ETV Bharat / state

ಗಾಂಧೀಜಿ ಸಾವಿನಲ್ಲಿ ಸಾವರ್ಕರ್ ಕೈವಾಡವಿದೆ, ಸದನದಲ್ಲಿ ಅವರ ಫೋಟೋ ಅಗತ್ಯವಿಲ್ಲ: ಸಿದ್ದರಾಮಯ್ಯ - ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ

ವೀರ ಸಾವರ್ಕರ್ ಫೋಟೋವನ್ನು ಸದನದೊಳಗೆ ಅಳವಡಿಸುವ ಅಗತ್ಯವಿಲ್ಲ. ಮಹಾತ್ಮ ಗಾಂಧೀಜಿ ಸಾವಿನಲ್ಲಿ ಸಾವರ್ಕರ್ ಕೈವಾಡವಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

siddaramaiah
ಸಿದ್ದರಾಮಯ್ಯ
author img

By

Published : Dec 19, 2022, 7:20 AM IST

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಸಿದ್ದರಾಮಯ್ಯ

ಬೆಳಗಾವಿ: ಸದನದೊಳಗೆ ವೀರ ಸಾವರ್ಕರ್ ಭಾವಚಿತ್ರವನ್ನು ಏಕೆ ಹಾಕಲಾಗುತ್ತದೆ. ಅದರ ಅಗತ್ಯ ಇಲ್ಲ, ಇಲ್ಲಿಯವರೆಗೆ ಸದನದಲ್ಲಿ ಸಾವರ್ಕರ್ ಫೋಟೋ ಹಾಕಿಲ್ಲ, ಈಗ ಏಕೆ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಸುವರ್ಣ ವಿಧಾನಸೌಧದಲ್ಲಿ ಸಾವರ್ಕರ್ ಭಾವಚಿತ್ರ ಅಳವಡಿಕೆ ವಿಚಾರವಾಗಿ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಮಹಾತ್ಮ ಗಾಂಧಿ ಹತ್ಯೆಯಲ್ಲಿ ವೀರ ಸಾವರ್ಕರ್ ಕೈವಾಡವಿತ್ತು. ಸದನದಲ್ಲಿ ಸಾವರ್ಕರ್ ಫೋಟೋ ಅಳವಡಿಕೆ ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ವೀರ ಸಾವರ್ಕರ್ ಮೊದಲೇ ವಿವಾದಾತ್ಮಕ ವ್ಯಕ್ತಿತ್ವ ಹೊಂದಿದವರು. ಗಾಂಧೀಜಿ ಸಾವಿನಲ್ಲಿ ಸಾವರ್ಕರ್ ಕೈವಾಡವಿದೆ ಎಂದರು.

ಫೋಟೋ ಅಳವಡಿಕೆ ಕಾರ್ಯಕ್ರಮಕ್ಕೆ ನನಗೆ ಆಹ್ವಾನ ಬಂದಿಲ್ಲ. ಈ ವಿಚಾರವನ್ನು ಸರ್ವ ಸದಸ್ಯರ ಗಮನಕ್ಕೆ ತಂದಿಲ್ಲ. ವೀರ ಸಾವರ್ಕರ್ ಗಾಂಧೀಜಿ ಕೊಲೆ ಪ್ರಕರಣದಲ್ಲಿ ​ಇರುವ ವ್ಯಕ್ತಿ ಎಂದು ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ: ವೀರ ಸಾವರ್ಕರ್ ಬಗ್ಗೆ ಅಪಪ್ರಚಾರ ಮಾಡುತ್ತಿರುವುದು ಅಕ್ಷಮ್ಯ ಅಪರಾಧ‌‌: ಬಿ ಎಸ್ ಯಡಿಯೂರಪ್ಪ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.