ಚಿಕ್ಕೋಡಿ : ನಿಪ್ಪಾಣಿ ಪಟ್ಟಣದ ಹೊರ ವಲಯದಲ್ಲಿ ಕೊವಿಡ್-19 ಚಿಕಿತ್ಸೆಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ನಿರ್ಮಿಸಲಾದ 50 ಹಾಸಿಗೆಗಳ ಕೋವಿಡ್ ಸೆಂಟರ್ಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಚಿಕ್ಕೋಡಿ ಲೋಕಸಭೆ ಸಂಸದ ಅಣ್ಣಾ ಸಾಹೇಬ ಜೊಲ್ಲೆ ಭೇಟಿ ನೀಡಿ ಪರಿಶೀಲಿಸಿದರು.
ಕೋವಿಡ್-19 ಎಂಬ ವೈರಸ್ ಇಡೀ ಸಮಾಜದಲ್ಲಿ ಆತಂಕ ಸೃಷ್ಟಿಸಿದ ಈ ಸಮಯದಲ್ಲಿ ಪ್ರಜೆಗಳ ಹಿತಾಸಕ್ತಿ ಕಾಪಾಡುವ ಮಹತ್ತರ ಜವಾಬ್ದಾರಿಯನ್ನು ಮಾಡುತ್ತಿದ್ದೇನೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಪ್ರಕಾಶ ಗಾಯಕವಾಡ, ಪೌರಾಯುಕ್ತ ಮಹಾವೀರ ಬೋರಣ್ಣವರ, ತಾಲೂಕು ವೈದ್ಯಾಧಿಕಾರಿ ಡಾ. ವಿಠ್ಠಲ ಶಿಂಧೆ, ಡಾ. ಸೀಮಾ ಗುಂಜ್ಯಾಳೆ, ಸಿಪಿಐ ಸಂತೋಷ ಸತ್ಯನಾಯಿಕ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.