ಬೆಳಗಾವಿ : ಗಡಿ ವಿಚಾರದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಭಾವಚಿತ್ರವಿರುವ ಪ್ರತಿಕೃತಿಯನ್ನು ಕನ್ನಡಪರ ಸಂಘಟನೆಗಳು ದಹನ ಮಾಡಿದ್ದರು. ಇದರ ಪ್ರತಿಯಾಗಿ ಇಂದು ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಶಿವಸೇನೆ ಪುಂಡರು ಕರ್ನಾಟಕ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಸುಟ್ಟು ಹಾಕಿ ಉದ್ಧಟತನ ಪ್ರದರ್ಶಿಸಿದ್ದಾರೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹುತಾತ್ಮರ ದಿನ ಅಂಗವಾಗಿ ಟ್ವೀಟ್ ಮಾಡಿದ್ದರು. ಅದರಲ್ಲಿ ಮರಾಠಿ ಭಾಷಿಕರು ಬಹುಸಂಖ್ಯಾತರಾಗಿರುವ ಪ್ರದೇಶವನ್ನು ಕರ್ನಾಟಕ ಆಕ್ರಮಿತ ಪ್ರದೇಶವೆಂದು ಘೋಷಿಸ್ತೇವೆ. ಇದು ಗಡಿ ಹೋರಾಟದಲ್ಲಿ ಪ್ರಾಣ ತೆತ್ತವರಿಗೆ ನೀಡುವ ಗೌರವ.
ಮರಾಠಿ ಭಾಷಿಕರು ಬಹುಸಂಖ್ಯಾತರಾಗಿರುವ ಕರ್ನಾಟಕದ ಆಕ್ರಮಿತ ಪ್ರದೇಶವನ್ನು ಮಹಾರಾಷ್ಟ್ರಕ್ಕೆ ಸೇರ್ಪಡೆ ಮಾಡುತ್ತೇವೆ ಎಂದು ಮಹಾ ಸಿಎಂ ಉದ್ದವ್ ಠಾಕ್ರೆ ವಿವಾದಾತ್ಮಕ ಟ್ವೀಟ್ ಮಾಡಿದ್ದರು.
ಇದರಿಂದ ರಾಜ್ಯದಲ್ಲಿ ಕನ್ನಡಪರ ಸಂಘಟನೆಗಳು ಉದ್ಧವ್ ಠಾಕ್ರೆ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದರು.