ETV Bharat / state

ಅಥಣಿಯಲ್ಲಿ ಮುಂಜಾಗ್ರತಾ ಕ್ರಮಗಳೊಂದಿಗೆ ಎಸ್​ಎಸ್​ಎಲ್​ಸಿ ಪರೀಕ್ಷೆ - athani sslc exams latest news

ಪರೀಕ್ಷಾ ಕೇಂದ್ರಕ್ಕೆ ಹಾಜರಾದ ವಿದ್ಯಾರ್ಥಿಗಳಿಗೆ ಆರೋಗ್ಯ ಇಲಾಖೆ ಸಹಾಯದಿಂದ ದೇಹದ ಉಷ್ಣತೆಯ ಪರೀಕ್ಷೆ ನಡೆಸಿ, ನಂತರ ಸ್ಯಾನಿಟೈಸರ್​ ಹಾಗೂ ಮಾಸ್ಕ್ ನೀಡಲಾಯಿತು.

sslc examination in athani
ಆರೋಗ್ಯ ಇಲಾಖೆಯಿಂದ ಥರ್ಮಲ್​ ಸ್ಕ್ಯಾನಿಂಗ್​..
author img

By

Published : Jun 25, 2020, 12:37 PM IST

ಅಥಣಿ: ಕೊರೊನಾತಂಕದ ನಡುವೆಯೂ ತಾಲೂಕಿನಲ್ಲಿ ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯುತ್ತಿದೆ. ಈ ಹಿನ್ನೆಲೆ ಜಿಲ್ಲಾಡಳಿತದ ವತಿಯಿಂದ ಆಯಾ ಪರೀಕ್ಷಾ ಕೇಂದ್ರಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ತಾಲೂಕು ವಲಯದಲ್ಲಿ 21 ಪರೀಕ್ಷಾ ಕೇಂದ್ರಗಳಿದ್ದು, ಈ ಬಾರಿ ಅನಂತಪುರ ಗ್ರಾಮದಲ್ಲಿ ಉಪಕೇಂದ್ರವೊಂದನ್ನು ಆರಂಭಿಸಲಾಗಿದೆ. ಒಟ್ಟು 22 ಕೇಂದ್ರಗಳಲ್ಲಿ 328 ಕೊಠಡಿಗಳಲ್ಲಿ ಆಸನದ ವ್ಯವಸ್ಥೆ ಮಾಡಲಾಗಿದೆ. 3126 ಬಾಲಕರು ಮತ್ತು 2705 ಬಾಲಕಿಯರು ಪರೀಕ್ಷೆ ಬರೆಯುತ್ತಿದ್ದಾರೆ.

ಅಥಣಿಯಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆ

ಪರೀಕ್ಷಾ ಕೇಂದ್ರಕ್ಕೆ ಹಾಜರಾದ ಮಕ್ಕಳಿಗೆ ಆರೋಗ್ಯ ಇಲಾಖೆ ಸಹಾಯದಿಂದ ದೇಹದ ಉಷ್ಣತೆಯ ಪರೀಕ್ಷೆ ನಡೆಸಲಾಯಿತು. ನಂತರ ಸ್ಯಾನಿಟೈಸರ್​ ಹಾಗೂ ಮಾಸ್ಕ್ ನೀಡಲಾಯಿತು.

ಹಾಗೆಯೇ ಗ್ರಾಮೀಣ ಭಾಗದಿಂದ ಪರೀಕ್ಷಾ ಕೇಂದ್ರಗಳಿಗೆ ಬರುವ ಮಕ್ಕಳನ್ನು ಕರೆತರಲು ಉಚಿತ ಸಾರಿಗೆ ವ್ಯವಸ್ಥೆ ಮಾಡಲಾಗಿದ್ದು, ಒಟ್ಟಾರೆಯಾಗಿ ಇದುವರೆಗೂ ತಾಲೂಕಿನ ಯಾವುದೇ ವಿದ್ಯಾರ್ಥಿಗಳಿಗೂ ತೊಂದರೆಯಾಗದಂತೆ ಅಧಿಕಾರಿಗಳು ಅಚ್ಚುಕಟ್ಟಾಗಿ ಕೆಲಸ ನಿರ್ವಹಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.