ETV Bharat / state

ಬೆಳಗಾವಿ ಮಹಾನಗರ ಪಾಲಿಕೆಯ ಮೊದಲ ಕನ್ನಡ ಮೇಯರ್​ ವಿಧಿವಶ

ಬೆಳಗಾವಿ ಮಹಾನಗರ ಪಾಲಿಕೆಯ ಮೊದಲ ಕನ್ನಡ ಮೇಯರ್ ಸಿದ್ದನಗೌಡ ಪಾಟೀಲ (87) ವಿಧಿವಶರಾದ್ದಾರೆ. ಇದರಿಂದ ಗಡಿ ಹೋರಾಟದ ಕೊಂಡಿಯೊಂದು ಕಳಚಿದಂತಾಗಿದೆ.

dsds
ಸಿದ್ದನಗೌಡ ಪಾಟೀಲ ವಿಧಿವಶ
author img

By

Published : Aug 26, 2020, 2:16 PM IST

ಬೆಳಗಾವಿ: ಇಲ್ಲಿನ ಮಹಾನಗರ ಪಾಲಿಕೆಯ ಮೊದಲ ಕನ್ನಡ ಮೇಯರ್ ಸಿದ್ದನಗೌಡ ಪಾಟೀಲ (87) ಶಿವಬಸವನಗರದ ನಿವಾಸದಲ್ಲಿ ಅನಾರೋಗ್ಯದಿಂದ ನಿಧನರಾಗಿದ್ದಾರೆ.

1956 ರಿಂದಲೂ ಕನ್ನಡ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಅವರು 1984 ರಲ್ಲಿ ಬೆಳಗಾವಿ ಪಾಲಿಕೆಯ ಸದಸ್ಯರಾಗಿ ಆಯ್ಕೆಯಾದರು.1990 ರಲ್ಲಿ ಮತ್ತೆ ಪುನರಾಯ್ಕೆಗೊಂಡರು. 1991 ರಲ್ಲಿ ಪ್ರಥಮ ಕನ್ನಡ ಮಹಾಪೌರರಾಗಿ ಆಯ್ಕೆಯಾಗಿದ್ದರು. ಡಿ.ಸಿ.ಸಿ. ಬ್ಯಾಂಕಿನ ನಿರ್ದೇಶಕರಾಗಿ ಮೂರು ಅವಧಿವರೆಗೆ ಸೇವೆ ಸಲ್ಲಿಸಿದ್ದ ಅವರು ಕರ್ನಾಟಕ ಗ್ರಾಹಕರ ಮಹಾಮಂಡಳಿಯ ನಿರ್ದೇಶಕರಾಗಿ 20 ವರ್ಷ ಕಾರ್ಯನಿರ್ವಹಿಸಿದ್ದಾರೆ. ಎರಡೂವರೆ ವರ್ಷ ಮಹಾಮಂಡಳದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.

ನಾಡು, ನುಡಿ, ಗಡಿ ಹೋರಾಟಗಳ ಮುಂಚೂಣಿಯಲ್ಲಿದ್ದ ಅವರು ಇತ್ತೀಚಿನವರೆಗೂ ಹೋರಾಟಗಳಲ್ಲಿ ಭಾಗವಹಿಸುತ್ತಲೇ ಬಂದಿದ್ದರು. ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಪದಾಧಿಕಾರಿಗಳು ಸಿದ್ದನಗೌಡ ಪಾಟೀಲ್​ಗೆ ಅಂತಿಮ ನಮನ ಸಲ್ಲಿಸಿದ್ದಾರೆ.

ಬೈಲಹೊಂಗಲ ತಾಲೂಕಿನ ನೇಸರಗಿ ಗ್ರಾಮದ ಬಳಿಯ ಮಲ್ಲಾಪುರದಲ್ಲಿ ಮೃತರ ಅಂತ್ಯಕ್ರಿಯೆ ಇಂದು ನೆರವೇರಲಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.