ಚಿಕ್ಕೋಡಿ(ಬೆಳಗಾವಿ): ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಕುರುಬ ಸಮುದಾಯದ ಎಸ್‌ಟಿ ಮೀಸಲಾತಿ ಹೋರಾಟ ಮತ್ತೆ ಮುನ್ನಲೆಗೆ ಬಂದಿದೆ. ಈ ಹಿನ್ನೆಲೆ ನಾಳೆ ರಾಜಕೀಯ ಪವರ್ ಪಾಯಿಂಟ್ ಬೆಳಗಾವಿ ನಗರದಲ್ಲಿ ಅಖಿಲ ಭಾರತ ರಾಷ್ಟ್ರೀಯ ಕುರುಬ ಸಮುದಾಯದ ಮಹಾಧಿವೇಶನ ಬೃಹತ್ ಸಮಾವೇಶ ಏರ್ಪಡಿಸಲಾಗಿದೆ. ಈ ಸಮಾವೇಶಕ್ಕೆ ದೇಶದ ಮೂಲೆ ಮೂಲೆಗಳಿಂದ ರಾಜಕೀಯ ನಾಯಕರು ಆಗಮಿಸಲಿದ್ದು ಅವರುಗಳ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಎಸ್‌ಟಿ ಮೀಸಲಾತಿ ನೀಡಬೇಕು, ಹಕ್ಕು ಮಂಡನೆ ಮಾಡಲಾಗುವುದು ಎಂದು ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣ್ ರಾಮ ಚಿಂಗಳೆ ಹೇಳಿದರು.
ಅವರು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈಗಾಗಲೇ ಕುಲ ಶಾಸ್ತ್ರೀಯ ಅಧ್ಯಯನ ವರದಿ ಬಸವರಾಜ ಬೊಮ್ಮಾಯಿ ಪಡೆದಿದ್ದರು. ಹೊಸ ಸರ್ಕಾರ ಬಂದ ಬಳಿಕ ಸಂಪುಟ ಒಪ್ಪಿಗೆ ಪಡೆದು ಸಿಎಂ ಸಿದ್ದರಾಮಯ್ಯ ಕೇಂದ್ರಕ್ಕೆ ಸಲ್ಲಿಸಿದ್ದಾರೆ. ಕೇಂದ್ರ ಸರ್ಕಾರ ಇದನ್ನು ಜಾರಿ ಮಾಡಬೇಕೆಂದು ಸಮಾವೇಶ ಮೂಲಕ ಒತ್ತಾಯ ಮಾಡುತ್ತೇವೆ ಎಂದು ಹೇಳಿದರು.
ಆದಷ್ಟು ಬೇಗನೆ ಕೇಂದ್ರ ಸರ್ಕಾರ ಎಸ್‌ಟಿ ಮೀಸಲಾತಿ ಜಾರಿ ಮಾಡಬೇಕೆಂಬುದು ನಮ್ಮ ಮೊದಲನೇ ಬೇಡಿಕೆಯಾಗಿದೆ. ಕಳೆದ 50 ವರ್ಷಗಳಲ್ಲಿ ರಾಜಕೀಯ ರಂಗದಲ್ಲಿ ಕುರುಬ ಸಮುದಾಯಕ್ಕೆ ಪ್ರಾತಿನಿಧ್ಯ ಸಿಕ್ಕಿಲ್ಲ. ಲೋಕಸಭೆ, ರಾಜ್ಯಸಭೆ, ವಿಧಾನ ಪರಿಷತ್‌ನಲ್ಲಿ ಕುರುಬ ಸಮುದಾಯಕ್ಕೆ ಪ್ರಾತಿನಿಧ್ಯ ಸಿಕ್ಕಿಲ್ಲ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕುರುಬ ಸಮುದಾಯಕ್ಕೆ ಟಿಕೆಟ್ ನೀಡಬೇಕು ಬೆಳಗಾವಿ, ಚಿಕ್ಕೋಡಿ ಎರಡು ಲೋಕಸಭಾ ಕ್ಷೇತ್ರ ಪೈಕಿ ಒಂದನ್ನು ಕುರುಬ ಸಮುದಾಯಕ್ಕೆ ನೀಡಬೇಕು ಎಂದು ಅ.3ರಂದು ನಡೆಯುವ ಮಹಾ ಅಧಿವೇಶನದಲ್ಲಿ ಈ ಎರಡು ವಿಚಾರ ಕುರಿತು ಒತ್ತಾಯ ಮಾಡುತ್ತೇವೆ ಎಂದು ಹೇಳಿದರು.
