ETV Bharat / state

ಹಿರೇಬಾಗೇವಾಡಿಯಲ್ಲೇ ರಾಣಿ ಚನ್ನಮ್ಮ ವಿವಿ ನೂತನ ಕ್ಯಾಂಪಸ್​ ನಿರ್ಮಾಣ - ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಅನುಷ್ಠಾನ ಸುದ್ದಿ

ಇಂದು ಬೆಳಗಾವಿಗೆ ಭೇಟಿ ನೀಡಿದ್ದ ಡಿಸಿಎಂ ಅಶ್ವತ್ಥ್​ ನಾರಾಯಣ್, ಹಿರೇಬಾಗೇವಾಡಿ ಗ್ರಾಮದ ಹೊರವಲಯದ ಬಳಿ ಮಂಜೂರು ಮಾಡಲಾಗಿರುವ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಜಮೀನನ್ನು ಪರಿಶೀಲಿಸಿದ್ರು, ಇದೇ ವೇಳೆ ವಿವಿ ನಿರ್ಮಾಣಕ್ಕೆ ರಾಜ್ಯಸರ್ಕಾರ ಮೊದಲ ಹಂತದಲ್ಲಿ 100 ಕೋಟಿ ರೂಪಾಯಿ ಅನುದಾನ ಒದಗಿಸಲಿದೆ ಎಂದು ತಿಳಿಸಿದ್ರು.

state government grants 100 crores for Rani chennamma university
ಬೆಳಗಾವಿ
author img

By

Published : Oct 24, 2020, 5:31 PM IST

ಬೆಳಗಾವಿ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ನೂತನ ಕ್ಯಾಂಪಸ್ ಅನ್ನು ಹಿರೇಬಾಗೇವಾಡಿಯಲ್ಲಿಯೇ ಸ್ಥಾಪಿಸಲು ಸರ್ಕಾರ ನಿರ್ಧರಿಸಿದ್ದು, ಮೊದಲ ಹಂತದಲ್ಲಿ ನೂರು ಕೋಟಿ ರೂಪಾಯಿ ಒದಗಿಸಲಾಗುವುದು ಎಂದು ಉಪ ಮುಖ್ಯಮಂತ್ರಿಗಳೂ ಆಗಿರುವ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ್​ ನಾರಾಯಣ ಹೇಳಿದರು.

ಬೆಳಗಾವಿ

ತಾಲೂಕಿನ ಹಿರೇಬಾಗೇವಾಡಿ ಗ್ರಾಮದ ಹೊರವಲಯದ ಬಳಿ ಮಂಜೂರು ಮಾಡಲಾಗಿರುವ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಜಮೀನನ್ನು ಪರಿಶೀಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ಈಗಾಗಲೇ 127 ಎಕರೆ ಜಮೀನು ಮಂಜೂರು ಮಾಡಲಾಗಿದೆ. ಇಲ್ಲಿ ಅಕಾಡೆಮಿಕ್ ಮತ್ತು ಆಡಳಿತ ಕೇಂದ್ರ ಎರಡೂ ಕಾರ್ಯನಿರ್ವಹಿಸಲಿವೆ. ಸ್ಥಳೀಯ ರೈತರು ಸ್ವ ಇಚ್ಛೆಯಿಂದ ಜಮೀನು ನೀಡಲು ಮುಂದಾದರೆ ಮಾತ್ರ ಖರೀದಿಸಲಾಗತ್ತದೆ. ಆದರೆ ಜಮೀನು ನೀಡುವಂತೆ ಯಾರನ್ನೂ ಒತ್ತಾಯಿಸುವುದಿಲ್ಲ. ಶಿಕ್ಷಣ ವ್ಯವಸ್ಥೆ ಅಭಿವೃದ್ಧಿಗೆ ಎಲ್ಲರೂ ಸಹಕರಿಸಬೇಕು ಎಂದರು.

