ETV Bharat / state

ಮಹಾರಾಷ್ಟ್ರದ ಗಡಿ ಕನ್ನಡ ಶಾಲೆಗಳಲ್ಲಿ ಶಿಕ್ಷಕರ ಕೊರತೆ: ಕನ್ನಡಿಗರ ಆಕ್ರೋಶ - ಮಹಾರಾಷ್ಟ್ರ ಗಡಿ ಕನ್ನಡ ಶಾಲೆಗಳ ಸಮಸ್ಯೆ

ಮಹಾರಾಷ್ಟದ ಗಡಿ ತಾಲೂಕು ಜತ್ತದಲ್ಲಿ ಕನ್ನಡದ ಶಾಲೆಗಳಲ್ಲಿ ಶಿಕ್ಷರ ಕೊರತೆ ಮತ್ತು ಮೂಲಭೂತ ಸೌಕರ್ಯಗಳಿಲ್ಲದ ಕಾರಣ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಅಲ್ಲಿನ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಹಾರಾಷ್ಟ್ರ ಗಡಿ ಕನ್ನಡ ಶಾಲೆ
ಮಹಾರಾಷ್ಟ್ರ ಗಡಿ ಕನ್ನಡ ಶಾಲೆ
author img

By ETV Bharat Karnataka Team

Published : Oct 19, 2023, 9:47 PM IST

ಗಡಿ ಕನ್ನಡಿಗರ ಹೇಳಿಕೆ

ಚಿಕ್ಕೋಡಿ: ಕರ್ನಾಟಕ ಗಡಿ ಹೊಂದಿರುವ ಮಹಾರಾಷ್ಟ್ರದ ಗ್ರಾಮಗಳಲ್ಲಿ ಕನ್ನಡ ಶಾಲೆಗಳು ದುಸ್ಥಿತಿಯಲ್ಲಿವೆ. ಗಡಿನಾಡು ಕನ್ನಡಿಗರ ಒತ್ತಾಯದ ಮೇರೆಗೆ ದಶಕಗಳ ಹಿಂದೆ ಕನ್ನಡ ಭಾಷೆ ಕಲಿಕೆಯ ಶಾಲೆಗಳ ನಿರ್ಮಾಣ ಮಾಡಲಾಗಿತ್ತು. ಆದರೆ ಆ ಶಾಲೆಗಳಿಗೆ ಶಿಕ್ಷಕರ ಕೊರತೆ ಇರುವುದರಿಂದ ಕ್ರಮೇಣ ಮಕ್ಕಳು ಮರಾಠಿ ಭಾಷೆಗಳತ್ತ ಒಲವು ತೋರುತ್ತಿದ್ದಾರೆ. ಪರಿಣಾಮ, ಮಹಾರಾಷ್ಟ್ರ ಸರ್ಕಾರ ಗಡಿಯಲ್ಲಿ ಕನ್ನಡ ಶಾಲೆಗಳನ್ನು ಮುಚ್ಚುವಂತಹ ಕುತಂತ್ರ ನಡೆಸುತ್ತಿದೆ ಎಂದು ಜತ್ತ ತಾಲೂಕಿನ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜತ್ತ ತಾಲೂಕಿನಲ್ಲಿ 82 ಕನ್ನಡ ಪ್ರಾಥಮಿಕ ಶಾಲೆಗಳಿವೆ. ಪ್ರತಿಯೊಂದು ಶಾಲೆಯಲ್ಲಿ ಒಂದರಿಂದ ಎಂಟನೇಯ ತರಗತಿ ಕಲಿಯೋದಕ್ಕೆ ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಆದರೆ ಈ ಶಾಲೆಗಳಲ್ಲಿ ಒಂದರಿಂದ ಎಂಟನೇ ತರಗತಿ ವಿದ್ಯಾಭ್ಯಾಸಕ್ಕೆ ಇಬ್ಬರೇ ಶಿಕ್ಷಕರನ್ನು ನೇಮಕ ಮಾಡಿ ಮಹಾ ಸರ್ಕಾರ ಕನ್ನಡ ಕಲಿಯುತ್ತಿರುವ ಮಕ್ಕಳ ಮೇಲೆ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಅಲ್ಲಿನ ಸ್ಥಳೀಯ ಕನ್ನಡಿಗರು ಆರೋಪ ಮಾಡಿದ್ದಾರೆ.

ಬಹುತೇಕ ಕನ್ನಡ ಶಾಲೆಗಳಿಗೆ ಮೂಲಭೂತ ಸೌಕರ್ಯವಿಲ್ಲ. ಇದಕ್ಕಾಗಿ ಸಂಬಂಧಪಟ್ಟ ಅಧಿಕಾರಿಗಳಿಗೆ ಎಷ್ಟೇ ಮನವಿ ಸಲ್ಲಿಸಿದರೂ ಪ್ರಯೋಜನವಾಗುತ್ತಿಲ್ಲ. ಕ್ರಮೇಣ ಇಲ್ಲಿನ ಕನ್ನಡ ಶಾಲೆಗಳು ಮುಚ್ಚುವ ಹಂತಕ್ಕೆ ಬಂದಿವೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

ಜತ್ತ ತಾಲೂಕಿನ ಸಿಂಧೂರು ಗ್ರಾಮದ ಕನ್ನಡಿಗರಾದ ರಮಜಾನ್ ಮುಲ್ಲಾ ಮತ್ತು ಸುರೇಶ್ ರಾಮು ಮುಡ್ಸಿ ಹಾಗೂ ಅಣ್ಣಪ್ಪಾ ಚಂದಪ್ಪ ಅಂದಾಣಿ ಮಾತನಾಡಿ, ವೀರ ಸಿಂಧೂರು ಲಕ್ಷ್ಮಣ ಊರಾದ ಸಿಂಧೂರು ಗ್ರಾಮದಲ್ಲಿ ಕನ್ನಡ ಶಾಲೆಯಲ್ಲಿ ಶಿಕ್ಷಕರ ಕೊರತೆ ಎದ್ದು ಕಾಣುತ್ತಿದೆ. ಇಲ್ಲಿನ ಶಿಕ್ಷಕರ ಕೊರತೆಯಿಂದ ಹಲವು ಬಾರಿ ಮಹಾರಾಷ್ಟ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರೂ ಪ್ರಯೋಜನವಾಗುತ್ತಿಲ್ಲ. ಸ್ಥಳೀಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಪ್ರತಿಭಟನೆ ಮಾಡಿದರೂ ಅಧಿಕಾರಿಗಳು ಬಗ್ಗುತ್ತಿಲ್ಲ. ನಾವು ಮೂಲತವಾಗಿ ಕನ್ನಡಿಗರಾಗಿರುವುದರಿಂದ ಪಕ್ಕದ ಕರ್ನಾಟಕ ರಾಜ್ಯದ ಅಥಣಿ ತಾಲೂಕಿನ ಕಕಮರಿ ಕೊಟ್ಟಲಗಿ ಗ್ರಾಮಗಳಿಗೆ ಮಕ್ಕಳನ್ನು ಶಾಲೆಗೆ ಕಳುಹಿಸುತ್ತೇವೆ.

ಆದರೆ ಮಹಾರಾಷ್ಟ್ರ ಸರ್ಕಾರ ಇಲ್ಲಿನ ಕನ್ನಡ ಶಾಲೆಗಳಿಗೆ ಶಿಕ್ಷಕರ ಕೊರತೆ ನೀಗಿಸುತ್ತಿಲ್ಲ. ಈ ಗ್ರಾಮದ ಶಾಲೆಯಲ್ಲಿ ಒಂದರಿಂದ ಎಂಟನೇ ತರಗತಿ ವಿದ್ಯಾಭ್ಯಾಸಕ್ಕೆ ಅನುಕೂಲವಿದೆ. ಆದರೆ ಎಂಟು ತರಗತಿಗಳಿಗೆ ಮೂರು ಜನ ಶಿಕ್ಷಕರು ಇರುವುದರಿಂದ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ತೀವ್ರ ತೊಂದರೆಯಾಗುತ್ತಿದೆ. ನಾವು ಅಲ್ಪಸ್ವಲ್ಪ ಹಣವಂತರಿರುವುದರಿಂದ ನಮ್ಮ ಮಕ್ಕಳನ್ನು ಬೇರೆ ಶಾಲೆಗಳಿಗೆ ವಿದ್ಯಾಭ್ಯಾಸಕ್ಕೆ ಕಳುಹಿಸುತ್ತೇವೆ. ಆದರೆ ಗಡಿ ಹೊಂದಿರುವ ಗ್ರಾಮಗಳಲ್ಲಿ ಹೆಚ್ಚಾಗಿ ಕನ್ನಡಿಗರು ಇದ್ದಾರೆ. ಅದರಲ್ಲೂ ಬಡತನ ರೇಖೆಗಿಂತ ಕೆಳಗಿರುವ ಜನಸಂಖ್ಯೆ ಹೆಚ್ಚು ಇರೋದ್ರಿಂದ ಈ ಕುಟುಂಬದ ಮಕ್ಕಳು ಅನಿವಾರ್ಯವಾಗಿ ಇಲ್ಲೇ ಕಲಿಯಬೇಕು. ಶಿಕ್ಷಕರ ಕೊರತೆಯಿಂದ ಅವರ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ.

