ಸಲ್ಲಿಸಲಾಗಿದೆ ಎಂದು ವಿವರಿಸಿದರು.

ಬರ ಸಭೆಗೆ ಶಾಸಕರು ಗೈರು: ಜಿಲ್ಲೆಯಲ್ಲಿ ಭೀಕರ ಬರಗಾಲ ಸಂಭವಿಸಿದ್ದು, ಈ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಕರೆದಿದ್ದ ಸಭೆಯಲ್ಲಿ ಜಿಲ್ಲೆಯ 18 ಶಾಸಕರ ಪೈಕಿ ಕೇವಲ ಇಬ್ಬರು ಶಾಸಕರು ಮಾತ್ರ ಭಾಗಿಯಾಗಿದ್ದರು. ತಮ್ಮ ಕ್ಷೇತ್ರದಲ್ಲಿ ಏನೆಲ್ಲ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಚರ್ಚಿಸಬೇಕಿದ್ದ ಶಾಸಕರು ಗೈರಾಗಿದ್ದು ತೀವ್ರ ಚರ್ಚೆಗೆ ಗ್ರಾಸವಾಯ್ತು.

ಸಭೆಯಲ್ಲಿ ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣವರ, ಸವದತ್ತಿ ಶಾಸಕ ವಿಶ್ವಾಸ ವೈದ್ಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ್ ಗುಳೇದ ಸೇರಿ ಮತ್ತಿತರ ಅಧಿಕಾರಿಗಳು ಇದ್ದರು.

ಇದನ್ನೂಓದಿ:ಸೈಬರ್ ಅಪರಾಧ ಪ್ರಕರಣಗಳ ತನಿಖೆ ನಡೆಸಲು ಡಿಸಿಪಿಗಳಿಗೆ ಟಾಸ್ಕ್ ನೀಡಿದ ಪೊಲೀಸ್ ಕಮೀಷನರ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.