ಬೆಳಗಾವಿ: ಕಿತ್ತೂರು ಶಾಸಕ ಮಹಾಂತೇಶ ದೊಡ್ಡಗೌಡರಿಗೆ ಪುಷ್ಪವೃಷ್ಟಿ ಮಾಡಿರುವ ಪೊಲೀಸ್ ಅಧಿಕಾರಿಗಳ ವಿಡಿಯೋ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಬೆಳಗಾವಿ ಎಸ್ಪಿ ಲಕ್ಷ್ಮಣ ನಿಂಬರಗಿ ಹೇಳಿದರು.
ನಗರದಲ್ಲಿ ಬೈಲಹೊಂಗಲ ಪಟ್ಟಣದಲ್ಲಿರುವ ಶಾಸಕ ಮಹಾಂತೇಶ ದೊಡ್ಡಗೌಡರಿಗೆ ಪೊಲೀಸರಿಂದ ಪುಷ್ಪವೃಷ್ಟಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಬೆಳಗಾವಿ ಎಸ್ಪಿ ಲಕ್ಷ್ಮಣ ನಿಂಬರಗಿ, ಸಾಮಾಜಿಕ ಜಾತಲಾಣದಲ್ಲಿ ವಿಡಿಯೋ ಬಂದಿರುವುದನ್ನು ನೋಡಿದ್ದೇನೆ. ಅದರ ಬಗ್ಗೆ ಮಾಹಿತಿ ಇಲ್ಲ. ವಿಡಿಯೋ ಬಗ್ಗೆ ಪರಿಶೀಲನೆ ನಡೆಸಿ ಪೊಲೀಸ್ ಅಧಿಕಾರಿಗಳು ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಶಾಸಕ ಮಹಾಂತೇಶ ದೊಡ್ದಗೌಡರ ದಂಪತಿಗೆ ಪುಷ್ಪವೃಷ್ಟಿ ಮಾಡಿದ ಪೊಲೀಸ್ ಅಧಿಕಾರಿಗಳಿಗೆ ಬೆಳಗಾವಿ ಎಸ್ಪಿ ಲಕ್ಷ್ಮಣ ನಿಂಬರಿಗೆ ಶೋಕಾಸ್ ನೋಟಿಸ್ ಜಾರಿಗೊಳಿಸಿದ್ದಾರೆ. ಬೈಲಹೊಂಗಲ ಡಿವೈಎಸ್‌ಪಿ ಶಿವಾನಂದ ಕಟಗಿ, ಬೈಲಹೊಂಗಲ ಸಿಪಿಐ ಯು.ಬಿ.ಸಾತೇನಹಳ್ಳಿ, ನೇಸರಗಿ ಠಾಣೆ ಪಿಎಸ್ಐ ವೈ.ಎಸ್.ಶೀಗಿಹಳ್ಳಿಗೆ ಶೋಕಾಸ್ ನೋಟಿಸ್ ಜಾರಿಗೊಳಿಸಲಾಗಿದೆ.
ಕಿತ್ತೂರು ಶಾಸಕ ಮಹಾಂತೇಶ ದೊಡ್ಡಗೌಡರ ಹಾಗೂ ಅವರ ಪತ್ನಿಯನ್ನು ಕೂರಿಸಿ ಪೊಲೀಸರು ಪುಷ್ಪವೃಷ್ಟಿ ಮಾಡಿದ್ದರು. ಕಳೆದ ಎರಡು ದಿನಗಳ ಹಿಂದೆ ಶಾಸಕ ಮಹಾಂತೇಶ ದೊಡ್ಡಗೌಡರ ಜನ್ಮದಿನದಂದು ಈ ಘಟನೆ ನಡೆದಿತ್ತು.
ಪೊಲೀಸರು ಪುಷ್ಪವೃಷ್ಟಿ ಮಾಡುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಶಾಸಕರು ಹಾಗೂ ಪೊಲೀಸರ ವರ್ತನೆಗೆ ವ್ಯಾಪಕ ಟೀಕೆಗಳು ಕೇಳಿ ಬಂದಿದ್ದವು. ಹೀಗಾಗಿ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಇಲಾಖೆ ಮುಂದಾಗಿದೆ.
ಓದಿ: VIDEO: ಕಿತ್ತೂರು ಶಾಸಕ, ಅವರ ಪತ್ನಿಗೆ ಹೂಮಳೆಗರೆದ ಪೊಲೀಸರು: ವ್ಯಾಪಕ ಆಕ್ರೋಶ