ಸರ್ಕಾರ ಮಂಜೂರು ಮಾಡಿರುವ ಜಮೀನಿನ ಕುರಿತು ಸಚಿವರಿಗೆ ಮಾಜಿ ಶಾಸಕ ಸಂಜಯ ಪಾಟೀಲ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಸಚಿವರ ಜತೆ ಚರ್ಚೆ ನಡೆಸಿದ ಹಿರೇಬಾಗೇವಾಡಿ ಗ್ರಾಮಸ್ಥರು, ವಿಶ್ವವಿದ್ಯಾಲಯ ಸ್ಥಾಪನೆಗೆ ಅಗತ್ಯವಿರುವ ಹೆಚ್ಚುವರಿ ಜಮೀನು ನೀಡಲು ಸಿದ್ಧವಾಗಿರುವುದಾಗಿ ತಿಳಿಸಿದರು.

ಬಹುಗ್ರಾಮ ಕುಡಿಯುವ ನೀರಿನ ಯೋಜನೆ- ಪರ್ಯಾಯ ಸ್ಥಳದ ಸಾಧ್ಯತೆ:

ವಿಶ್ವ ವಿದ್ಯಾಲಯದ ಸ್ಥಾಪನೆಗೆ ನಿಗದಿಪಡಿಸಿರುವ ಸ್ಥಳದಲ್ಲಿಯೇ ನಡೆಯುತ್ತಿರುವ ಬಹುಗ್ರಾಮ ಕುಡಿಯುವ ನೀರು ಯೋಜನೆ ರದ್ದಾಗುವುದಿಲ್ಲ. ಆದ್ರೆ, ಪರ್ಯಾಯ ವ್ಯವಸ್ಥೆಯ ಬಗ್ಗೆ ಪರಿಶೀಲಿಸಲು ಅವಕಾಶಗಳಿವೆ ಎಂದರು. ಅದೇ ರೀತಿ ಕಿತ್ತೂರಿನಲ್ಲಿ ಕೂಡ ಇತರೆ ಅಗತ್ಯ ಅಭಿವೃದ್ಧಿ ಕೆಲಸಗಳನ್ನು ಮಾಡಲಾಗುವುದು. ಈ ಭಾಗದಲ್ಲಿ ಇನ್ನೂ ಹೆಚ್ಚಿನ ಶೈಕ್ಷಣಿಕ ಪ್ರಗತಿಗೆ ಕ್ರಮ‌ಕೈಗೊಳ್ಳಲಾಗುವುದು. ಎಲ್ಲ ಬಗೆಯ ಶೈಕ್ಷಣಿಕ ಕೋರ್ಸ್ ಆರಂಭಿಸುವ ಮೂಲಕ ಸರ್ವಾಂಗೀಣ ಅಭಿವೃದ್ಧಿಗೆ ಸಂಕಲ್ಪ ಮಾಡಲಾಗಿದೆ. ಪ್ರಸ್ತಾವಿತ ಜಮೀನಿನಲ್ಲಿ ಇರುವ ಮಲ್ಲಯ್ಯಜ್ಜನ ದೇವಸ್ಥಾನವನ್ನು ಖಂಡಿತವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಗ್ರಾಮಸ್ಥರಿಗೆ ಭರವಸೆ ನೀಡಿದರು.

ಕಾಲೇಜು ಆರಂಭ ಹಿನ್ನೆಲೆ ಎಲ್ಲ ಸುರಕ್ಷತಾ ಕ್ರಮ:

ಕೋವಿಡ್ ಹಿನ್ನೆಲೆಯಲ್ಲಿ ಸ್ವ-ಇಚ್ಛೆಯಿಂದ ಬರುವ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ಕಲ್ಪಿಸಿ‌ ಕಾಲೇಜುಗಳನ್ನು ಆರಂಭಿಸಲಾಗುತ್ತಿದೆ. ಆನ್​ಲೈನ್ ಶಿಕ್ಷಣ ಮುಂದುವರಿಯಲಿದ್ದು, ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಎಲ್ಲ ಬಗೆಯ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ್​ ನಾರಾಯಣ ತಿಳಿಸಿದರು.

ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ರಾಮಚಂದ್ರಗೌಡ, ಕುಲಸಚಿವ ಪ್ರೊ. ಬಸವರಾಜ ಪದ್ಮಶಾಲಿ, ಪ್ರೊ. ಎಸ್.ಎಂ.ಹುರಕಡ್ಲಿ, ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ಡಾ. ಆನಂದ ಹೊಸೂರ, ಎಚ್.ಎಸ್. ಶಿಗ್ಗಾಂವ ಮತ್ತಿತರರು ಉಪಸ್ಥಿತರಿದ್ದರು.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.