ETV Bharat / state

ಬೆಳಗಾವಿ: ತಾಯಿಗೆ ಹೊಡೆದು ಗಾಯಗೊಳಿಸಿದ ತಂದೆಯನ್ನು ಮಚ್ಚಿನಿಂದ ಕೊಲೆಗೈದ ಪುತ್ರ - ಮಗ ತಂದೆಯ ಕೊಲೆ

ತಾಯಿಯ ಮೇಲೆ ತಂದೆ ಮನಬಂದಂತೆ ಹಲ್ಲೆ ನಡೆಸಿದ್ದು, ಇದರಿಂದ ಕೋಪಗೊಂಡಿರುವ ಮಗ ತಂದೆಯನ್ನು ನಿರ್ದಯವಾಗಿ ಕೊಲೆ ಮಾಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

Son Kills His Father in Belagavi
Son Kills His Father in Belagavi
author img

By

Published : Sep 8, 2022, 9:05 AM IST

ಬೆಳಗಾವಿ: ತಾಯಿಯ ಮೇಲೆ ಮನಬಂದಂತೆ ಥಳಿಸಿ ಗಾಯಗೊಳಿಸಿದ ತಂದೆಯನ್ನು ಮಗ ಮಚ್ಚಿನಿಂದ ಕೊಲೆ ಮಾಡಿರುವ ಘಟನೆ ಬೈಲಹೊಂಗಲ ಪಟ್ಟಣದ ಶಿವಾನಂದ ಭಾರತಿ ನಗರದ ಸತ್ಯ ಮಾರ್ಗದಲ್ಲಿ ನಡೆದಿದೆ. ಬೈಲಹೊಂಗಲ ಪಟ್ಟಣದ ರುದ್ರಪ್ಪ ತಳವಾರ (55) ಕೊಲೆಯಾದ ವ್ಯಕ್ತಿ. ಸಂತೋಷ ರುದ್ರಪ್ಪ ತಳವಾರ (30) ಆರೋಪಿಯಾಗಿದ್ದಾನೆ.

ಕ್ಷುಲ್ಲಕ ಕಾರಣಗಳಿಗಾಗಿ ಪತ್ನಿಯೊಂದಿಗೆ ಜಗಳವಾಡಿದ್ದ ರುದ್ರಪ್ಪ, ಪತ್ನಿ ಮಹಾದೇವಿ ಮೇಲೆ ‌ಮನಬಂದಂತೆ ಹಲ್ಲೆಗೈದು ಗಾಯಗೊಳಿಸಿದ್ದಾನೆ. ತಂದೆ-ತಾಯಿ ಜಗಳ ಕೇಳಿ ಹೊರಹೋಗಿದ್ದ ಮಗ ಸಂತೋಷ ಮನೆಗೆ ಬಂದಿದ್ದಾನೆ. ಗಲಾಟೆ ಬಿಡಿಸಿ ಗಾಯಗೊಂಡಿದ್ದ ತಾಯಿಯನ್ನು ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾನೆ.

Son Kills His Father in Belagavi
ಘಟನಾ ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ

ಇದನ್ನೂ ಓದಿ: ಆಸ್ತಿ ವಿವಾದದಲ್ಲಿ ತಂದೆಯನ್ನು ಗುಂಡುಹಾರಿಸಿ ಕೊಂದ ಮಗ

ಆಸ್ಪತ್ರೆ ಬಿಲ್ 1,500 ರೂಪಾಯಿ ಆಗಿದ್ದು ತನ್ನ ಕೈಯಿಂದ 500 ರೂಪಾಯಿ ಕೊಟ್ಟು ಬಾಕಿ 1000 ರೂ. ಹಣವನ್ನು ತಂದೆಯಿಂದ ಕೇಳಲು ಮನೆಗೆ ಬಂದಿದ್ದ. ಆಗ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದಿದೆ. ಕೋಪಗೊಂಡ ಸಂತೋಷ್, ರುದ್ರಪ್ಪನ ಕುತ್ತಿಗೆಗೆ ಮಚ್ಚಿನಿಂದ ಬಲವಾಗಿ ಹೊಡೆದಿದ್ದಾನೆ. ತೀವ್ರ ರಕ್ತಸ್ರಾವದಿಂದ ಬಳಲಿದ ರುದ್ರಪ್ಪ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ.

ರುದ್ರಪ್ಪ ಬೆಂಗಳೂರಿನ ಬಿಎಂಟಿಸಿ ಚಾಲಕನಾಗಿದ್ದು, ಮಹಾದೇವಿ ಮಲ್ಲೂರ ಗ್ರಾಮದ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಅಂತರ್‌ಜಾತಿ ಪ್ರೇಮ ವಿವಾಹವಾಗಿದ್ದ ಕುಟುಂಬಕ್ಕೆ‌ ಓರ್ವ ಮಗ ಮತ್ತು ಮಗಳಿದ್ದಾಳೆ.

ಘಟನಾ ಸ್ಥಳಕ್ಕೆ ಡಿವೈಎಸ್ಪಿ ಶಿವಾನಂದ ಕಟಗಿ, ಸಿಪಿಐಯು.ಎಚ್.ಸಾತೇನಹಳ್ಳಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.