ಬೆಳಗಾವಿ : ಬಿಜೆಪಿ ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದ ಬೆಳಗಾವಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಮತ್ತೊಂದು ರಾಜಕೀಯ ಪ್ರಾತಿನಿಧ್ಯ ನೀಡಿದ್ದಾರೆ.
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿದ್ದ ಬೆಳಗಾವಿಯ ಶಂಕರಗೌಡ ಪಾಟೀಲರನ್ನು ದೆಹಲಿಯ ವಿಶೇಷ ಪ್ರತಿನಿಧಿಯನ್ನಾಗಿ ನೇಮಕ ಮಾಡಲಾಗಿದೆ. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹುದ್ದೆಯನ್ನು ಹಿಂದಕ್ಕೆ ಪಡೆಯಲಾಗಿದೆ. ಈಗ ಸಂಪುಟ ದರ್ಜೆ ಸಚಿವ ಸ್ಥಾನದೊಂದಿಗೆ ನವದೆಹಲಿಯಲ್ಲಿ ಕರ್ನಾಟಕದ ಪ್ರತಿನಿಧಿಯಾಗಿ ಪದೋನ್ನತಿ ನೀಡಲಾಗಿದೆ.
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರೊಂದಿಗೆ ಆತ್ಮೀಯ ಸಂಬಂಧ ಹೊಂದಿರುವ ಶಂಕರಗೌಡ ಪಾಟೀಲ, ಈ ಹಿಂದೆ ಬಿಎಸ್‌ವೈ ಕೆಜೆಪಿ ಕಟ್ಟಿದಾಗಲೂ ಅವರೊಂದಿಗಿದ್ದರು.