ಚಿಕ್ಕೋಡಿ(ಬೆಳಗಾವಿ): ಕರ್ನಾಟಕ ಸರ್ಕಾರದಿಂದ ಗಡಿ ಭಾಗದ ಮರಾಠಿ ಭಾಷಿಕರಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ಮಹಾರಾಷ್ಟ್ರ ಕೊಲ್ಲಾಪುರ ನಗರದಲ್ಲಿ ಶಿವಸೇನೆ ಬೃಹತ್ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಗಡಿ ಭಾಗದಲ್ಲಿ ಭಾರಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕೊಗನೊಳ್ಳಿ ಚೆಕ್ಪೋಸ್ಟ್ನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಬೆಳಗಾವಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಬೆಳಗಿನಿಂದಲೇ ಪೊಲೀಸರು ಮಹಾರಾಷ್ಟ್ರ ಕರ್ನಾಟಕ ಗಡಿ ಪ್ರದೇಶ ಮೇಲೆ ನಿಗಾ ಇಟ್ಟಿದ್ದಾರೆ.
ಮಹಾರಾಷ್ಟ್ರ ಕೊಲ್ಲಾಪುರದಲ್ಲಿ ಕರ್ನಾಟಕ ಸರ್ಕಾರವು ಗಡಿ ಮರಾಠಿ ಭಾಷಿಕರಿಗೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿ ಹಾಗೂ ಛತ್ರಪತಿ ಶಿವಾಜಿ ಮಹಾರಾಜರ ವಿರುದ್ಧ ಬಿಜೆಪಿ ನಾಯಕರು ಕಾಲಕಾಲಕ್ಕೆ ನೀಡುತ್ತಿರುವ ಅವಹೇಳನಕಾರಿ ಹೇಳಿಕೆ ಖಂಡಿಸಿ ಇಂದು ಕೊಲ್ಲಾಪುರದಲ್ಲಿ ಮಹಾವಿಕಾಸ ಅಘಾಡಿ ಸಂಘಟನೆ ನಗರದ ಶಾಹು ಮಹಾರಾಜ್ ಸಮಾಧಿ ಸ್ಥಳದಲ್ಲಿ ಪ್ರತಿಭಟನೆ ನಡೆಸುತ್ತಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಕರ್ನಾಟಕ ಗಡಿಯಲ್ಲಿ ಬಾರಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಇದನ್ನೂ ಓದಿ: ಪಕ್ಷ ಬೇರೆ ಇದ್ದರೂ ನೆಲ, ಜಲ ವಿಚಾರದಲ್ಲಿ ನಾವೆಲ್ಲ ಒಂದೇ: ಎಂಇಎಸ್‌ಗೆ ಸವದಿ ಎಚ್ಚರಿಕೆ