ಬೆಳಗಾವಿ, ಚಿಕ್ಕೋಡಿ ಎರಡು ಕ್ಷೇತ್ರಗಳ ಪೈಕಿ ಒಂದು ಟಿಕೆಟ್ ಕುರುಬ ಸಮುದಾಯಕ್ಕೆ ನೀಡಲಿ: ಬೆಳಗಾವಿ ಜಿಲ್ಲೆಯಲ್ಲಿ ಅತಿ ಹೆಚ್ಚು ಕುರುಬ ಸಮುದಾಯದ ಜನರಿದ್ದಾರೆ, ವಿಧಾನಸಭೆ ಚುನಾವಣೆಯಲ್ಲಿ ಕುರುಬ ಸಮುದಾಯಕ್ಕೆ ಟಿಕೆಟ್ ನೀಡಿಲ್ಲ ಎಂಬ ನೋವಿದೆ. 1972ರಿಂದ ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕದಲ್ಲಿ ವಿಧಾನ ಪರಿಷತ್, ರಾಜ್ಯಸಭಾ ಸ್ಥಾನವು ಕುರುಬ ಸಮುದಾಯಕ್ಕೆ ಪ್ರಾತಿನಿಧ್ಯ ಸಿಕ್ಕಿಲ್ಲ. ಈ ಬಗ್ಗೆ ನಮಗೆ ನೋವಿದೆ ಕಾಂಗ್ರೆಸ್ ಹೈಕಮಾಂಡ್ ಯಾರಿಗೆ ಕೊಡ್ತಾರೋ ಕೊಡಲಿ, ಕುರುಬ ಸಮುದಾಯಕ್ಕೆ ಈ ಬಾರಿ ಲೋಕಸಭಾ ಟಿಕೆಟ್ ನೀಡಲಿ ಎಂದು ಒತ್ತಾಯಿಸಿದರು.
ಎರಡು ದಿನದವರಗೆ ಬೆಳಗಾವಿಯಲ್ಲಿ ಕುರುಬ ಸಮುದಾಯದಿಂದ ಬೃಹತ್ ಸಮಾವೇಶ: ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ಬಳಿಕ ಮೊದಲ ಬಾರಿಗೆ ಕುರುಬ ಸಮಾಜದ ಸಮಾವೇಷ ಇಂದಿನಿಂದ ಆರಂಭವಾಗಿದ್ದು ನಾಳೆ ಬೃಹತ್ ಸಮಾವೇಷ ನಡೆಯಲಿದೆ. ಇದರಲ್ಲಿ ದೇಶದ ಮೂಲೆ ಮೂಲೆಗಳಿಂದ ಸಮುದಾಯದ ಮುಖಂಡರು ಮತ್ತು ರಾಜಕೀಯ ನಾಯಕರು ಆಗಮಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ ಅವರು ಕೂಡ ನಾಳೆ ಅಕ್ಟೋಬರ್ 3ರಂದು ಆಗಮಿಸಲಿದ್ದು ಸಮುದಾಯ ಜನರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕರೆ ನೀಡಿದರು.
ಇದನ್ನೂ ಓದಿ; ನಾಳೆಯಿಂದ ಎರಡು ದಿನ ಬೆಳಗಾವಿಯಲ್ಲಿ ಶಫರ್ಡ್ಸ್ ಇಂಡಿಯಾ ಇಂಟರ್ನ್ಯಾಷನಲ್ ರಾಷ್ಟ್ರೀಯ ಸಮಾವೇಶ