ಬೆಂಗಳೂರು : ಮಾಜಿ ಮುಖ್ಯಮಂತ್ರಿ ಶ್ರೀ ಎಸ್.ಎಂ.ಕೃಷ್ಣ ಅವರ ಅಳಿಯ ಕೆಫೆ ಕಾಫಿ ಡೇ ಸಂಸ್ಥಾಪಕ ಹಾಗೂ ಉದ್ಯಮಿ ಸಿದ್ದಾರ್ಥ್ ಅವರ ಸಾವಿಗೆ ಸಿಎಂ ಬಿಎಸ್ ಯಡಿಯೂರಪ್ಪ ಕಂಬನಿ ಮಿಡಿದಿದ್ದಾರೆ.
ಸಿದ್ಧಾರ್ಥ್ ಸಾವು ಆಘಾತ ಹಾಗೂ ಅಪಾರ ನೋವು ತಂದಿದೆ. ಅವರ ಕುಟುಂಬಕ್ಕೆ ದುಃಖ ಸಹಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಬಿಎಸ್ವೈ ಟ್ವೀಟ್ ಮಾಡಿದ್ದಾರೆ.
ಸಿದ್ದಾರ್ಥ್ ಕಳೆದೆ 29ರ ಸಂಜೆಯಿಂದ ನಾಪತ್ತೆಯಾಗಿದ್ದು, ಇಂದು ಬೆಳಗ್ಗೆ ನೇತ್ರಾವತಿ ನದಿಯ ಹಿನ್ನೀರಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.