ETV Bharat / state

ಸಿದ್ದರಾಮಯ್ಯ ಬ್ಯಾಲೆನ್ಸ್ ಕಳೆದುಕೊಂಡಿದ್ದಾರೆ: ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ - ಆರ್​​ಎಸ್​​ಎಸ್ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಮಾಜಿ ಸಿಎಂ ಸಿದ್ದರಾಮಯ್ಯ ಬ್ಯಾಲೆನ್ಸ್ ಕಳೆದುಕೊಂಡಿದ್ದಾರೆ- ಅತ್ಯಂತ ನಿಷ್ಪ್ರಯೋಜಕ ಹೇಳಿಕೆ ನೀಡುತ್ತಿದ್ದಾರೆ- ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ

Pralhad Joshi
ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ
author img

By

Published : Jan 7, 2023, 12:14 PM IST

ಸಿದ್ದರಾಮಯ್ಯ ಬ್ಯಾಲೆನ್ಸ್ ಕಳೆದುಕೊಂಡಿದ್ದಾರೆ: ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ

ಬೆಳಗಾವಿ: ಇತ್ತೀಚೆಗೆ ಮಾಜಿ ಮುಖ್ಯಮಂತ್ರಿಯೂ ಆಗಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬ್ಯಾಲೆನ್ಸ್ ಕಳೆದುಕೊಂಡಿದ್ದಾರೆ. ಹೀಗಾಗಿ ಏನೇನೋ ಮಾತನಾಡುತ್ತಿದ್ದಾರೆ. ಅವರಿಗೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಒಂದು ಕ್ಷೇತ್ರ ಸಹ ಇಲ್ಲ. ಹೀಗಾಗಿ ದಿನದಿಂದ ದಿನಕ್ಕೆ ಹತಾಶರಾಗಿದ್ದಾರೆ ಎಂದು ಕೇಂದ್ರ ಕಲ್ಲಿದ್ದಲು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಟಾಂಗ್​​ ಕೊಟ್ಟಿದ್ದಾರೆ.

ಬಿಜೆಪಿ ಹಾಗೂ ಆರ್​​ಎಸ್​​ಎಸ್ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದರು. ಈ ವಿಚಾರವಾಗಿ ಬೆಳಗಾವಿ ನಗರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಜೋಶಿ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ಅವರು ಯಾವ ಕ್ಷೇತ್ರಕ್ಕೆ ಅರ್ಜಿ ಕೊಡಬೇಕು, ಸ್ಪರ್ಧೆ ಮಾಡಬೇಕೆಂಬ ಗೊಂದಲದಲ್ಲಿದ್ದಾರೆ. ಈ ಹಿಂದೆ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಅವರು ಚಾಮುಂಡಿಯಲ್ಲಿ ಸೋತರು. ಬಾದಾಮಿಯಲ್ಲಿ ಕೇವಲ ಒಂದೂವರೆ ಸಾವಿರ ಮತಗಳಿಂದ ಗೆದ್ದಿದ್ದರು. ಇದರ ಅರ್ಥ ಅವರು ಎಲ್ಲಿ ಹೋಗ್ತಾರೋ ಅಲ್ಲಿ ಸೋಲ್ತಾರೆ ಎಂದರು.

ಸಿದ್ದರಾಮಯ್ಯಗೆ ಭಯ ಕಾಡ್ತಿದೆ.. ಈ ಹಿನ್ನೆಲೆ ಸಿದ್ದರಾಮಯ್ಯ ಅವರಿಗೆ ಭಯ ಕಾಡುತ್ತಿದೆ. ಇಂದೇ ತೀರ್ಮಾನ ಮಾಡಬೇಕು ಅಂತಾ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಮೇಲೆ ಒತ್ತಡ ಹಾಕುತ್ತಿದ್ದಾರೆ. ಶಿವಕುಮಾರ್ ಅವರಿಗೂ ಇದೇ ಬೇಕಾಗಿದ್ದು. ಎಲ್ಲೂ ಗೆಲ್ಲಲ್ಲ. ಯಾವುದನ್ನು ಹೇಳ್ತಾರೆ ಹೇಳಲಿ. ಇವರನ್ನು ಮೂಲೆ ಗುಂಪು ಮಾಡಬೇಕು ಅಂತಾ ಶಿವಕುಮಾರ್ ತೀರ್ಮಾನ ಮಾಡಿದ್ದಾರೆ. ಅದಕ್ಕೆ ಅರ್ಜಿ ಕೊಡಿ ಅಂತಾ ಹೇಳಿದ್ದಾರೆ. ಇವರು ಅರ್ಜಿ ಎಲ್ಲಿಂದ ಕೊಡಬೇಕು. ಅದಕ್ಕೆ ಹತಾಶರಾಗಿರುವ ಸಂದರ್ಭದಲ್ಲಿ ತಾನೇ ಅತ್ಯಂತ ಸ್ಟ್ರಾಂಗ್ ಲೀಡರ್ ಅಂತಾ ತೋರಿಸಿಕೊಳ್ಳಲು ಬಿಜೆಪಿ ವಿರುದ್ಧ ಹತಾಶವಾದಂತ, ಬಾಲಿಷವಾದಂತ, ಅಪ್ರಬುದ್ಧವಾದಂತ, ಅತ್ಯಂತ ನಿಷ್ಪ್ರಯೋಜಕ ಹೇಳಿಕೆಗಳನ್ನು ಸಿದ್ದರಾಮಯ್ಯ ಕೊಡ್ತಾರೆ. ಸಿದ್ದರಾಮಯ್ಯನವರ ಬಗ್ಗೆ ನನಗೆ ಕನಿಕರ ಇದೆ ಎಂದು ಜೋಶಿ ವ್ಯಂಗ್ಯವಾಡಿದರು.

