ETV Bharat / state

ಕರ್ತವ್ಯನಿರತ ಯೋಧ ಸಾವು: ಅಂತಿಮ ನಮನ ಸಲ್ಲಿಸಿದ ಸಚಿವ ಕಾರಜೋಳ - Death of a duty bound soldier final humility by govindh karajoala

ಕೊಲ್ಲಾಪುರ ಜಿಲ್ಲೆಯ ಯೋಧ ಪ್ರಶಾಂತ್ ಶಿವಾಜಿ ಅವರ ಪಾರ್ಥಿವ ಶರೀರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಸೇರಿದಂತೆ ಹಲವು ಗಣ್ಯರು ಅಂತಿಮ ನಮನ ಸಲ್ಲಿಸಿದರು.

soldier-martyar-final-honor-by-govindh-karajoala
ಕರ್ತವ್ಯನಿರತ ಯೋಧ ಸಾವು: ಅಂತಿಮ‌ ನಮನ ಸಲ್ಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ
author img

By

Published : May 29, 2022, 12:14 PM IST

Updated : May 29, 2022, 2:01 PM IST

ಬೆಳಗಾವಿ: ಸಿಯಾಚಿನ್ ಗ್ಲೇಷಿಯರ್‌ನಲ್ಲಿ ನಡೆಯುತ್ತಿದ್ದ ಆಪರೇಷನ್ ಮೇಘದೂತ ಕಾರ್ಯಾಚರಣೆ ಸಂದರ್ಭದಲ್ಲಿ ಸಾವನ್ನಪ್ಪಿದ ಮರಾಠಾ ಲಘು ಪದಾತಿದಳದ ಯೋಧ ಜಾಧವ ಪ್ರಶಾಂತ ಶಿವಾಜಿ ಅವರ ಪಾರ್ಥಿವ ಶರೀರಕ್ಕೆ ಸಚಿವ ಗೋವಿಂದ ಕಾರಜೋಳ ಸೇರಿದಂತೆ ಅನೇಕ ಗಣ್ಯರು ಅಂತಿಮನಮನ ಸಲ್ಲಿಸಿದರು.

ಕೊಲ್ಲಾಪುರದ ಯೋಧನಿಗೆ ಅಂತಿಮ ನಮನ ಸಲ್ಲಿಸಿದ ಗಣ್ಯರು

ತಾಲೂಕಿನ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬೆಳಿಗ್ಗೆ ಆಗಮಿಸಿದ ಪಾರ್ಥಿವ ಶರೀರವನ್ನು ಬರಮಾಡಿಕೊಳ್ಳಲಾಯಿತು. ಬಳಿಕ ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆ ಗಡಹಿಂಗ್ಲಜ್ ತಾಲ್ಲೂಕಿನ ಬಸರಗಿಯ ಬಿ.ಕೆ.ಗ್ರಾಮಕ್ಕೆ ರಸ್ತೆ ಮೂಲಕ ಕಳುಹಿಸಿಕೊಡಲಾಯಿತು. ಶಾಸಕ ಅನಿಲ್ ಬೆನಕೆ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೇರಿದಂತೆ ಹಲವರು ಅಂತಿಮ ನಮನ ಸಲ್ಲಿಸಿದರು. ಡಿಸಿಪಿ ರವೀಂದ್ರ ಗಡಾದಿ, ಉಪ ವಿಭಾಗಾಧಿಕಾರಿ ರವೀಂದ್ರ ಕರಲಿಂಗಣ್ಣವರ, ಮರಾಠಾ ಲಘುಪದಾತಿ ದಳದ ಅಧಿಕಾರಿಗಳು, ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

ಇದನ್ನೂ ಓದಿ :ಕಾಂಗ್ರೆಸ್‌ ಪಕ್ಷಕ್ಕೆ ಮುಖ್ಯಮಂತ್ರಿ ಚಂದ್ರು ರಾಜೀನಾಮೆ

Last Updated : May 29, 2022, 2:01 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.