ETV Bharat / state

ಹೆಣ್ಣುಮಕ್ಕಳ ಆತ್ಮರಕ್ಷಣೆಗೆ ಅಲ್ಪಾವಧಿ ಕೋರ್ಸ್​​ ಪ್ರಾರಂಭಿಸಲು ಚಿಂತನೆ: ಸಿಎಂ ಬೊಮ್ಮಾಯಿ

ಹೆಣ್ಣುಮಕ್ಕಳ ಆತ್ಮರಕ್ಷಣೆಗೆ ಅಲ್ಪಾವಧಿ ಕೋರ್ಸ್​​ ಪ್ರಾರಂಭಕ್ಕೆ ಚಿಂತನೆ ನಡೆಸಲಾಗುತ್ತಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

short term courses to girls
ಹೆಣ್ಣುಮಕ್ಕಳ ಆತ್ಮರಕ್ಷಣೆಗೆ ಕೋರ್ಸು
author img

By

Published : Dec 23, 2022, 6:05 PM IST

ಬೆಳಗಾವಿ: ಮುಂದಿನ ಶೈಕ್ಷಣಿಕ ವರ್ಷದಿಂದ ಯೋಗದೊಂದಿಗೆ ಹೆಣ್ಣುಮಕ್ಕಳ ಆತ್ಮರಕ್ಷಣೆಗೆ ಅಲ್ಪಾವಧಿ ಕೋರ್ಸುಗಳ ಪ್ರಾರಂಭಕ್ಕೆ ಸರ್ಕಾರ ಚಿಂತಿಸುತ್ತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ನಗರದಲ್ಲಿಂದು ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಓಬವ್ವ ಆತ್ಮರಕ್ಷಣಾ ಕಲೆ ಕರಾಟೆ ಪ್ರದರ್ಶನ ವೀಕ್ಷಿಸಿ ಮಾತನಾಡಿದರು.

ಎಲ್ಲಾ ಶಿಕ್ಷಣ ಸಂಸ್ಥೆಗಳು ಅಲ್ಪಾವಧಿ ಕೋರ್ಸುಗಳನ್ನು ಕಲಿಸುವ ಅವಶ್ಯಕತೆ ಇದೆ. ಆತ್ಮರಕ್ಷಣೆಗೆ ಅಲ್ಪಾವಧಿ ಕೋರ್ಸುಗಳನ್ನು ಪಿಯುಸಿ ಹಂತದಿಂದಲೇ ಶುರು ಮಾಡುವುದು ಸೂಕ್ತ. ಈ ಬಗ್ಗೆ ಒಂದು ನಿರ್ಧಾರಕ್ಕೆ ಬರಲಾಗುವುದು ಎಂದರು.

short term courses to girls
ಕರಾಟೆ ಪ್ರದರ್ಶನ

ಆತ್ಮರಕ್ಷಣೆ ಪ್ರತೀ ನಾಗರೀಕನಿಗೂ ಅಗತ್ಯ. ನಾನು ಗೃಹ ಸಚಿವನಿದ್ದ ಸಂದರ್ಭದಲ್ಲಿ ಕೆಲವು ನಿರ್ಧಾರಗಳನ್ನು ತೆಗೆದುಕೊಂಡಿದ್ದು, ಆತ್ಮರಕ್ಷಣೆಗಾಗಿ ಕರಾಟೆ ತರಬೇತಿಯನ್ನು ಹೆಣ್ಣುಮಕ್ಕಳಿಗೆ ನೀಡಬೇಕೆಂದು ತೀರ್ಮಾನಿಸಲಾಗಿತ್ತು. ವಸತಿ ಶಿಕ್ಷಣ ಸಂಸ್ಥೆ ಇದನ್ನು ಅಳವಡಿಸಿಕೊಂಡು ಕಳೆದೊಂದು ವರ್ಷದಲ್ಲಿ ದೊಡ್ಡ ಪ್ರಮಾಣದಲ್ಲಿ ತರಬೇತಿ ನೀಡಿರುವುದು ಶ್ಲಾಘನೀಯ ಎಂದು ಹೇಳಿದರು.

ಆತ್ಮರಕ್ಷಣಾ ಕಲೆ ಕಲಿತವರು ಇತರ ಹೆಣ್ಣುಮಕ್ಕಳಿಗೆ ಈ ತರಬೇತಿ ನೀಡಬೇಕು. ಗ್ರಾಮೀಣ ಮಹಿಳೆಯರು, ದುಡಿಯುವ ಮಹಿಳೆಯರು, ಶಾಲಾ ಕಾಲೇಜುಗಳ ವಿದ್ಯಾರ್ಥಿನಿಯರು, ಸಹೋದರಿಯರಿಗೆ ಈ ವಿದ್ಯೆ ಕಲಿಸಿದರೆ ದೊಡ್ಡ ಪ್ರಮಾಣದಲ್ಲಿ ವಿಸ್ತರಿಸಬಹುದು. ಹೆಣ್ಣುಮಕ್ಕಳಿಗೆ ಆತ್ಮರಕ್ಷಣೆ ಕಲೆ ತಿಳಿದಿದ್ದರೆ ಸಮಾಜಕ್ಕೂ ಸುರಕ್ಷತೆ ಇದ್ದಂತೆ. ಸರ್ಕಾರ ಈ ಕಾರ್ಯಕ್ರಮ ವಿಸ್ತರಿಸಿ ಹೆಣ್ಣುಮಕ್ಕಳ ಸುರಕ್ಷತೆಗೆ ಆದ್ಯತೆ ನೀಡಿದೆ. ನಿರ್ಭಯ ಯೋಜನೆಯನ್ನು 700 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಳ್ಳಲಾಗಿದೆ. ಇದನ್ನು ಎಲ್ಲಾ ನಗರಗಳಿಗೆ ವಿಸ್ತರಿಸಲು ತೀರ್ಮಾನಿಸಲಾಗಿದೆ ಎಂದು ಸಿಎಂ ತಿಳಿಸಿದರು.

ಇದನ್ನೂ ಓದಿ: ಒಕ್ಕಲಿಗರ ಮೀಸಲಾತಿ ಹೆಚ್ಚಳಕ್ಕೆ ಆಗ್ರಹ: ಸಿಎಂ ಭೇಟಿಯಾದ ಸಮುದಾಯದ ನಾಯಕರು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.