ಸಂವಿಧಾನದ ಪ್ರಕಾರ ಚುನಾವಣೆಗೆ ನಿಲ್ಲಲು 25 ವರ್ಷ ವಯಸ್ಸಾಗಬೇಕು. ಹುಚ್ಚರಿರಬಾರದು. ಚುನಾವಣೆ ನಿಲ್ಲಲು ಸಿದ್ದರಾಮಯ್ಯ ಅವರಿಗೆ ಅರ್ಹತೆ ಇದೆ. ಆದರೆ ಇಷ್ಟು ವರ್ಷಗಳ ಕಾಲ ರಾಜಕಾರಣ ಮಾಡಿ ಸೋತವರು ಬ್ಯಾಲೆನ್ಸ್ ಮೆಂಟೈನ್​ ಮಾಡಬೇಕು. ಅವರ ಘನತೆ ಗೌರವಕ್ಕೆ ತಕ್ಕ ಹಾಗೇ ಮಾತಾಡಲಿ ಎಂದು ಕೆಂದ್ರ ಸಚಿವರು ಇದೇ ಸಂದರ್ಭದಲ್ಲಿ ಸಲಹೆ ನೀಡಿದರು.

ಇದನ್ನೂ ಓದಿ: ನಾನು ಹಿಂದೂ ವಿರೋಧಿಯಲ್ಲ, ಹಿಂದುತ್ವದ ವಿರೋಧಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಬಿಜೆಪಿ ನಾಯಕರು ನೀಡಿದ ಸಲಹೆ ಸೂಚನೆಗಳನ್ನ ಸಿಎಂ ಪಾಲಿಸುತ್ತಿಲ್ಲ ಎಂಬ ವಿಜಯಪುರ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​​ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸುತ್ತ, ಯಾರು ಯಾರಿಗೆ ಏನು ಸೂಚನೆ ಕೊಟ್ಟಿದ್ದಾರೆ ಅನ್ನೋದರ ಬಗ್ಗೆ ನನಗೆ ಗೊತ್ತಿಲ್ಲ. ಮುಖ್ಯಮಂತ್ರಿಗಳು ಮತ್ತು ನಮ್ಮ ರಾಷ್ಟ್ರೀಯ ಅಧ್ಯಕ್ಷರ ನಡುವೆ ಮಾತುಕತೆ ನಡೆದಿರುತ್ತದೆ. ಇದರ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ಕೊಡುವುದಿಲ್ಲ ಎಂದರು. ಪಂಚಮಸಾಲಿಗೆ ಮೀಸಲಾತಿ ಕೊಡದಿದ್ದರೆ ಹೋರಾಟ ಮಾಡುತ್ತೇವೆ ಎಂಬ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿಕೆ ವಿಚಾರವಾಗಿ ಈ ವಿಷಯದಲ್ಲಿ ಬೊಮ್ಮಾಯಿ ಅವರು ಮಾತಾಡಿದ್ದಾರೆ. ಸೂಕ್ತವಾದ ವಿಚಾರ ಮಾಡಿ ಎಲ್ಲಿಯೂ ಯಾರಿಗೂ ತೊಂದರೆ ಆಗದಂತೆ ಕಾನೂನು, ಸಂವಿಧಾನದ ನಿಬಂಧನೆಯಲ್ಲಿ ಸರಿಯಾಗಿ ಮೀಸಲಾತಿ ನೀಡುತ್ತೇನೆ ಎಂದು ಸಿಎಂ ನನಗೂ ಕರೆ ಮಾಡಿ ತಿಳಿಸಿದ್ದಾರೆ ಎಂದರು.

ಮುಖ್ಯಮಂತ್ರಿಗಳ ಮಾತನ್ನು ಒಪ್ಪಿಕೊಳ್ಳಿ. ಅವರು ನಾಲ್ಕಾರು ಹೆಜ್ಜೆ ಮುಂದಿಟ್ಟಿದ್ದಾರೆ. ಇನ್ನೊಂದೆರಡು ಹೆಜ್ಜೆ ಇದೆ. ಅದನ್ನು ಮಾಡ್ತಾರೆ ಅನ್ನೋದನ್ನ ಸ್ಪಷ್ಟವಾಗಿ ಭರವಸೆ ಕೊಟ್ಟಿದ್ದಾರೆ. ದಯವಿಟ್ಟು ಅವರನ್ನ ನಂಬಬೇಕು ಎಂದು ನಾನು ವಿನಂತಿ ಮಾಡುತ್ತೇನೆ ಎಂದು ಸಚಿವ ಪ್ರಹ್ಲಾದ್​ ಜೋಶಿ ಹೇಳಿದರು.

ಇದನ್ನೂ ಓದಿ: ಆರ್​ಎಸ್​ಎಸ್‌ನವರಿಗೆ​ ಸಮಾಜದ ಬದಲಾವಣೆ ಬೇಕಿಲ್ಲ: ಸಿದ್ದರಾಮಯ್ಯ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.