ETV Bharat / state

ಅಕ್ಕನ ಪುತ್ರನ ಮದುವೆಗೆ ಬಂದಿದ್ದ ಯೋಧ ಶವವಾಗಿ ಪತ್ತೆ : ಕೊಲೆ ಆರೋಪ - ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಿರೂರ ಗ್ರಾಮದ ಯೋಧ ಸಾವು

ಎರಡು ದಿನಗಳಾದರೂ ಮನೆಗೆ ಬಾರದಿರೋದಕ್ಕೆ ಹುಡುಕಾಟ ನಡೆಸಿದ್ದ ಕುಟುಂಬಸ್ಥರು, ಬಳಿಕ ಮುನವಳ್ಳಿ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. ಆದರೆ, ಇಂದು ಗ್ರಾಮದ ಹೊರ ವಲಯದಲ್ಲಿ ಬಾವಿಯಲ್ಲಿ ಶವ ಪತ್ತೆಯಾಗಿದೆ. ಸ್ಥಳೀಯರು ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ..

Soldier found dead  at well  in belgaum
Soldier found dead at well in belgaum
author img

By

Published : Dec 27, 2021, 2:49 PM IST

ಬೆಳಗಾವಿ : ಸಹೋದರಿಯ ಪುತ್ರನ ಮದುವೆಗೆಂದು ರಜೆ ಮೇಲೆ ಗ್ರಾಮಕ್ಕೆ ಬಂದಿದ್ದ ಯೋಧನನ್ನು ಕೊಲೆಗೈದಿರುವ ಬಗ್ಗೆ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ.

ಎರಡು ದಿನಗಳಿಂದ ಕಣ್ಮರೆಯಾಗಿದ್ದ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಿರೂರ ಗ್ರಾಮದ ಯೋಧ ಈರಪ್ಪ ಪೂಜಾರ (37) ಅವರ ದೇಹ ಅದೇ ಗ್ರಾಮದ ಪಾಳು ಬಿದ್ದ ಬಾವಿಯಲ್ಲಿ ಪತ್ತೆಯಾಗಿದೆ.

ಡಿ.2ರಂದು ಅಕ್ಕನ ಪುತ್ರನ ಮದುವೆಗಾಗಿ ಯೋಧ ರಜೆಗೆ ಬಂದಿದ್ದರು. ಮದುವೆಯ ಆಹ್ವಾನ ಪತ್ರಿಕೆ ನೀಡಲು ಯೋಧ ಈರಪ್ಪ ಡಿ.25ರಂದು ಮನೆಯಿಂದ ಹೋಗಿದ್ದರು.

ಎರಡು ದಿನಗಳಾದರೂ ಮನೆಗೆ ಬಾರದಿರೋದಕ್ಕೆ ಹುಡುಕಾಟ ನಡೆಸಿದ್ದ ಕುಟುಂಬಸ್ಥರು, ಬಳಿಕ ಮುನವಳ್ಳಿ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. ಆದರೆ, ಇಂದು ಗ್ರಾಮದ ಹೊರ ವಲಯದಲ್ಲಿ ಬಾವಿಯಲ್ಲಿ ಶವ ಪತ್ತೆಯಾಗಿದೆ. ಸ್ಥಳೀಯರು ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಅಂತ್ಯಕ್ರಿಯೆ ಮಾಡುವಾಗ ಅಚ್ಚರಿ.. ಕಣ್ತೆರೆದು ಮಾತಾಡಿದ 'ಮೃತ ತಾತ'..!

ತಲೆಗೆ ಬಲವಾಗಿ ಹೊಡೆಯಲಾಗಿದ್ದು, ಕೊಲೆ ಮಾಡಿರುವ ಅನುಮಾನವನ್ನು ಕುಟುಂಬಸ್ಥರು ಹೊರ ಹಾಕಿದ್ದಾರೆ. ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಕುಟುಂಬಸ್ಥರಿಗೆ ಶವ ಹಸ್ತಾಂತರ ಮಾಡಲಾಗಿದೆ.

ಕೊಲೆಗೈದ ಆರೋಪಿಗಳನ್ನು ಶೀಘ್ರವೇ ಬಂಧಿಸಿ ನ್ಯಾಯ ಕೊಡಿಸುವಂತೆ ಕುಟುಂಬಸ್ಥರು ಮನವಿ ಮಾಡಿದ್ದಾರೆ. ಮುನವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈರಪ್ಪ ಪಂಜಾಬಿ‌ನ ಜಲಂಧರ್‌ನಲ್ಲಿ ಭಾರತೀಯ ಸೇನೆಯಲ್ಲಿ ಸೇವೆ‌ ಸಲ್ಲಿಸುತ್ತಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.