ETV Bharat / state

ಗೊಂದಲಗಳಿಲ್ಲದೆ ತಳವಾರ ಸಮುದಾಯಕ್ಕೆ ಎಸ್​ಟಿ ಪ್ರಮಾಣಪತ್ರ ನೀಡಿ: ಸಚಿವ ಶ್ರೀನಿವಾಸ್ ಪೂಜಾರಿ

ತಳವಾರ ಸಮುದಾಯಕ್ಕೆ ಎಸ್ಟಿ ಪ್ರಮಾಣ ಪತ್ರ ನೀಡುವಂತೆ ಆಯಾ ತಾಲೂಕಿನ ತಹಶೀಲ್ದಾರ್ ಅವರಿಗೆ ಸೂಚನೆ ನೀಡಲಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ್​ ಪೂಜಾರಿ ಹೇಳಿದ್ದಾರೆ.

st-certificate-will-be-provided-to-talwar-community-says-minister-shrinivas-poojary
ಗೊಂದಲಗಳಿಲ್ಲದೆ ತಳವಾರ ಸಮುದಾಯಕ್ಕೆ ಎಸ್​ಟಿ ಪ್ರಮಾಣ ಪತ್ರ ನೀಡಿ : ಸಚಿವ ಶ್ರೀನಿವಾಸ್ ಪೂಜಾರಿ
author img

By

Published : Nov 13, 2022, 7:18 PM IST

Updated : Nov 13, 2022, 8:21 PM IST

ಅಥಣಿ(ಬೆಳಗಾವಿ): ಕೇಂದ್ರ ಸರ್ಕಾರದ ಸೂಚನೆ, ರಾಜ್ಯ ಸರ್ಕಾರದ ನಿರ್ದೇಶನದಂತೆ ಯಾವುದೇ ಗೊಂದಲಗಳು ಇಲ್ಲದೆ ತಳವಾರ ಸಮುದಾಯಕ್ಕೆ ಎಸ್ಟಿ ಪ್ರಮಾಣಪತ್ರ ನೀಡುವಂತೆ ಆಯಾ ತಾಲೂಕಿನ ತಹಶೀಲ್ದಾರ್ ಅವರಿಗೆ ಸೂಚನೆ ನೀಡಲಾಗಿದೆ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಇಲಾಖೆ ಸಚಿವ ಕೋಟ ಶ್ರೀನಿವಾಸ್​ ಪೂಜಾರಿ ಹೇಳಿದರು.

ಜಿಲ್ಲೆಯ ಅಥಣಿ ಪಟ್ಟಣದಲ್ಲಿ ತಳವಾರ್ ಸಮುದಾಯದ ಸರ್ಕಾರಕ್ಕೆ ಅಭಿನಂದನೆ ಸಮಾವೇಶ ಕಾರ್ಯಕ್ರಮದಲ್ಲಿ ಸಚಿವರಿಂದ 11 ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ಎಸ್​ಟಿ ಪ್ರಮಾಣಪತ್ರ ವಿತರಿಸಲಾಯಿತು.

ಗೊಂದಲಗಳಿಲ್ಲದೆ ತಳವಾರ ಸಮುದಾಯಕ್ಕೆ ಎಸ್​ಟಿ ಪ್ರಮಾಣಪತ್ರ ನೀಡಿ: ಸಚಿವ ಶ್ರೀನಿವಾಸ್ ಪೂಜಾರಿ

ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ತಳವಾರ ಸಮುದಾಯದ ಬಹುದಿನಗಳ ಬೇಡಿಕೆಯಾದ ಮೀಸಲಾತಿಯನ್ನು ಸರ್ಕಾರ ನೀಡಿದೆ. ಜೊತೆಗೆ ಮೀಸಲಾತಿಯನ್ನು ಶೇ.3 ರಿಂದ 7ಕ್ಕೆ ಏರಿಸಿದ್ದು, ಜೊತೆಗೆ ಎಸ್ಟಿ ಪ್ರಮಾಣಪತ್ರ ನೀಡಲಾಗಿದೆ. ಇದರಿಂದಾಗಿ ತಳವಾರ ಸಮುದಾಯದ ಬೇಡಿಕೆಯನ್ನು ಸರ್ಕಾರ ಈಡೇರಿಸಿದೆ ಎಂದು ಹೇಳಿದರು.

ಪಂಚಮಸಾಲಿ ಸಮಾಜದ 2ಎ ಮೀಸಲಾತಿ ವಿಚಾರ : ಅನೇಕ ಸಮುದಾಯದವರು, ತಮ್ಮ ತಮ್ಮ ಭಾವನೆಗಳನ್ನು ಸರ್ಕಾರದ ಮುಂದೆ ಇಟ್ಟಿದ್ದಾರೆ. ಈ ಬಗ್ಗೆ ಸಂದರ್ಭಾನುಸಾರವಾಗಿ ಹಾಗೂ ನ್ಯಾಯಯುತವಾಗಿ ಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದರು.

ಸಚಿವ ಸಂಪುಟ ವಿಸ್ತರಣೆ : ಸಚಿವ ಸಂಪುಟ ವಿಸ್ತರಣೆ ಬಗ್ಗೆ ವ್ಯವಸ್ಥಿತವಾಗಿ ಕೆಲಸವನ್ನು ಮಾಡಲಾಗುತ್ತಿದೆ. ಸಚಿವ ಸಂಪುಟ ಪುನಾರಚನೆ ಸಿಎಂ ಅವರ ಪರಮಾಧಿಕಾರ. ಈ ಬಗ್ಗೆ ಅವರು ತಿರ್ಮಾನ ತೆಗೆದುಕೊಳ್ಳುತ್ತಾರೆ ಎಂದು ತಿಳಿಸಿದರು.

ಇದೇ ವೇಳೆ ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ ಅವರ ಕಾರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅಭಿಮಾನಿಗಳು​ ಮುತ್ತಿಗೆ ಹಾಕಿದ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಎಲ್ಲಾ ಸಮಸ್ಯೆಗಳನ್ನೂ ಪ್ರೀತಿಯಿಂದ ಬಗೆಹರಿಸಲಾಗುವುದು ಎಂದರು.

ಇದನ್ನೂ ಓದಿ : ಕ್ಷೇತ್ರದಲ್ಲಿ ಒಳ್ಳೆ ಕೆಲಸ ಮಾಡದೆ ಬೇರೆ ಕಡೆ ಹೋಗುತ್ತಿದ್ದಾರೆ: ಸಿದ್ದರಾಮಯ್ಯ ಬಗ್ಗೆ ಬಿಎಸ್​ವೈ ವ್ಯಂಗ್ಯ

Last Updated : Nov 13, 2022, 8:21 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.