ಬೆಳಗಾವಿ: ಮಹದಾಯಿ ನ್ಯಾಯಾಧೀಕರಣ ತೀರ್ಪು ಪ್ರಕಟಗೊಂಡು 6 ತಿಂಗಳು ಕಳೆದರೂ ಯೋಜನೆ ಜಾರಿಗೆ ಕ್ರಮ ವಹಿಸದ ರಾಜ್ಯ ಸರ್ಕಾರದ ವಿರುದ್ಧ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದೀಗ ರೈತರಿಗೆ ಕನ್ನಡ ಪರ ಹೋರಾಟಗಾರರು ಕೂಡ ಸಾಥ್ ನೀಡಿದ್ದಾರೆ. ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಕಣಕುಂಬಿ ಗ್ರಾಮಕ್ಕೆ ಕರ್ನಾಟಕ ನವ ನಿರ್ಮಾಣ ಸೇನೆ ರಾಜ್ಯಾಧ್ಯಕ್ಷ ಭೀಮಾಶಂಕರ ಪಾಟೀಲ ಭೇಟಿ ನೀಡಿದ್ದಾರೆ. ಕಳಸಾ ನಾಲಾ ಕಾಮಗಾರಿ ಸ್ಥಳ, ಕಳಸಾ ತಿರುವು ಯೋಜನೆಯ ಸ್ಥಳ ಪರಿಶೀಲನೆ ನಡೆಸಿ, ತಕ್ಷಣ ರಾಜ್ಯ ಸರ್ಕಾರ ಯೋಜನೆ ಜಾರಿಗೆ ಯತ್ನಿಸಬೇಕು. ಇಲ್ಲವಾದಲ್ಲಿ ಹೋರಾಟ ತೀವ್ರಗೊಳಿಸುವ ಎಚ್ಚರಿಕೆ ನೀಡಿದ್ದಾರೆ.