ಚಿಕ್ಕೋಡಿ: ಮಹಾರಾಷ್ಟ್ರದ ಗಡಿಯಲ್ಲಿರುವ ಬೆಳಗಾವಿಯ ನಿಪ್ಪಾಣಿ ತಾಲೂಕಿನಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ ಸಚಿವೆ ಶಶಿಕಲಾ ಜೊಲ್ಲೆ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.
ಕೊರೊನಾ ಸೋಂಕಿತ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕಾರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಿಶಿಕಲಾ ಜೊಲ್ಲೆ ಮತ್ತು ಚಿಕ್ಕೋಡಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಇದೀಗ ನಿಪ್ಪಾಣಿ ತಾಲೂಕಿನ ಗಡಿ ಗ್ರಾಮವಾದ ಬೊರಗಾಂವ್ ಮದರಸಾದಲ್ಲಿ 25 ಹಾಸಿಗೆಯ ಕೋವಿಡ್ ಕೇರ್ ಸೆಂಟರ್ ಪ್ರಾರಂಭಿಸುವ ನಿರ್ಧಾರ ಕೈಗೊಂಡಿದ್ದಾರೆ. ಈ ಮೂಲಕ ಗಡಿ ಭಾಗದ ಜನರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ.
ಕರ್ನಾಟಕ-ಮಹಾರಾಷ್ಟ್ರದ ಗಡಿಯಲ್ಲಿರುವ ಗ್ರಾಮಗಳಲ್ಲಿ ಹೆಚ್ಚಾಗಿ ಮಹಾರಾಷ್ಟ್ರದ ನಂಟು ಹೊಂದಿರುವ ಕಾರಣ ಕೊರೊನಾ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಸ್ಥಳೀಯ ಖಾಸಗಿ ಆಸ್ಪತ್ರೆಗಳು ಭರ್ತಿಯಾಗಿದ್ದು, ಗಡಿ ಜನರು ಮಹಾರಾಷ್ಟ್ರದ ಆಸ್ಪತ್ರೆಗಳತ್ತ ಮುಖ ಮಾಡುವಂತಹ ಪ್ರಸಂಗ ಎದುರಾಗಿದೆ.
ಈ ಹಿನ್ನಲೆಯಲ್ಲಿ ಗಡಿ ಭಾಗದ ಜನರಿಗೆ ಅನಕೂಲವಾಗುವ ದೃಷ್ಟಿಯಿಂದ ಗಡಿಯಲ್ಲಿ ಕೊವೀಡ್ ಕೇರ್ ಸೆಂಟರ್ ಪ್ರಾರಂಭಿಸುವುದರ ಮೂಲಕ ಅಲ್ಲಿನ ಜನರಿಗೆ ಅನಕೂಲ ಮಾಡಿಕೊಟ್ಟಿದ್ದಾರೆ. ಬೋರಗಾಂವ ಮದರಸಾದಲ್ಲಿ ಆಕ್ಸಿಜನ್ ವ್ಯವಸ್ಥೆ ಕಲ್ಪಿಸಿದ್ದು, ಮಹಾರಾಷ್ಟ್ರದ ಆಸ್ಪತ್ರೆಗಳ ಮೇಲೆ ಅವಲಂಭಿತವಾಗಿದ್ದ ಗಡಿ ಜನತೆಗೆ ಇದರಿಂದ ಸಹಾಯವಾಗಿದೆ.