ಚಿಕ್ಕೋಡಿ: ಕರ್ನಾಟಕ - ಮಹಾರಾಷ್ಟ್ರದ ಗಡಿಯಲ್ಲಿರುವ ಕಾಗವಾಡ ಪಟ್ಟಣದ ಮಲ್ಲಿಕಾರ್ಜುನ ಪ್ರೌಢಶಾಲೆಯಲ್ಲಿ ಈ ಬಾರಿ ಮಹಾರಾಷ್ಟ್ರದ 8 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದಾರೆ.
ಮಹಾರಾಷ್ಟ್ರದಿಂದ ವಿದ್ಯಾರ್ಥಿಗಳು ಎಸ್ಎಸ್ಎಲ್‌ಸಿ ಪರೀಕ್ಷೆಗೆ ಪಾಲಕರ ಜೊತೆ ಆಗಮಿಸಿದ್ದು, ಅಂತಹ ಮಕ್ಕಳಿಗೆ ಸ್ಕ್ರೀನಿಂಗ್ ಮಾಡಿ ಸ್ಯಾನಿಟೈಸರ್ ನೀಡಿ ಪರೀಕ್ಷಾ ಕೇಂದ್ರಗಳಿಗೆ ಕಳುಹಿಸಲಾಯ್ತು. ಕಾಗವಾಡ ಮಲ್ಲಿಕಾರ್ಜುನ ಫ್ರೌಢಶಾಲೆಯಲ್ಲಿ 8 ವಿದ್ಯಾರ್ಥಿಗಳಿಗಾಗಿ ಪ್ರತ್ಯೇಕ ಪರೀಕ್ಷಾ ಕೊಠಡಿ ವ್ಯವಸ್ಥೆ ಕಲ್ಪಿಸಲಾಗಿದೆ. ಆ ವಿದ್ಯಾರ್ಥಿಗಳಿಗೆ ಎನ್-95 ಮಾಸ್ಕ್ ನೀಡಲಾಗಿದೆ. ಪರೀಕ್ಷೆ ಮುಗಿದ ನಂತರವೂ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಕರ್ನಾಟಕ ಗಡಿವರೆಗೂ ಬಸ್ ವ್ಯವಸ್ಥೆ ಕಲ್ಪಿಸಿದೆ.