ಬೆಳಗಾವಿ: ಜಿಲ್ಲೆಯ ಸವದತ್ತಿ ತಾಲೂಕಿನ ರೇಣುಕಾ ಯಲ್ಲಮ್ಮಾ ದೇವಸ್ಥಾನದಲ್ಲಿ ಹೊರ ರಾಜ್ಯದ ಭಕ್ತರ ಮೇಲೆ ನಿಗಾ ವಹಿಸಲಾಗಿದೆ ಎಂದು ದೇವಸ್ಥಾನದ ಸಿಇಒ ರವಿ ಕೋಟಾರಗಸ್ತಿ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಉತ್ತರ ಕರ್ನಾಟಕ ಶಕ್ತಿಪೀಠ ಸವದತ್ತಿ ರೇಣುಕಾ ಯಲ್ಲಮ್ಮಾ ದೇವಸ್ಥಾನಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಮಹಾರಾಷ್ಟ್ರ, ಗೋವಾ ಸೇರಿದಂತೆ ಹೊರ ರಾಜ್ಯದಿಂದ ಅನೇಕ ಭಕರು ಆಗಮಿಸುತ್ತಾರೆ. ಕೊರೊನಾ ವೈರಸ್ ಭೀತಿ ಹಿನ್ನೆಲೆ ವಿಶೇಷ ವೈದ್ಯಕೀಯ ತಂಡವನ್ನು ರಚನೆ ಮಾಡಲಾಗಿದೆ ಎಂದರು.
ನೆರೆ ರಾಜ್ಯ ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಇದರಿಂದಾಗಿ ವಿಶೇಷ ವೈದ್ಯಕೀಯ ತಂಡದಿಂದ ಭಕ್ತರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ದೇವಸ್ಥಾನ ಆಡಳಿತ ಮಂಡಳಿ, ಆರೋಗ್ಯ ಇಲಾಖೆಯಿಂದ ಮುಂಜಾಗ್ರತಾ ಕ್ರಮ ವಹಿಸಲಾಗಿದೆ ಎಂದು ಮಾಹಿತಿ ನೀಡಿದರು.