ETV Bharat / state

ನವರಾತ್ರಿ ಸರಳವಾಗಿ ಆಚರಿಸಿ: ಜಿಲ್ಲಾಧಿಕಾರಿ ಹಿರೇಮಠ - Simple Navaratri festival celebrates in Belgum

ಜಿಲ್ಲೆಯಲ್ಲಿ ಸರಳವಾಗಿ ನವರಾತ್ರಿ ಉತ್ಸವ ಆಚರಣೆ ಮಾಡುವಂತೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಸೂಚಿಸಿದ್ದಾರೆ.

DC meeting
DC meeting
author img

By

Published : Oct 9, 2020, 8:34 PM IST

ಬೆಳಗಾವಿ : ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ನವರಾತ್ರಿ ಹಾಗೂ ಇತರ ಉತ್ಸವಗಳನ್ನು ಸರಳ ಮತ್ತು ಸಾಂಕೇತಿಕವಾಗಿ ಆಚರಿಸುವಂತೆ ಜಿಲ್ಲಾ ಧಾರ್ಮಿಕ ಪರಿಷತ್ತಿನ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಧಾರ್ಮಿಕ ಪರಿಷತ್ತಿನ ಪ್ರಥಮ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಅನ್ ಲಾಕ್-5.0 ರ ಮಾರ್ಗಸೂಚಿಗಳು ಹಾಗೂ ಧಾರ್ಮಿಕ ದತ್ತಿ ಇಲಾಖೆಯ ಸುತ್ತೋಲೆಯಲ್ಲಿ‌ ತಿಳಿಸಿರುವಂತೆ ಸರಳ ಮತ್ತು ಸಾಂಕೇತಿಕವಾಗಿ ನವರಾತ್ರಿ ಆಚರಿಸಲು ದೇವಸ್ಥಾನ ಆಡಳಿತ ಮಂಡಳಿಗಳು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಕೋವಿಡ್ ಸೋಂಕು ಹರಡದಂತೆ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಅತ್ಯಂತ ಕಡಿಮೆ‌ ಸಂಖ್ಯೆಯಲ್ಲಿ ಜನರು‌ ಸೇರಿ ದೇವಸ್ಥಾನದ ಆವರಣದಲ್ಲಿ ಉತ್ಸವ ಆಚರಿಸಬೇಕು ಎಂದರು.

ಖಾಸಗಿ ಸಂಸ್ಥೆಯ ಮೂಲಕ ಜಿಲ್ಲೆಯಲ್ಲಿರುವ ಅಧಿಸೂಚಿತ ದೇವಸ್ಥಾನಗಳ ಬಗ್ಗೆ ಕೂಲಂಕಷವಾಗಿ ಪರಿಶೀಲಿಸಿ ಸಮಗ್ರ ವರದಿಯೊಂದನ್ನು ಸಿದ್ಧಪಡಿಸಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.