ETV Bharat / state

ಬೆಳಗಾವಿ: ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ಶಿರಸ್ತೇದಾರ್ ಕೋವಿಡ್​ಗೆ ಬಲಿ - ಕೋವಿಡ್​ನಿಂದ ಶಿರಸ್ತೇದಾರ್​ ಸಾವು

ಬೆಳಗಾವಿ ಲೋಕಸಭೆ ಉಪಚುನಾವಣೆ ವೇಳೆ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ಅಧಿಕಾರಿ ಕೋವಿಡ್ ಸೋಂಕಿನಿಂದ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.

shirastedar-vijayashree-died-due-to-covid-in-belagavi
ಶಿರಸ್ತೇದಾರ್ ಕೋವಿಡ್​ನಿಂದ ಸಾವು
author img

By

Published : May 15, 2021, 10:47 AM IST

ಬೆಳಗಾವಿ: ಲೋಕಸಭೆ ಉಪಚುನಾವಣೆ ವೇಳೆ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ವಿಜಯಶ್ರೀ ನಾಗನೂರಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ.

ನಗರದ ಯಮನಾಪುರ ನಿವಾಸಿ ವಿಜಯಶ್ರೀ ನಾಗನೂರಿ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯ ಚುನಾವಣಾ ವಿಭಾಗದಲ್ಲಿ ಶಿರಸ್ತೇದಾರ್​ ಆಗಿದ್ದರು. ಚುನಾವಣೆ ಫಲಿತಾಂಶ ಬಂದ ಬಳಿಕ ಮೇ 3ರಂದು ವಿಜಯಶ್ರೀ ನಾಗನೂರಿಗೆ ಕೋವಿಡ್ ಸೋಂಕು ದೃಢಪಟ್ಟಿತ್ತು.

ಕಳೆದ 10 ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಇಂದು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಅವರ ಕುಟುಂಬದ 10 ಜನ ಸದಸ್ಯರಿಗೂ ಕೋವಿಡ್ ಸೋಂಕು ತಗುಲಿದೆ.

ಸಚಿವ ಕಾರಜೋಳ ಸಂತಾಪ:

ವಿಜಯಶ್ರೀ ಕೋವಿಡ್​ನಿಂದ ನಿಧನರಾಗಿರುವುದಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಸಂತಾಪ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಕೂಡ ಸಂತಾಪ ವ್ಯಕ್ತಪಡಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯ ಚುನಾವಣಾ ಶಾಖೆಯಲ್ಲಿ ಹಲವಾರು ವರ್ಷಗಳಿಂದ ದಕ್ಷತೆಯಿಂದ ಕಾರ್ಯನಿರ್ವಹಿಸುತ್ತಿದ್ದ ನಾಗನೂರಿ ಅವರ ನಿಧನದಿಂದ ಆಘಾತ ಉಂಟಾಗಿದೆ. ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ಅವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಇಸ್ರೇಲ್​​ನಲ್ಲಿ ನಡೆದ ದಾಳಿಯಲ್ಲಿ ಮೃತಪಟ್ಟ ಕೇರಳ ಮಹಿಳೆಯ ಮೃತದೇಹ ಭಾರತಕ್ಕೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.