ಇದನ್ನು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಗಮನಿಸಿ ಮಹಾರಾಷ್ಟ್ರ ಸರ್ಕಾರದ ಜತೆ ತುರ್ತಾಗಿ ಮಾತನಾಡಿ ನಮ್ಮ ಶಾಲೆಗಳಿಗೆ ಕನ್ನಡ ಶಿಕ್ಷಕರ ನೇಮಕಾತಿ ಮಾಡಲೇಬೇಕು. ಕರ್ನಾಟಕದಲ್ಲಿ ಕನ್ನಡ ಶಾಲೆಗಳಲ್ಲಿ ದೊರೆಯುವಂತಹ ಹಲವು ಯೋಜನೆಗಳು ಮಹಾರಾಷ್ಟ್ರದ ಕನ್ನಡ ಮಾಧ್ಯಮದ ಮಕ್ಕಳಿಗೆ ಯೋಜನೆಗಳನ್ನು ಕೊಡಬೇಕು. ಇಲ್ಲಿನ ಶಾಲೆ ವಿದ್ಯಾರ್ಥಿಗಳಿಗೆ ಯಾವುದೇ ಸೌಕರ್ಯಗಳು ಸಿಗೋದಿಲ್ಲ, ಮಹಾರಾಷ್ಟ್ರ ಗಡಿ ಹೊಂದಿರುವ ಕನ್ನಡ ಶಾಲೆಗಳಲ್ಲಿ ಕರ್ನಾಟಕ ಸರ್ಕಾರ ಅಲ್ಲಿನ ಮಕ್ಕಳಿಗೆ ಕ್ಷೀರ ಭಾಗ್ಯ, ಶೂಭಾಗ್ಯ, ಸೈಕಲ್ ಭಾಗ್ಯ, ಹಲವಾರು ಯೋಜನೆಗಳನ್ನು ಕೊಡುತ್ತಿದೆ. ಮಹಾರಾಷ್ಟ್ರದಲ್ಲಿ ಕಲಿಯುತ್ತಿರುವ ಕನ್ನಡ ಶಾಲೆ ಮಕ್ಕಳಿಗೂ ವಿಸ್ತರಣೆ ಮಾಡಬೇಕೆಂದು ಒತ್ತಾಯಿಸಿದರು.

ಭಾಷಾವಾರು ಪ್ರಾಂತ್ಯಗಳ ರಚನೆಯ ಸಂದರ್ಭದಲ್ಲಿ ನಮಗೆ ಅನ್ಯಾಯವಾಗಿ ಅನಿವಾರ್ಯವಾಗಿ ಇಲ್ಲಿ ವಾಸಿಸುವಂತಾಗಿದೆ. ನಾವೆಲ್ಲರೂ ಕನ್ನಡಿಗರಾಗಿರುವುದರಿಂದ ಕರ್ನಾಟಕ ಸರ್ಕಾರ ನಮಗೆ ಹೆಚ್ಚಿನ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು, ಕನ್ನಡಮಯ ವಾತಾವರಣವನ್ನು ನಿರ್ಮಾಣ ಮಾಡಬೇಕು. ಇಲ್ಲಿನ ಮರಾಠಿಮಯ ವಾತಾವರಣ ನಮಗೆ ಉಸಿರುಗಟ್ಟಿಸುವ ರೀತಿ ಭಾಸವಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಜತ್ತ ತಾಲೂಕಿಗೆ ಒಂದು ಸಾರಿ ಭೇಟಿ ಕೊಡಲಿ ಎಂದು ಒತ್ತಾಯಿಸಿದರು.

ಜತ್ತ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಅನ್ಸಾರಿ ಶೇಕ್ ಈಟಿವಿ ಭಾರತ ಜತೆ ದೂರವಾಣಿ ಮುಖಾಂತರ ಮಾತನಾಡಿ, ಜತ್ ತಾಲೂಕಿನಲ್ಲಿ ಹಿರಿಯ ಮತ್ತು ಕಿರಿಯ ಪ್ರಾಥಮಿಕ 145 ಶಾಲೆಗಳಿದ್ದಾವೆ. ಇದರಲ್ಲಿ 400 ಶಿಕ್ಷಕರ ಪೈಕಿ 280 ಶಿಕ್ಷಕರು ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. 110 ಶಿಕ್ಷಕರ ಕೊರತೆ ಇರುವುದರಿಂದ ನಾವು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ, ಆದಷ್ಟು ಬೇಗನೆ ಖಾಲಿ ಹುದ್ದೆಗಳನ್ನು ಭರ್ತಿ ಮಾಡುತ್ತೇವೆ ಎಂದು ಭರವಸೆ ನೀಡಿದರು.

ಇದನ್ನೂ ಓದಿ: RDPR ಇಲಾಖೆಗೆ ಶಾಲಾಡಳಿತದ ಜವಾಬ್ದಾರಿ: ಸರ್ಕಾರಕ್ಕೆ ಪತ್ರ ಬರೆದು ಆಕ್ಷೇಪ ವ್ಯಕ್ತಪಡಿಸಿದ ಶಿಕ್ಷಕರ ಸಂಘ..

ETV Bharat Logo

Copyright © 2024 Ushodaya Enterprises Pvt. Ltd., All Rights Reserved.