ಬೆಳಗಾವಿ : ಇಂದು ಅಯೋಧ್ಯೆಯಲ್ಲಿ ಐತಿಹಾಸಿಕ ಶ್ರೀರಾಮಮಂದಿರ ನಿರ್ಮಾಣಕ್ಕೆ ಭೂಮಿಪೂಜೆ ನಡೆದ ಹಿನ್ನೆಲೆಯಲ್ಲಿ ಕುಂದಾ ನಗರಿಯಲ್ಲಿ ಛತ್ರಪತಿ ಶಿವಾಜಿ ಮಹಾರಾಜ ಪ್ರತಿಮೆಗೆ ವಿಶೇಷ ಪೂಜೆ ಸಲ್ಲಿಸಲಾಯಿತು.
ವಿವಿಧ ಹಿಂದೂಪರ ಸಂಘಟನೆಗಳ ಸದಸ್ಯರು ನಗರದ ಶಹಾಪೂರ ರಸ್ತೆಯಲ್ಲಿರುವ ಶಿವಾಜಿ ಉದ್ಯಾನವನದಲ್ಲಿನ ಶಿವಾಜಿ ಪ್ರತಿಮೆಗೆ ಕ್ಷೀರಾಭಿಷೇಕ, ಮಂಗಳಾರತಿ ಮಾಡಿ ವಿಶೇಷ ಪೂಜೆ ಸಲ್ಲಿಸಿದರು. ಜೊತೆಗೆ ಸಿಹಿ ಹಂಚಿ ಸಂಭ್ರಮಿಸಲಾಯಿತು.