ಚಿಕ್ಕೋಡಿ(ಬೆಳಗಾವಿ) : ಹರಿಹರ ಪೀಠದ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಯವರ ಪೂರ್ವಾಶ್ರಮ ತಂದೆ ದುಂಡಪ್ಪ ಅದೃಶಪ್ಪ ಗೌರಗೊಂಡ (75) ಅವರು ನಿಧನರಾಗಿದ್ದಾರೆ.
ಕಳೆದ ಎಂಟು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಮಹಾರಾಷ್ಟ್ರದ ಮೀರಜ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೆಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.
ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ಸಂಜೆ 5 ಗಂಟೆಗೆ ಅಂತ್ಯ ಸಂಸ್ಕಾರ ನಡೆಯಲಿದೆ. ಅಂತಿಮ ಶವಸಂಸ್ಕಾರದಲ್ಲಿ ವಚನಾನಂದ ಸ್ವಾಮೀಜಿಗಳು ಭಾಗವಹಿಸಲಿದ್ದಾರೆ ಎಂದು ಗೌರಗೊಂಡ ಕುಟುಂಬದ ಆಪ್ತ ವಲಯದವರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ : ಜೋಕರ್ಗಳ ಬಗ್ಗೆ ತಲೆಕೆಡಿಸಿಕೊಳ್ಳಬಾರದು: ಶಾಸಕ ಯತ್ನಾಳ್ಗೆ ವಚನಾನಂದ ಶ್ರೀ ಪರೋಕ್ಷ ಟಾಂಗ್