ಚಿಕ್ಕೋಡಿ : ಅಥಣಿ-ದರೂರ ಸೇತುವೆ ಸಂಪೂರ್ಣ ಜಲಾವೃತಗೊಂಡಿದ್ದು, ಸಾರ್ವಜನಿಕರು ಪರದಾಡುವಂತ ಪರಸ್ಥಿತಿ ನಿರ್ಮಾಣವಾಗಿದೆ.
ಈ ಸೇತುವೆ ಮೇಲೆ ಪ್ರತಿದಿನ ಸಾವಿರಾರು ವಾಹನಗಳು ಸಂಚರಿಸುತ್ತಿದ್ದು, ಈ ಸೇತುವೆ ಬಂದ್ ಆಗಿದ್ದರಿಂದ ಅಥಣಿ ತಾಲೂಕಿನ ದರೂರ ಸೇತುವೆ ಮುಳುಗಡೆ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ.
ಪೊಲೀಸ್ ಸಿಬ್ಬಂದಿ ಬ್ಯಾರಿಕೇಡ್ ಹಾಕಿ ಹಗಲು ರಾತ್ರಿ ಕಾಯುತ್ತಿದ್ದು, ಯಾವುದೇ ಅಹಿತಕರ ಘಟನೆ ಆಗದಂತೆ ಬಿಗಿ ಬಂದೋಬಸ್ತ್ ಒದಗಿಸಲಾಗಿದೆ.
ಚಿಕ್ಕೋಡಿ ಉಪವಿಭಾಗದಲ್ಲಿ ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳು ಬಂದ್‌ನ ವಿವರ :
- ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
- ಜತ್ತ-ಜಾಂಬೋಟಿ ರಾಜ್ಯ ಹೆದ್ದಾರಿ ಬಂದ್
- ಸಂಕೇಶ್ವರ-ಜೇವರ್ಗಿ ರಾಜ್ಯ ಹೆದ್ದಾರಿಗಳು ಕಟ್
- ಬಾಗಲಕೋಟೆ-ಮಹಾರಾಷ್ಟ್ರ ಸಂಪರ್ಕಿಸುವ ರಾಯಭಾಗ ತಾಲೂಕಿನ ಕುಡಚಿ ರಾಜ್ಯ ಹೆದ್ದಾರಿ ಬಂದ್
ಚಿಕ್ಕೋಡಿ ತಾಲೂಕಿನ ಮಾಂಜರಿ ಸೇರಿದಂತೆ ಹಲವೆಡೆ ರಸ್ತೆಗಳ ಮೇಲೆ ನೀರು ಹರಿಯುತ್ತಿದೆ . ಹೀಗೆ ಹಲವಾರು ಸಂಪರ್ಕ ಸೇತುವೆಗಳು ಬಂದ್ ಆಗಿವೆ.